Connect with us

  BANTWAL

  ಬಂಟ್ವಾಳ ಪುರಸಭೆ ಸಾಮಾನ್ಯ ಸಭೆಯಲ್ಲಿ ಸಿಸಿ ಕ್ಯಾಮೆರಾದ್ದೇ ಚರ್ಚೆ-ಗುತ್ತಿಗೆದಾರರನ್ನೇ ಹೊರ ಕಳಿಸಿದ ಸದಸ್ಯರು….!

  Published

  on

  ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮರಾಗಳ ಕಾರ್ಯ ನಿರ್ವಹಣೆ ಕುರಿತಂತೆ ಲೋಕಾಯುಕ್ತಕ್ಕೆ ವರದಿ ತರಿಸಲು ಸೋಮವಾರ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.


  ಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಪುರಸಭಾ ವ್ಯಾಪ್ತಿಯಲ್ಲಿ ಅಳವಡಿಸಿಲಾದ ಸಿ.ಸಿ.ಕ್ಯಾಮರಾಗಳ ಲೆಕ್ಕ ಎಷ್ಟು? ಅವುಗಳ ಸ್ಥಿತಿ ಗತಿ ಹೇಗಿದೆ? ಎಷ್ಟು ಸಿ.ಸಿ.ಕ್ಯಾಮರಾಗಳು ಕಾರ್ಯ ನಿರ್ವಹಿಸುತ್ತವೆ? ಎಂಬಿತ್ಯಾದಿ ಸ್ಪಷ್ಟ ಮಾಹಿತಿ ನೀಡುವಂತೆ ಒತ್ತಾಯಿಸಿದರು ಹಾಗೂ ಸಂಪೂರ್ಣ ಮಾಹಿತಿ ನೀಡುವರೆಗೆ ನಾವು ಸಭೆಯಲ್ಲಿ ನಿಂತುಕೊಂಡೆ ಇರುತ್ತವೆ ಎಂದು ಪಟ್ಟು ಹಿಡಿದರು.

  ಈ ವೇಳೆ ಸಿ.ಸಿ.ಕ್ಯಾಮರಾಗಳ ಸರ್ವೀಸ್ ನೀಡುವ ಗುತ್ತಿಗೆದಾರರು ಸಭೆಗೆ ಆಗಮಿಸಿ ಸ್ಪಷ್ಟನೆ ನೀಡುವ ಬದಲು ಏರು ಸ್ವರದಲ್ಲಿ ಮಾತನಾಡಿದಾಗ ಕೋಪಗೊಂಡ ಸದಸ್ಯರು ಗುತ್ತಿಗೆದಾರರನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಸಿ.ಸಿ.ಕ್ಯಾಮರಾಗಳ ಕಾರ್ಯ ನಿರ್ವಹಣೆ ಬಗ್ಗೆ ಲೋಕಾಯುಕ್ತಕ್ಕೆ ಬರೆದು ವರದಿ ತರಿಸಲಾಗುವುದು ಎಂದು ಅಧ್ಯಕ್ಷರು ಸಭೆಗೆ ತಿಳಿಸಿದ ಬಳಿಕ ಅದುವರೆಗೆ ನಿಂತು ಕೊಂಡೇ ಇದ್ದ ಪ್ರತಿ ಪಕ್ಷ ಸದಸ್ಯರು ತಮ್ಮ ಆಸನಗಳಲ್ಲಿ ಕುಳಿತುಕೊಂಡರು.


  ಸಭೆಯ ಕಲಾಪದ ಸುಮಾರು ಆರ್ಧದಷ್ಟು ಸಮಯವನ್ನು ಸಿ.ಸಿ.ಕ್ಯಾಮರಾ ಚರ್ಚೆ ನುಂಗಿ ಹಾಕಿತು. ಜಕ್ರಿಬೆಟ್ಟು- ನರಿಕೊಂಬು ಸಂಪರ್ಕ ಸೇತುವೆ ರಸ್ತೆ ಹಾಗೂ ಅಣೆಕಟ್ಟು ನಿರ್ಮಾಣ ಕಾಮಗಾರಿಯಿಂದಾಗಿ ಜಕ್ರಿಬೆಟ್ಟುವಿನಿಂದ ಎ.ಎಮ್.ಆರ್.ಡ್ಯಾಂ ವರೆಗೆ ಸುಮಾರು 4 ಮೀಟರ್ ನೀರು ಶೇಖರಣೆ ಆಗಿ ಸಮಸ್ಯೆ ಉಂಟಾಗಿರುವುದು, ಕುಡಿಯುವ ನೀರಿನ ಟ್ಯಾಂಕ್ನ ಸ್ವಚ್ಛತೆ, ಕೈಕುಂಜೆ ರಸ್ತೆಯಲ್ಲಿ ಅತಿಕ್ರಮಣ, ರಾಜಕಾಲುವೆ ಒತ್ತುವರಿ, ಬೀದಿ ವ್ಯಾಪಾರ ತೆರವು ಮತ್ತು ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

   

  Click to comment

  Leave a Reply

  Your email address will not be published. Required fields are marked *

  BANTWAL

  ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

  Published

  on

  ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

  ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

  ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

  ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

  Continue Reading

  BANTWAL

  ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

  Published

  on

  ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

  ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

  Continue Reading

  BANTWAL

  ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

  Published

  on

  ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

  ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

  ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

  Continue Reading

  LATEST NEWS

  Trending