Thursday, September 29, 2022

ಗುಡ್ಡ ಕುಸಿದ ಭಟ್ಕಳ ತಾಲೂಕಿನ ಪ್ರದೇಶಗಳಿಗೆ ಉಸ್ತುವಾರಿ ಸಚಿವರ ಕೋಟ ಭೇಟಿ; ಸಾಂತ್ವನ

ಭಟ್ಕಳ : ಮಂಗಳವಾರ ಮುಂಜಾನೆ ಗುಡ್ಡ ಕುಸಿದು ಅವಘಡಕ್ಕೀಡಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಮುಠ್ಠಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಭೇಟಿನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪ್ರಕೃತಿ ವಿಕೋಪ ಸಂಭವಿಸಬಹುದಾದ ಕಡೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಆಲ್ಲದೆ, ತೀವ್ರ ಮಳೆ ಹಾನಿಗೊಳಗಾದ ತಾಲೂಕಿನ ಮುಂಡಳ್ಳಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ವೀಕ್ಷಿಸಿದರು.

ಶಾಸಕ ಸುನೀಲ್ ನಾಯ್ಕ್ , ಇತರ ಮುಖಂಡರು , ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ದ್ವೇಷದ ಕಿಚ್ಚು ಹಚ್ಚುವ ಸಂಘಟನೆಗಳ ವಿರುದ್ಧ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಿ: ಖಾದರ್‌ ಕಿಡಿ

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...