Home ಪ್ರಮುಖ ಸುದ್ದಿ ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್- ಉಪಮೇಯರ್ ವೇದಾವತಿ ಆಯ್ಕೆ

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್- ಉಪಮೇಯರ್ ವೇದಾವತಿ ಆಯ್ಕೆ

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು, ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಉಪಮೇಯರ್ ಆಗಿ ಕುಳಾಯಿ ವಾರ್ಡ್ ಸದಸ್ಯೆ ವೇದಾವತಿ ಆಯ್ಕೆಯಾದರು.

60 ವಾರ್ಡ್ ಗಳಲ್ಲಿ 44 ಸಂಖ್ಯಾಬಲ ಹೊಂದಿದ್ದ ಬಿಜೆಪಿಗೆ ಕಾಂಗ್ರೆಸ್ ಎಲ್ಲೂ ಸವಾಲಾಗಲಿಲ್ಲ. ಹಿಂದುಳಿದ ವರ್ಗ ಎ ಮೀಸಲಾತಿ ಹೊಂದಿದ್ದ ಮೇಯರ್ ಸ್ಥಾನಕ್ಕೆ ಮೂರು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾದ ದಿವಾಕರ್ ಪಾಂಡೇಶ್ವರ್ ಆಯ್ಕೆಯಾದ್ರೆ, ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ವೇದಾವತಿ ಆಯ್ಕೆಯಾದರು.

 

ಇನ್ನು ಬಿಜೆಪಿಗೆ ಶಾಸಕದ್ವಯರಾದ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಹಾಜರಿದ್ದು ಬಲ ತುಂಬಿದ್ರು.. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಉಪಸ್ಥಿತರಿದ್ದರು. 14 ಸದಸ್ಯ ಬಲ ಹೊಂದಿರೋ ಕಾಂಗ್ರೆಸ್ ನಿಂದ ಕೇಶವ ಮರೋಳಿ ಮೇಯರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಇನ್ನು ಎರಡು ಸದಸ್ಯ ಬಲ ಹೊಂದಿರೋ ಎಸ್ಡಿಪಿಐ ಅಭ್ಯರ್ಥಿಗಳು ತಟಸ್ಥರಾದರು.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ವಿ. ಯಶವಂತ್ ಚುನಾವಣೆ ಪ್ರಕ್ರಿಯೆಯನ್ನ ನಡೆಸಿದ್ರು. ಕೈ ಎತ್ತುವ ಮೂಲಕ ಸದಸ್ಯರು ತಮ್ಮ ಅಭ್ಯರ್ಥಿಗಳ ಪರ ಮತಚಲಾಯಿಸಿದ್ರು. ಮೇಯರ್-ಉಪಮೇಯರ್ ಚುನಾವಣೆ ಹಿನ್ನೆಲೆ ಪಾಲಿಕೆ ಕಚೇರಿಗೆ ಮಧ್ಯಾಹ್ನದವರೆಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿತ್ತು.

ಇನ್ನು ನೂತನ ಮೇಯರ್ ಆಗಿ ಅಧಿಕಾರ ವಹಿಸಿಕೊಂಡಿರುವ ದಿವಾಕರ್‌ ಅವರು ಪ್ರಥಮ ಹೇಳಿಕೆಯಲ್ಲೇ, ಸಂಸದರು, ಶಾಸಕರು ಹಾಗೂ ಪಾಲಿಕೆಯ ಹಿರಿಯ ಸದಸ್ಯರ ಜತೆ ಚರ್ಚಿಸಿ ಮುಂದಿನ ಸಭೆಯಲ್ಲೇ ನೀರಿನ ದರ ಏರಿಕೆ ಕುರಿತಂತೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿದ್ದೆ. ಆದರೆ ಇಂದು ಪಕ್ಷ ತನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ ಆದ್ದರಿಂದ ಪಕ್ಷಕ್ಕೆ ಚಿರಋಣಿ. ವಿಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಪ್ಪುಚುಕ್ಕೆ ಬರದಂತೆ ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ವ್ಯಾಪಾರ ಪರವಾನಿಗೆಯಲ್ಲಿ ತ್ಯಾಜ್ಯ ಶುಲ್ಕ ಹೆಚ್ಚಿರುವ ಬಗ್ಗೆಯೂ ದೂರು ಇದ್ದು, ಈ ಬಗ್ಗೆಯೂ ಸಹ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

 

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...