Connect with us

LATEST NEWS

ಉಡುಪಿ: ಸರಕಾರಿ ಆಸ್ಪತ್ರೆಗೆ ಜಿಲ್ಲಾ ನ್ಯಾಯಾಧೀಶರ ದಿಢೀರ್ ಭೇಟಿ

Published

on

ಉಡುಪಿ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಶಾಂತವೀರ ಶಿವಪ್ಪ ಅವರು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ನಿನ್ನೆ ಉಡುಪಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು‌.


ಆಸ್ಪತ್ರೆಗೆ ಆಗಮಿಸಿದ ನ್ಯಾಯಮೂರ್ತಿಗಳು ಆಸ್ಪತ್ರೆ ವೈದ್ಯಾಧಿಕಾರಿ ಜೊತೆ ಸಮಾಲೋಚನೆ ನಡೆಸಿದರು.

ಬಳಿಕ ವಾರ್ಡ್ ಮತ್ತು ಪ್ರಯೋಗಾಲಯಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.


ನ್ಯಾಯಮೂರ್ತಿಗಳ ಜೊತೆಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ಒಳಕಾಡು ಅವರು ಉಪಸ್ಥಿತರಿದ್ದರು.


ಬಳಿಕ ಮಾತನಾಡಿದ ನ್ಯಾಯಮೂರ್ತಿ ಶಾಂತವೀರ ಶಿವಪ್ಪ, ‘ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ದಿಢೀರ್ ಭೇಟಿ ನೀಡಿದ್ದೇವೆ.

ಆಸ್ಪತ್ರೆಯ ಕುಂದುಕೊರತೆ ವೀಕ್ಷಣೆ ಮಾಡಿದ್ದೇವೆ.
ಇದೇ ರೀತಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದೇವೆ. ಸರಕಾರಿ ಆಸ್ಪತ್ರೆಗಳಲ್ಲಿರುವ ಕುಂದುಕೊರತೆ ಮತ್ತು ಸಮಸ್ಯೆಗಳನ್ನು ಪಟ್ಟಿಮಾಡಿ ವರದಿ ನೀಡಲಿದ್ದೇವೆ’ ಎಂದು ಹೇಳಿದರು.

LATEST NEWS

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Published

on

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending