Connect with us

DAKSHINA KANNADA

ಮೂಡುಬಿದಿರೆ: ಶಾಲೆ ಗೋಡೆ ಕಾಮಗಾರಿಗೆ ಅಡ್ಡಿ-PDO ವಿರುದ್ಧ ಸಾರ್ವಜನಿಕರ ಆಕ್ರೋಶ

Published

on

ಮೂಡುಬಿದಿರೆ: ಪಡುಮಾರ್ನಾಡು ಪಂಚಾಯಿತಿ ವ್ಯಾಪ್ತಿಯ ಅಚ್ಚರಕಟ್ಟೆ ಸರ್ಕಾರಿ ಶಾಲೆಯ ಆವರಣಗೋಡೆ ನಿರ್ಮಾಣಕ್ಕೆ ಪಂಚಾಯತ್ ಸದಸ್ಯರೊಬ್ಬರು ಅಡ್ಡಿಪಡಿಸಿರುವುದು, ಸ್ಮಶಾನಕ್ಕೆ ಜಾಗ ಮಂಜೂರಾಗದೆ ಕಾಮಗಾರಿಯನ್ನು ಪೂರ್ಣಗೊಳಿಸಿರುವುದರ ವಿರುದ್ಧ ನಿನ್ನೆ ನಡೆದ ಪಡುಮಾರ್ನಾಡು ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.


ಅಚ್ಚರಕಟ್ಟೆ ಶಾಲೆಯ ಆವರಣ ಗೋಡೆಯ ನಿರ್ಮಾಣಕ್ಕೆ ಸದಸ್ಯರೊಬ್ಬರು ಜಾಗದ ಕೊರತೆ ತೋರಿಸಿ ಕಾಮಗಾರಿಯನ್ನು ಸ್ಥಗಿತಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಉಳಿದ ಪಂಚಾಯಿತಿ ಸದಸ್ಯರು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಗ್ರಾಮಸ್ಥರಾದ ಸೂರಜ್ ಜೈನ್, ದಯಾನಂದ ಹೆಗ್ಡೆ, ದಿವ್ಯವರ್ಮ ಬಲ್ಲಾಳ್ ಮತ್ತಿತರರು ಒತ್ತಾಯಿಸಿದರು.

ಅಚ್ಚರಕಟ್ಟೆ ಶಾಲೆಯಲ್ಲಿ 2 ಎಕರೆಗೂ ಹೆಚ್ಚಿನ ಜಾಗ ಇರುವುದಾಗಿ ಪಹಣಿ ಪತ್ರದಲ್ಲಿ ನಮೂದಿಸಲಾಗಿದ್ದರೂ ಸದಸ್ಯ ಮಹಮ್ಮದ್ ಅಸ್ಲಾಂರವರು ಕೇವಲ 70 ಸೆಂಟ್ಸ್ ಜಾಗ ಇರುವುದಾಗಿ ಆರೋಪಿಸಿ ಉಳಿದ ಸರ್ಕಾರಿ ಜಾಗದಲ್ಲಿ ಆವರಣಗೋಡೆ ನಿರ್ಮಿಸಲಾಗುತ್ತಿದೆ ಎಂಬ ಕಾರಣವೊಡ್ಡಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಪಂಚಾಯಿತಿ ಒಂಬುಡ್ಸುಮೆನ್ ತನಿಖೆ ಕೈಗೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ದೂರುದಾರ ಪಂಚಾಯಿತಿ ಸದಸ್ಯರು ತಮ್ಮ ದೂರನ್ನು ವಾಪಸ್ಸು ಪಡೆಯದೆ ಈ ಪ್ರಕರಣವನ್ನು ಅಂತ್ಯಗೊಳಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಸೌಹಾರ್ದ ಮಾತುಕತೆಗೆ ಉಳಿದ ಗ್ರಾಮಸ್ಥರು ಸಲಹೆ ನೀಡಿದರು.

ಪಂಚಾಯಿತಿ ಉಪಾಧ್ಯಕ್ಷ ಅಭಿನಂದನ್ ಬಳ್ಳಾಲ್ ಹಾಗೂ ಮಹಮ್ಮದ್ ಅಸ್ಲಾಂ ಗ್ರಾಮಸಭೆಗೆ ಗೈರಾಗಿ ಶಿರ್ತಾಡಿ ಪ್ರತಿಭಟನೆಯೊಂದರಲ್ಲಿ ಪಾಲ್ಗೊಂಡಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಪಂ ಅಧ್ಯಕ್ಷೆ ಕಲ್ಯಾಣಿ ಅಧ್ಯಕ್ಷತೆ ವಹಿಸಿದರು.

ಕೃಷಿ ನಿರ್ದೇಶಕ ಪ್ರವೀಣ್ ಕೆ. ನೋಡಲ್ ಅಧಿಕಾರಿಯಾಗಿದ್ದರು. ಪಿಡಿಒ ಬೀಮ ನಾಯ್ಕ್ ಸಹಿತ ವಿವಿಧ ಇಲಾಖೆ ಅಧಿಕಾರಿಗಳು, ಸದಸ್ಯರು ಭಾಗವಹಿಸಿದರು.

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending