ಮಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಮಂಗಳೂರಿನ ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಾಡ್ಲೂರು ಸತ್ಯನಾರಾಯಣಾಚಾರ್ಯ ಇವರ ಮಾರ್ಗದರ್ಶನದಲ್ಲಿ ಮಂಗಳೂರು ವಕೀಲರ ಸಂಘ ಹಾಗೂ ದ.ಕ.ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ಮಹಿಳಾ ಸದಸ್ಯೆಯರು ಏರ್ಪಡಿಸಿದ ಈ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು.
ಸಾವಿತ್ರಿ ವೆಂಕಟ್ರಮಣ ಭಟ್; ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು FTSC-1 ನೆಯ ನ್ಯಾಯಾಲಯ; ಮಂಗಳೂರು ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು.
ಮಂಗಳೂರು ವಕೀಲರ ಸಂಘದ ಖಜಾಂಚಿ ಅರುಣಾ ಬಿ.ಪಿ. ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು ಮುಖ್ಯ ಅತಿಥಿಗಳಾಗಿ ಮಂಗಳೂರು ಲಯನ್ಸ್ ಕ್ಲಬ್ ನ ನಿಕಟಪೂವ೯ ಜಿಲ್ಲಾ ಗವರ್ನರ್ ಎಮ್. ಕವಿತಾ ಎಸ್. ಶಾಸ್ತ್ರಿ ಅವರು ಆಗಮಿಸಿದ್ದರು.
ಗೌರವಾನ್ವಿತ ಅತಿಥಿಗಳಾಗಿ ಮಂಗಳೂರಿನ ರೋಶನಿ ನಿಲಯ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಜೂಲಿಯಟ್ ಸಿ.ಜೆ. ಮತ್ತು ಮಿಸ್ಬಾ ಮಹಿಳಾ ಕಾಲೇಜು ಕಾಟಿಪಳ್ಳ ಇಲ್ಲಿನ ಪ್ರಾಂಶುಪಾಲ ರಾದ ಜಹೀದಾ ಜಲೀಲ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನ್ಯಾಯಾಂಗ ಇಲಾಖಾ ನೌಕರರ ಸಂಘದ ದ.ಕ. ಜಿಲ್ಲಾ ಶಾಖೆಯ ಅಧ್ಯಕ್ಷೆ ವಿ೦ದ್ಯಾ ಪಿ.ಕೆ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಯೀದುನ್ನೀಸಾ ಅವರು ವಹಿಸಿದ್ದರು.
ಮಂಗಳೂರಿನ ಎಲ್ಲಾ ಗೌರವಾನ್ವಿತ ನ್ಯಾಯಾಧೀಶರುಗಳು; ಮಹಿಳಾ ವಕೀಲರು; ನ್ಯಾಯಾಲಯದ ಮಹಿಳಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಹಿಳಾ ನ್ಯಾಯಾಂಗ ನೌಕರರ ವತಿಯಿಂದ ಹಾಗೂ ಮಹಿಳಾ ವಕೀಲರ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ದ.ಕ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಶಿಲ್ಪಾ ಅವರು ವಂದನಾರ್ಪಣೆಗೈದರು.
ಮಹಿಳಾ ನ್ಯಾಯವಾದಿ ಅನಿತಾ ಕಿಣಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.
ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.
2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.