Connect with us

    ಕುದ್ರೋಳಿ ಕ್ಷೇತ್ರದಿಂದ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ 150ಕ್ವಿಂಟಾಲ್ ಅಕ್ಕಿ ವಿತರಣೆ

    Published

    on

    ಕುದ್ರೋಳಿ ಕ್ಷೇತ್ರದಿಂದ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ 150ಕ್ವಿಂಟಾಲ್ ಅಕ್ಕಿ ವಿತರಣೆ

    ಮಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ ದಕ್ಷಿಣ ಕನ್ನಡ ಜಿಲ್ಲೆಯ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಜೀವನ ಸಾಗಿಸಲು ಅನುಕೂಲವಾಗುವಂತೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯದಿಂದ ಸುಮಾರು 150ಕ್ವಿಂಟಾಲ್ ಅಕ್ಕಿ ವಿತರಣೆ ಮಾಡಲಾಗಿದೆ.

    ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ರಾಜಕೀಯ ನೇತಾರ ಬಿ.ಜನಾರ್ದನ ಪೂಜಾರಿಯವರ ಸಲಹೆಯಂತೆ ಈ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

    ಪ್ರಾರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ನೀಡುವ ಉದ್ದೇಶ ಹೊಂದಲಾಗಿದ್ದು, ಬಳಿಕ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ 150 ಕ್ವಿಂಟಾಲ್ ಅಕ್ಕಿ ವಿತರಣೆ ಕಾರ್ಯ ನಡೆಯುತ್ತಿದೆ.

    ಕುದ್ರೋಳಿ ಕ್ಷೇತ್ರವು ಮುಜರಾಯಿ ಇಲಾಖೆಗೆ ಒಳಪಡದ ದೇವಸ್ಥಾನವಾಗಿದ್ದು, ಕ್ಷೇತ್ರದಿಂದಲೇ ಈ ಯೋಜನೆಗೆ ಅನುದಾನ ನೀಡಲಾಗುತ್ತಿದೆ.

    ಇದು ಮಾತ್ರವಲ್ಲದೆ ಕ್ಷೇತ್ರದ ಭಕ್ತರು, ಕೊಡುಗೈದಾನಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ ಎನ್ನುತ್ತಾರೆ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.

    ಸ್ಥಳೀಯ ಅಂಗಡಿಯಿಂದ ಪೂರೈಕೆ:

    ಲಾಕ್‌ಡೌನ್ ಕಾರಣದಿಂದ ದೇವಾಲಯದಲ್ಲಿ ಅಕ್ಕಿ ವಿತರಣೆ ಮಾಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಬೇಡಿಕೆಯಿರುವ ಪ್ರದೇಶದಲ್ಲಿರುವ ಸ್ಥಳೀಯ ಅಂಗಡಿಯಿಂದಲೇ ಅಕ್ಕಿ ಪೂರೈಸುವ ಕಾರ್ಯ ಮಾಡಲಾಗುತ್ತಿದೆ.

    ಇದನ್ನು ದ.ಕ.ಜಿಲ್ಲೆಯ ನಾನಾ ಊರಿನ ಸಂಘ ಸಂಸ್ಥೆಗಳ ಮೂಲಕ ವಿತರಿಸಲು ಉದ್ದೇಶಿಸಲಾಗಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ.

    ಜಗತ್ತಿಗೆ ಏಕತೆಯನ್ನು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಚಿಂತನೆಯಡಿಯಲ್ಲಿ ಕುದ್ರೋಳಿ ದೇವಳದ ಭಕ್ತಾಭಿಮಾನಿಗಳು ನಾನಾ ಸಂಘ ಸಂಸ್ಥೆಗಳ ಮೂಲಕ ಬಡವರಿಗೆ ನೆರವಿನ ಹಸ್ತ ಚಾಚುತ್ತಿದ್ದಾರೆ.

    ಈ ಮೂಲಕ ಎಲ್ಲರೂ ಸೇರಿ ಒಟ್ಟಾಗಿ ತುರ್ತು ಸನ್ನಿವೇಶವನ್ನು ಎದುರಿಸುವ ಕಾರ್ಯ ನಡೆಯುತ್ತಿದೆ ಎನ್ನುತಾರೆ ಪದ್ಮರಾಜ್ ಆರ್.

    700ಕ್ಕೂ ಅಧಿಕ ಮಂದಿಗೆ ಅನ್ನದಾನ

    150 ಕ್ವಿಂಟಾಲ್ ಅಕ್ಕಿ ನೀಡುವುದಲ್ಲದೆ ಕುದ್ರೋಳಿ ದೇವಸ್ಥಾನವು ‘ಕಲ್ಪ ಟ್ರಸ್ಟ್’ ಸಹಕಾರದಿಂದ ಹೊರ ರಾಜ್ಯ, ಹೊರ ಜಿಲ್ಲೆಯ ಕೂಲಿ ಕಾರ್ಮಿಕರು, ನಿರಾಶ್ರಿತರು, ಕೆಲಸವಿಲ್ಲದೆ ತುತ್ತು ಅನ್ನಕ್ಕೆ ಪರದಾಡುತ್ತಿರುವ ಸುಮಾರು 700 ಮಂದಿಗೆ ನಿತ್ಯ ಅನ್ನದಾನ ಮಾಡುತ್ತಿದೆ.

    ಈ ಮೂಲಕ ಸುಮಾರು 14 ದಿನಗಳಿಂದ ಬಡವರ ಹೊಟ್ಟೆ ತಣಿಸುವ ಕೆಲಸವನ್ನು ಶ್ರೀ ಕ್ಷೇತ್ರದಿಂದ ಮಾಡಲಾಗುತ್ತಿದೆ.

    ಲಾಕ್‌ಡೌನ್ ಜಾರಿಯಾದ ಬಳಿಕ ಬಹಳಷ್ಟು ಜನ ಹೊರ ರಾಜ್ಯದ, ಹೊರ ಜಿಲ್ಲೆಯ ಕಾರ್ಮಿಕರು ಮಾಡಲು ಕೆಲಸವಿಲ್ಲದೆ, ಹೊಟ್ಟೆಗೆ ಅನ್ನವಿಲ್ಲದೆ ಬೀದಿಗೆ ಬಿದ್ದಿದ್ದಾರೆ.

    ಅವರಿಗೆ ನೆರವಾಗುವ ದೃಷ್ಟಿಯಿಂದ ಈ ಅನ್ನದಾನ ಮಾಡುವ ಕಾರ್ಯಕ್ಕೆ ದೇವಳ ಕೈ ಹಾಕಿದೆ. ಈಗ ಪ್ರತಿನಿತ್ಯ ದೇವಾಲಯದ ವತಿಯಿಂದಲೇ ಎಲ್ಲ ಆಹಾರ ಸಾಮಾಗ್ರಿಗಳನ್ನು ಭರಿಸಿ ಬಡವರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.

    ಬಜಪೆ, ಪೊರ್ಕೊಡಿ, ಮಳಲಿ, ಮಣ್ಣಗುಡ್ಡೆ, ಉರ್ವಸ್ಟೋರ್, ಕುಳೂರು, ಗುಡ್ಡೆಯಂಗಡಿ, ಪಂಜಿಮೊಗರು, ಕಾವೂರು, ಬೈಕಂಪಾಡಿ ಮುಂತಾದ ಕಡೆಗಳಲ್ಲಿ ಸುಮಾರು 700 ಮಂದಿಗೆ ಆಹಾರ ಸರಬರಾಜು ಮಾಡಲಾಗುತ್ತಿದೆ.

    ಕುದ್ರೋಳಿ ದೇವಳ ಹಾಗೂ ಟ್ರಸ್ಟ್ ನ ಈ ಕಾರ್ಯಕ್ಕೆ ಜಿಲ್ಲಾಡಳಿತದಿಂದಲೂ ಶ್ಲಾಘನೆ ವ್ಯಕ್ತಪಡಿಸಿದೆ. ದಿನವೂ ಪೂರ್ವಾಹ್ನ 11.30 ಯಿಂದ ಆರಂಭವಾಗುವ ಆಹಾರ ಸರಬರಾಜು ಕಾರ್ಯ ಮಧ್ಯಾಹ್ನ 3.30ರ ವರೆಗೆ ನಡೆಯುತ್ತಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ

    Published

    on

    ಬೆಂಗಳೂರು/ಮಂಗಳೂರು: ಇನ್ನೇನು ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯನವರು ಈ ಬಾರಿಯ ದಸರಾವನ್ನು ಉದ್ಘಾಟಿಸಿಲಿದ್ದಾರೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಘೋಷಣೆ ಮಾಡಿದ್ದಾರೆ.

     

    ಶಾಲಾ ಮಕ್ಕಳಿಗೆ ರಜೆ ಘೋಷಣೆ:
    ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಸರಕಾರ ರಜೆ ಘೋಷಣೆ ಮಾಡಿದೆ. ಅ.3ರಿಂದ ಅ.20ರವರೆಗೆ ದಸರಾ ರಜೆ ಘೋಷಣೆ ಮಾಡಿದ್ದು, ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಹೊರತಾಗಿ ಸಿಬಿಎಸ್‌ಸಿ ಹಾಗೂ ಐಎಸ್‌ಸಿಎಸ್ ಶಾಲೆಗಳಿಗೆ ದಸರಾ ರಜೆ ಅನ್ವಯವಾಗುವುದಿಲ್ಲ. ಯಾಕಂದ್ರೆ ಇವೆರಡು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಾಲಾ ರಜೆ ದಿನಾಂಕ ಹಾಗೂ ರಜಾ ಅವಧಿ ಬೇರೆಯಾಗಿರುತ್ತದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್‌ ಪತ್ತೆ

    Published

    on

    ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್‌ ಕೊನೆಗೂ ಪತ್ತೆಯಾಗಿದೆ.

    ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್‌ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್‌ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.

    ಈಗ ಟ್ರಕ್‌ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್‌ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್‌ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.

    ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್‌ ಕಡೆಗೆ ಹೋಗುತ್ತಿದ್ದರು.

    Continue Reading

    FILM

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    Published

    on

    ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

    ಈಗಾಗಲೇ ಜಾನಿ ಮಾಸ್ಟರ್‌ ನನ್ನು ಡ್ಯಾನ್ಸ್‌ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್‌ನ ಚಂಚಲ್‌ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    Continue Reading

    LATEST NEWS

    Trending