Connect with us

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೂರವಾದ ಮಳೆ- ಜೂನ್ 4ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ..!

Published

on

ನೈಋತ್ಯ ಮಾನ್ಸೂನ್ ಈ ಬಾರಿ ವಿಳಂಬವಾಗಲಿದ್ದು, ಜೂ.4ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

ಮಂಗಳೂರು:ನೈಋತ್ಯ ಮಾನ್ಸೂನ್ ಈ ಬಾರಿ ವಿಳಂಬವಾಗಲಿದ್ದು, ಜೂ.4ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಪ್ರಮುಖ ನಗರ ಮಂಗಳೂರಿನಲ್ಲಿ ಕಳೆದ ನವೆಂಬರ್‌ನಲ್ಲಿ ಕಾಣೆಯಾಗಿದ್ದ ಮಳೆ ಮೇ ತಿಂಗಳಲ್ಲಿ ಕಾಣಿಸಿಕೊಂಡಿತ್ತು.

ಮೇ ತಿಂಗಳಲ್ಲಿ ಮೂರು ಬಾರಿ ಮಳೆಯಾಗಿದೆ. ಹೀಗಿದ್ದರೂ ವಾತಾವರಣದ ತಾಪಮಾನ ಕಡಿಮೆಯಾಗಿಲ್ಲ.

ಜಿಲ್ಲೆಯಲ್ಲಿ ಬಹುತೇಕ ಕೆರೆ, ಬಾವಿ, ಕೊಳವೆ ಬಾವಿ, ನದಿ, ಹೊಳೆ ನೀರಿಲ್ಲದೆ ಬತ್ತಿ ಹೋಗಿದ್ದು, ಜನಸಾಮಾನ್ಯರು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.

ನೀರಿಲ್ಲದೆ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ನೀರು ಇಲ್ಲದೆ ಒಣಗುತ್ತಿದ್ದ ಅಡಿಕೆ, ತೆಂಗು, ಬಾಳೆ ಗಿಡಗಳಿಗೆ ಇತ್ತೀಚಿನ ಮಳೆ ಮರು ಜೀವ ನೀಡಿದೆ.

ಐದು ವರ್ಷಗಳತ್ತ ನೋಡಿದರೆ ಮಾನ್ಸೂನ್ 2018 ಮತ್ತು 2022ರಲ್ಲಿ ಮೇ 29 ರಂದು, 2021ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1ರಂದು, 2019ರಲ್ಲಿ ಜೂನ್ 8ರಂದು ಕೇರಳ ಪ್ರವೇಶಿಸಿತ್ತು.

ನೈಋತ್ಯ ಮಾನ್ಸೂನ್ ಈ ಬಾರಿ ವಿಳಂಬವಾಗಲಿದ್ದು, ಜೂ.4ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುತ್ತದೆ.

ಆದರೆ ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ ವರ್ಷ ಮೇ 29ರಂದು ಮುಂಗಾರು ಆರಂಭವಾಗಿತ್ತು.

ಕಳೆದ 18 ವರ್ಷಗಳಲ್ಲಿ ಕೇರಳದ ಮೇಲೆ ಮಾನ್ಸೂನ್ ಪ್ರಾರಂಭವಾಗುವ ದಿನಾಂಕದ ಕಾರ್ಯಾಚರಣೆಯ ಮುನ್ಸೂಚನೆಗಳು 2015ನ್ನು ಹೊರತುಪಡಿಸಿ ಸರಿಯಾಗಿವೆ ಎಂದು ಇಲಾಖೆ ತಿಳಿಸಿದೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending