Friday, August 12, 2022

ನೈಟ್‌ ಕರ್ಫ್ಯೂ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಉಳ್ಳಾಲ ಠಾಣೆಯಲ್ಲಿ FIR ದಾಖಲು

ಮಂಗಳೂರು: ನಿಷೇಧಾಜ್ಞೆ ಜೊತೆ ನೈಟ್‌ ಕರ್ಫ್ಯೂ ವೇಳೆ ಕನ್ನಡಕ ಮಾರಾಟದ ಅಂಗಡಿ ತೆರೆದು ಅದನ್ನು ಮುಚ್ಚಲು ಹೇಳಿದ ಪೊಲೀಸ್‌ ಸಿಬ್ಬಂದಿಯ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.


ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಸೆಕ್ಷನ್‌ 144 ಅನ್ವಯ ನಿಷೇಧಾಜ್ಞೆ ಹೊರಡಿಸಿದ್ದರು. ಜೊತೆಗೆ ನೈಟ್‌ ಕರ್ಪ್ಯೂ ಹೇರಿದ್ದರು.

ಈ ಹಿನ್ನೆಲೆಯಲ್ಲಿ ಆ.4 ರಂದು ಸಂಜೆ 6 ಗಂಟೆಗೆ ಉಳ್ಳಾಲ ಠಾಣಾ ಪಿಎಸ್ಐ ರೇವಣ ಸಿದ್ಧಪ್ಪ ಅವರು ಸಿಬ್ಬಂದಿ ರೌಂಡ್ಸ್ ಹೋಗುತ್ತಿದ್ದ ಸಂದರ್ಭ ಸಂಜೆ 6.15ಕ್ಕೆ ಮಾಸ್ತಿಕಟ್ಟೆಯ ಬಳಿಗೆ ತಲುಪಿದಾಗ ಅಲ್ಲಿರುವ EYE TO EYE OPTICALS ಎಂಬ ಕನ್ನಡಕ ಮಾರಾಟದ ಅಂಗಡಿಯನ್ನು ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.

ಈ ವೇಳೆ ಅದನ್ನು ಮುಚ್ಚುವಂತೆ ತಿಳಿಸಿದಾಗ ಅಲ್ಲಿನ ಸಿಬ್ಬಂದಿ ಉಡಾಫೆ ಮಾತನಾಡಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

ಜೊತೆಗೆ ಅಂಗಡಿ ಮಾಲಕ ಶಬೀಲ್ ಅಹಮ್ಮದ್ ಪೊಲೀಸ್‌ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ಬೈದು ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುತ್ತಾರೆ ಎಂಬ ದೂರಿನನ್ವಯ ಉಳ್ಳಾಲ ಪೊಲೀಸ್‌ ಠಾಣೇಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

‘ಕಾಡು ಕುದುರೆ ಓಡಿ ಬಂದಿತ್ತಾ’ ಖ್ಯಾತಿಯ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. 'ಕಾಡುಕುದುರೆ' ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು....

“ಸ್ವಾತಂತ್ರ್ಯ ಬಂದು 75 ವರ್ಷವಾದರೂ ಲೋಕಾಯುಕ್ತ ಬೆಂಬಲಿಸುವ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ”

ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.ಬೆಂಗಳೂರು ವಕೀಲರ...

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...