DAKSHINA KANNADA
ಮಂಗಳೂರು ವಿವಿ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ- ಎಬಿವಿಪಿ ಒತ್ತಾಯ
Published
10 months agoon
By
Adminಮಂಗಳೂರು: ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉದ್ಯೋಗಿಗಳ ನೇಮಕಾತಿ ಪ್ರಕರಣದಲ್ಲಿ ಕೈಜೋಡಿಸಿದ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು, ಪರೀಕ್ಷಾಂಗ ಕುಲಸಚಿವರನ್ನು ಅಮಾನತುಗೊಳಿಸಬೇಕು ಹಾಗೂ ಪ್ರಭಾರ ಕುಲಪತಿ ರಾಜಿನಾಮೆ ನೀಡಬೇಕು, ರಾಜ್ಯ ಸರ್ಕಾರ ಕೂಡಲೇ ಕುಲಪತಿಗಳನ್ನು ನೇಮಿಸಬೇಕು ಎಂದು ಎಬಿವಿಪಿ ಮಂಗಳೂರು ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಾವಿಪ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀರಾಮ್ ಅಂಗೀರಸ, ಗೊಂದಲದ ಗೂಡಾಗಿರುವ ವಿವಿಯಲ್ಲಿ ಶೈಕ್ಷಣಿಕ ಚಟುವಟಿಕೆ ಸುಗಮವಾಗಿ ನಡೆಯಲು ಸರಕಾರ ಗಮನ ಹರಿಸದೇ ಇದ್ದರೆ ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳನ್ನು ಸೇರಿಸಿ ವಿವಿ ಚಲೋ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಕೋಚಿಮುಲ್ ಅವ್ಯವಹಾರಕ್ಕೆ ಸಂಬಂಧಿಸಿ ಜ.18ರಂದು ಮಂಗಳೂರು ವಿವಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯೋಗಿಗಳ ನೇಮಕಾತಿಗೆ ಪ್ರಶ್ನೆಪತ್ರಿಕೆ ಸಿದ್ಧತೆ, ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿಯನ್ನು ಮಂಗಳೂರು ವಿವಿ ವಹಿಸಿಕೊಂಡಿತ್ತು. ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜು ಚೆಲ್ಲಣ್ಣನವರ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದರು. ಅವರ ಮೇಲೆ ಪ್ರಶ್ನೆ ಪತ್ರಿಕೆ ಮಾರಾಟ ಆರೋಪ ಇದ್ದು, ಇಡಿ ತಂಡದ ದಾಳಿ ಹಿನ್ನೆಲೆಯಲ್ಲಿ ಪ್ರೊ.ರಾಜು ಚೆಲ್ಲಣ್ಣನವರ್ ಹಾಗೂ ಕುಲಪತಿಗಳನ್ನು ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದರು. ವಿವಿ ಅಧಿಕಾರಿಗಳ ಅಸಮರ್ಪಕ ಕಾರ್ಯನಿರ್ವಹಣೆಯಿಂದ ಪರೀಕ್ಷಾ ನಿರ್ವಹಣೆಯಲ್ಲಿ ಎಡವಿದೆ. ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ, ವಿದೇಶಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ವಿವಿ ಬಗ್ಗೆ ಇರದ ಆಸಕ್ತಿ ಹೊರಗಿನ ಪರೀಕ್ಷೆ ನಡೆಸಲು ಇರುವುದು ಖೇದಕರ ಎಂದರು. ಕಳೆದ ಏಳು ತಿಂಗಳಿಂದ ಖಾಯಂ ಕುಲಪತಿಗಳ ನೇಮಕವಾಗಿಲ್ಲ. ಸಿಂಡಿಕೇಟ್ ಸದಸ್ಯರನ್ನು ನೇಮಿಸಲು ಹಾತೊರೆಯುವ ಸರ್ಕಾರ ಕುಲಪತಿ ನೇಮಕದ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ಅನಿಶ್ಚಿತತೆ ತಲೆದೋರಿದೆ. ಘಟಿಕೋತ್ಸವ ಸಮೀಪಿಸುತ್ತಿದ್ದು, ಕುಲಪತಿ, ಕುಲಸಚಿವರು ರಜೆಯಲ್ಲಿದ್ದಾರೆ. ಹೀಗಾಗಿ ಮುಖ್ಯ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೇ ಕುಲಪತಿ ನೇಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ರಾಜ್ಯ ಸಹ ಕಾರ್ಯದರ್ಶಿ ಹರ್ಷಿತ್ ಕೊಯ್ಲ, ಆದಿತ್ಯ, ನಿಶಾನ್ ಆಳ್ವ, ಶ್ರೇಯಸ್ ಉಪಸ್ಥಿತರಿದ್ದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
24 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ