Connect with us

    LATEST NEWS

    ದಕ್ಷಿಣಕನ್ನಡ 11 ಸಾವಿರ ದಾಟಿದ ಕೊರೊನಾ ಪ್ರಕರಣಗಳ ಸಂಖ್ಯೆ

    Published

    on

    ಮಂಗಳೂರು ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 314 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 11 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 314 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11092 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 296 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2339 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


    ಇಂದು ಕೂಡ ಜಿಲ್ಲೆಯಲ್ಲಿ 11 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 330 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -215, ಬಂಟ್ವಾಳ – 52, ಸುಳ್ಯ -2, ಬೆಳ್ತಂಗಡಿ – 10, ಪುತ್ತೂರು – 8, ಹೊರ ಜಿಲ್ಲೆಯವರು – 27 ಪ್ರಕರಣಗಳಿವೆ.

    ಉಡುಪಿ ಕೊರೊನಾ ಪ್ರಕರಣ

    ಉಡುಪಿ ಜಿಲ್ಲೆಯಲ್ಲಿ ಇಂದು 251 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10704 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಒಬ್ಬರು ಸಾವನಪ್ಪಿದ್ದಾರೆ.


    ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7983 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2629 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1059 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1570 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಒಬ್ಬರು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 92 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 110, ಕುಂದಾಪುರ -81 , ಕಾರ್ಕಳ -84, ಜಿಲ್ಲೆಯ ಹೊರಗಿನ – 6 ಪ್ರಕರಣಗಳಿವೆ.

    DAKSHINA KANNADA

    ಮೊಬೈಲ್ ಇಂಟರ್ನೆಟ್ ಬೇಗ ಖಾಲಿ ಆಗ್ತಿದ್ಯಾ…? ಈ ಟ್ರಿಕ್ಸ್ ಫಾಲೋ ಮಾಡಿ ನೋಡಿ….!!

    Published

    on

    ಮಂಗಳೂರು: ಹೊಸ ಹೊಸ ಮೊಬೈಲ್ ಅಪ್ಲಿಕೇಶನ್ ಬಂದಂತೆ ನಾವು ಮೊಬೈಲ್ ಗೆ ಹೆಚ್ಚೆಚ್ಚು ಎಡಿಕ್ಟ್ ಆಗುತ್ತಿದ್ದೇವೆ. ಅದರ ಜೊತೆಗೆ ನೆಟ್ ಪ್ಯಾಕ್ ಕೂಡಾ ಇದೀಗ ದುಬಾರಿಯಾಗಿಬಿಟ್ಟಿದೆ. ಮೊಬೈಲ್​ನಲ್ಲಿ ಡೇಟಾ ಪ್ಯಾಕ್ ಹಾಕಿಸಿದ್ದರೂ, ಇಂಟರ್​ನೆಟ್ ಬೇಗ ಖಾಲಿ ಆಗ್ತಾ ಇದ್ಯಾ? ಅದಕ್ಕೆ ಕಾರಣವೇನು? ದಿನಕ್ಕೆ 2 ಜಿಬಿ ಡೇಟಾ ಇದ್ದರೂ ಸಾಕಾಗುತ್ತಿಲ್ಲವೇ? ರೀಲ್ಸ್ ನೋಡುತ್ತಲೇ ಡೇಟಾ ಖಾಲಿ ಆಗುತ್ತಿರುವ ಬಗ್ಗೆ ಮೆಸೇಜ್ ಬರುತ್ತಿದೆಯಾ? ಹಾಗಾದರೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ನೆಟ್​ ಬೇಗ ಖಾಲಿ ಆಗದಿರಲು ಏನು ಮಾಡಬೇಕು? ಡೇಟಾ ಪ್ಯಾಕ್ ಹೆಚ್ಚು ಇರುವಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ.

    • ಸ್ಮಾರ್ಟ್ಫೋನ್ ಗಳಲ್ಲಿ ಕೆಲವು ಆ್ಯಪ್ ಗಳು ಸ್ವಯಂಚಾಲಿತವಾಗಿ ಅಪ್ಡೇಟ್ ಆಗುತ್ತದೆ. ಆಗ ನೆಟ್ ಬೇಗ ಖಾಲಿಯಾಗುತ್ತದೆ. ಇದಕ್ಕಾಗಿ ನೀವು ಸೆಟ್ಟಿಂಗ್ ಗೆ ಹೋಗಿ ಆಟೋಮ್ಯಾಟಿಕ್ ಡೌನ್ ಲೋಡ್ ಆಪ್ಶನ್ ನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಮಾತ್ರ ಅಪ್ಲಿಕೇಶನ್ ಗಳನ್ನು ಅಪ್ಡೇಟ್ ಮಾಡೋದು ಒಳಿತು.
    • ಆಂಡ್ರಾಯ್ಡ್ ಫೋನ್ ಗಳು ಡೇಟಾ ಉಳಿತಾಯ ಮೋಡ್ ಎಂಬ ಆಯ್ಕೆಯನ್ನು ಹೊಂದಿದೆ. ಈ ಆಯ್ಕೆ ನಿಮ್ಮ ಮೊಬೈಲ್ ನಲ್ಲಿದ್ದು ಅದನ್ನು ಸಕ್ರಿಯಗೊಳಿಸಿದ್ರೆ ಡೇಟಾ ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ನಿಮ್ಮ ಫೋನ್ ನಲ್ಲಿ ಅನಗತ್ಯ ಡೇಟಾ ಪೋಲು ಆಗುವುದನ್ನು ತಡೆಯುತ್ತದೆ. ಇದರಿಂದ ನಿಮಗೆ ಬಳಕೆಗೆ ಡೇಟಾ ಹೆಚ್ಚು ಲಭ್ಯ ಆಗುತ್ತದೆ.
    • ಇತ್ತೀಚಿನ ದಿನಗಳಲ್ಲಿ ಗೂಗಲ್ ಮ್ಯಾಪ್ ಆ್ಯಪ್ ಬಳಸೋದು ಹೆಚ್ಚಾಗಿದೆ. ಇದು ಅತ್ಯಂತ ಹೆಚ್ಚು ಡೇಟಾವನ್ನು ಬಳಸಿಕೊಳ್ಳುತ್ತೆ‌. ಹಾಗಿರುವಾಗ ಇಂತಹ ಆ್ಯಪ್ ಗಳನ್ನು ಆಫ್ ಲೈನ್ ನಲ್ಲಿ ಉಪಯೋಗಿಸಬೇಕೇ ಹೊರತು ಆನ್ಲೈನ್ ನಲ್ಲಲ್ಲ. ಈ ಆ್ಯಪ್ ನ ಅಪ್ಡೇಟ್ ನ್ನು ಕೂಡಾ ವೈಫೈನಲ್ಲೇ ಮಾಡೋದು ಉತ್ತಮ.‌
    • ನಾವು ಎಲ್ಲಿಯಾದರೂ ಸಂಚರಿಸುತ್ತಿದ್ದರೆ ಯೂಟ್ಯೂಬ್ ವೀಡಿಯೋಗಳನ್ನು ಅಥವಾ ಇನ್ನಾವುದೋ ಆ್ಯಪ್ ಬಳಸೋದು ಹೆಚ್ಚು. ಸಂಚಾರದ ಸಂದರ್ಭದಲ್ಲಿ ವೈಫೈ ಅನುಕೂಲತೆ ಇದ್ದರೆ ವೀಡಿಯೋ ಆಗಲೇ ಡೌನ್ಲೋಡ್ ಮಾಡಿಡುವುದು ಉತ್ತಮ. ನಂತರ ಆಫ್ಲೈನಲ್ಲೇ ಅದನ್ನು ವೀಕ್ಷಿಸಬಹುದು.
    • ವೀಡಿಯೋ ಮತ್ತು ಫೋಟೋಗಳನ್ನು ಆಟೋಮ್ಯಾಟಿಕ್ ಡೌನ್ ಲೋಡ್ ಆಪ್ಶನ್ ನಿಂದ ತೆಗೆಯಿರಿ. ಆಗ ಡೇಟಾ ಉಳಿತಾಯವಾಗುತ್ತದೆ.
    Continue Reading

    BELTHANGADY

    ಬಸ್ ನಿಲ್ದಾಣಕ್ಕೆ ಬಂಗೇರ ಹೆಸರು ; ನುಡಿನಮನದಲ್ಲಿ ಸಿಎಂ ಘೋಷಣೆ..!

    Published

    on

    ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.

    ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದರು.

    ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ, ರಾಜಕಾರಣ ಅತ್ಯಂತ ಬಡವಾಗಿದೆ. ಬಂಗೇರ ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

    ಬೆಳ್ತಂಗಡಿ  ಬಸ್‌ ನಿಲ್ದಾಣಕ್ಕೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ

    ಬೆಳ್ತಂಗಡಿ ಬಸ್‌ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ನಿರ್ಮಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

    Continue Reading

    LATEST NEWS

    ಪತಿಯಿಂದಲೇ ಭೀಕರ ಹ*ತ್ಯೆಯಾದ ‘ಭಜರಂಗಿ’ ಸಿನೆಮಾ ನಟಿ ..!

    Published

    on

    ಮೈಸೂರು: ನಟಿ ಹಾಗೂ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತೆ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿರುವ ದುರ್ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ನಟಿ ಹ*ತ್ಯೆಯಾಗಿದ್ದು, ವಿದ್ಯಾ ಅವರನ್ನು ಪತಿ ನಂದೀಶ್‌ ಕೊ*ಲೆ ಮಾಡಿದ್ದಾನೆ ಎನ್ನಲಾಗಿದೆ.

    vidya nandeesh

    ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ವಿದ್ಯಾ ಅವರು ಕೆಲ ನಾಯಕರೊಂದಿಗೆ ಆಪ್ತರಾಗಿದ್ದರು. ಇದೇ ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನುವ ಮಾತುಗಳು ಕೇಳಿಬಂದಿವೆ.  ಸೋಮವಾರ ರಾತ್ರಿ ಪತಿ ಪತ್ನಿ ಇಬ್ಬರ ನಡುವೆ ಜಗಳ ನಡೆದಿದೆ.  ಗಲಾಟೆ ವೇಳೆ ಹರಿತವಾದ ಆಯುಧದಿಂದ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ..; ಮಾಜಿ ಪ್ರಿಯತಮೆ ಮದುವೆಗೆ ವಿಶ್ ಮಾಡಲು ಹೋದ ಯುವಕ..! ವರನಿಗೆ ಹಿಗ್ಗಾಮುಗ್ಗ ಥಳಿಸಿ ಹಲ್ಲೆ..!!

    ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದರು. ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು. ಇದೀಗ ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದಾರೆ.

     

     

    Continue Reading

    LATEST NEWS

    Trending