Thursday, September 29, 2022

ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ;ಜಗದೀಶ್ ಅಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಬಿಲ್ಲವ ಸಂಘದಿಂದ ಪೊಲೀಸ್ ಠಾಣೆಗೆ ದೂರು..

ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ;ಜಗದೀಶ್ ಅಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಬಿಲ್ಲವ ಸಂಘದಿಂದ ಪೊಲೀಸ್ ಠಾಣೆಗೆ ದೂರು..!

Disgraced statement of the Billava community;

ಮೂಡಬಿದಿರೆ:ತುಳುನಾಡಿನ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ಹಾಗೂ ಹಿರಿಯ ರಾಜಕಾರಣಿ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೂಡುಬಿದಿರೆ ಬಿಲ್ಲವ ಸಂಘದ ವಿವಿಧ ಘಟಕಗಳ ಮುಖಂಡರು ನಿನ್ನೆ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಇತಿಹಾಸವನ್ನು ತಿರುಚಿ ಕೀಳಾಗಿ ಮಾತನಾಡಿದ್ದು ಹಾಗೂ ಕೇಂದ್ರ ಮಾಜಿ ಸಚಿವ ಜನಾರ್ಧನ ಪೂಜಾರಿ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿ ಬಿಲ್ಲವ ಸಮಾಜದವರ ಮನಸ್ಸಿಗೆ ಘಾಸಿ ಉಂಟುಮಾಡಿದ್ದಾರೆ.

ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗಿ  ಬಿಲ್ಲವರ ಬಗ್ಗೆ  ಸಮಾಜಕ್ಕೆ ಕೆಟ್ಟ ಸಂದೇಶವನ್ನು ನೀಡಿದಂತಾಗಿದೆ. ಆದ್ದರಿಂದ ಜಗದೀಶ್ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ನೀಡಿದ ಲಿಖಿತ ದೂರಿನಲ್ಲಿ ಆಗ್ರಹಿಸಲಾಗಿದೆ.

ಬಿಲ್ಲವ ಸಂಘದ ಅಧ್ಯಕ್ಷ ಪಿ.ಕೆ ರಾಜು ಪೂಜಾರಿ, ಸಂಘದ ಪದಾಧಿಕಾರಿಗಳು, ಬಿಲ್ಲವ ಸಂಘದ ಮಹಿಳಾ ಘಟಕ, ಸೇವಾದಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...