Thursday, September 29, 2022

ದಕ್ಷಿಣಕನ್ನಡ ಜಿಲ್ಲಾ ಎಲ್ಲಾ ಗಡಿಗಳು ಇನ್ನು ಜನಸಂಚಾರಕ್ಕೆ ಮುಕ್ತ

ಮಂಗಳೂರು : ರಾಜ್ಯ ಸರಕಾರದ ಆದೇಶದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲೆಯಿಂದ ಅಂತರ್ ರಾಜ್ಯ ಸಂಚಾರಕ್ಕೆ ಇದ್ದ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.


ಈ ಕುರಿತಂತೆ ಮಾಹಿತಿ ನೀಡಿರುವ ಅವರು ರಾಜ್ಯ ಸರಕಾರದ ಪರಿಷ್ಕೃತ ಮಾರ್ಗಸೂಚಿ ಪ್ರಕಾರವಾಗಿ, ಇತರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರು ಕ್ವಾರಂಟೈನ್‌ಗೆ ಒಳಗಾಗಬೇಕಾಗಿಲ್ಲ ಹಾಗೂ ಗಡಿಯಲ್ಲಿ ಅವರು ತಪಾಸಣೆಗೆ ಒಳಗಾಗಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಅವರು ಸ್ಪಷ್ಟಪಡಿಸಿದ್ದಾರೆ.


ಸೋಮವಾರ ಸಂಜೆಯಿಂದ ಎಲ್ಲಾ ಗಡಿಗಳನ್ನು ಪ್ರಯಾಣ ಮುಕ್ತವಾಗಿಸಿದ್ದು ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬರುವ ಜನರಿಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಅವರು ತಿಳಿಸಿದ್ದಾರೆ. ಆದರೆ ಇತರ ರಾಜ್ಯಗಳಿಗೆ ತೆರಳುವ ಕರ್ನಾಟಕದ ಜನರು ಆಯಾ ರಾಜ್ಯಗಳಲ್ಲಿ ಚಾಲ್ತಿಯಲ್ಲಿರುವ ನಿಯಮಗಳನ್ನು ಪಾಲಿಸಬೇಕಾಗಿದೆ.

LEAVE A REPLY

Please enter your comment!
Please enter your name here

Hot Topics

ಸುಳ್ಯ: ಮಾಡರ್ನ್‌ಯುಗಕ್ಕೆ ಹೊಂದಿಕೊಂಡ ಕಾಗೆ ತನ್ನ ಗೂಡು ಹೆಣೆದಿದ್ದು ಕಬ್ಬಿಣದ ತಂತಿಯಲ್ಲಿ..!

ಸುಳ್ಯ: ಕಾಗೆಯೊಂದು ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ಹೆಣೆದಿರುವ ಅದ್ಭುತ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾರ್ಯ ಕೈಗೊಂಡ ವೇಳೆ ಮರವೊಂದರ ಕೊಂಬೆಯಲ್ಲಿ ಈ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...