Connect with us

DAKSHINA KANNADA

ಮಕ್ಕಳ ಪಾಲನಾ ಸಂಸ್ಥೆಗಳನ್ನು ನೋಂದಾವಣೆ ಮಾಡುವುದು ಕಡ್ಡಾಯ: ದ.ಕ ಜಿಲ್ಲಾಧಿಕಾರಿ

Published

on

ಮಂಗಳೂರು: ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಹಾಗೂ ಕೂಡಲೇ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಅವರು ಜನವರಿ 29ರ ಶನಿವಾರರಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮಕ್ಕಳ ಪಾಲನಾ ಸಂಸ್ಥೆಗಳನ ನೋಂದಾವಣೆ ಮಾಡುವುದು ಹಾಗೂ ನವೀಕರಣ ಮಾಡುವುದು ಕಡ್ಡಾಯವಾಗಿದ್ದು ಕೂಡಲೇ ಸಂಸ್ಥೆಗಳು ನೋಂದಾವಣೆ ಮಾಡಿಸಿಕೊಳ್ಳಬೇಕು,

ಅಧಿಕಾರಿಗಳು ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ” ಸೂಚಿಸಿದರು.

ಕೋವಿಡ್‍ನಿಂದ ಪೋಷಕರಿಬ್ಬರನ್ನೂ ಕಳೆದುಕೊಂಡು ಕುಟುಂಬದ ಸದಸ್ಯರ ಆರೈಕೆಯಲ್ಲಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ಪ್ರತಿ ತಿಂಗಳು 3500 ರೂಪಾಯಿಯ ಧನಸಹಾಯವನ್ನು ಈ ಮಕ್ಕಳ ಸಮಗ್ರ ರಕ್ಷಣೆ ಮತ್ತು ಪಾಲನೆಗಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರಕಾರವು ಕೂಡ ಪಿ.ಎಮ್. ಕೇರ್ ಫಾರ್ ಚಿಲ್ಡ್ರನ್ ಯೋಜನೆಯಡಿಯಲ್ಲಿ ಕೋವಿಡ್‍ನಿಂದ ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳ ಆರೋಗ್ಯ ವಿಮೆ,

ಶಿಕ್ಷಣ ಮತ್ತು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಜೀವನವನ್ನು ನಿರ್ವಹಿಸಲು ಅನುವಾಗುವಂತೆ ನೆರವಿನ ಜೊತೆಗೆ ಪ್ರತಿ ಮಗುವಿಗೆ 23 ವರ್ಷ ತುಂಬಿದ ನಂತರ ತಲಾ ರೂ. 10 ಲಕ್ಷಗಳನ್ನು ಘೋಷಿಸಿದ್ದು, ಈಗಾಗಲೇ 10 ಅನಾಥ ಮಕ್ಕಳಿಗೆ ಮಕ್ಕಳ ಕಲ್ಯಾಣ ಸಮಿತಿಯಿಂದ ಅನುಮೋದನೆ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿರುವ ಎಚ್.ಐ.ವಿ ಮತ್ತು ಏಡ್ಸ್ ಭಾದಿತ ಮಕ್ಕಳಿಗೆ ಸರ್ಕಾರದಿಂದ ನೀಡುವ ಸಹಾಯ ಧನವನ್ನು ಮಗುವಿನ ಆರೋಗ್ಯ ಸುಧಾರಣೆಗಾಗಿ ಮಾತ್ರ ಬಳಸುವಂತೆ ನೋಡಿಕೊಳ್ಳಬೇಕು ಜೊತೆಗೆ ಅಧಿಕಾರಿಗಳು ಸೋಂಕಿತ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿ ವರದಿಯನ್ನು ನೀಡುವಂತೆ ತಿಳಿಸಿದರು.

ಕರ್ನಾಟಕ ಮಕ್ಕಳ ಸುರಕ್ಷಾ ನೀತಿ-2016 ಯನ್ನು ಮದರಸ ಶಿಕ್ಷಣ ಸಂಸ್ಥೆಗಳಲ್ಲಿ ಅಳವಡಿಸುವ ಬಗ್ಗೆ ಡಿ.ಡಿ.ಪಿ.ಐ, ಡಿ.ಡಿ.ಪಿ.ಯು, ಮತ್ತು ಅಲ್ಪಸಂಖ್ಯಾತ ಇಲಾಖೆಯವರ ಜೊತೆ ಸಭೆ ನಡೆಸುವಂತೆ ಜಿಲ್ಲಾದಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣ ಆಯೋಗದ ಸದಸ್ಯರಾದ ಶಂಕರಪ್ಪ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಾಪ ಬೋವಿ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending