Connect with us

DAKSHINA KANNADA

ಮಳಲಿ ಮಸೀದಿ ವಿವಾದ: VHP ಅರ್ಜಿ ಸ್ವೀಕರಿಸಿ ಮಸೀದಿ ಕಮಿಟಿ ಮನವಿ ವಜಾಗೊಳಿಸಿದ ಕೋರ್ಟ್

Published

on

ಮಂಗಳೂರು: ಅನೇಕ ದಿನಗಳಿಂದ ಚರ್ಚೆ-ವಾದಗಳಲ್ಲೇ ಬಾಕಿ ಉಳಿದಿರುವ ಮಂಗಳೂರು ಹೊರವಲಯದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನ್ಯಾಯಾಲಯವು ಕಮಿಷನರ್ ನೇಮಿಸಿ ಮಸೀದಿ ಸರ್ವೇ ಮಾಡಬೇಕೆಂದು ಒತ್ತಾಯಿಸಿ ವಿಹೆಚ್‌ಪಿ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ಸ್ವೀಕರಿಸಿದ ಕೋರ್ಟ್ 2023ರ ಜನವರಿ 8ಕ್ಕೆ ವಿಚಾರಣೆ ಮುಂದೂಡಿದೆ.

ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿತ್ತು. ಇದೀಗ ಈ ವ್ಯಾಜ್ಯ ವಕ್ಫ್ ಟ್ರಿಬ್ಯುನಲ್​​ನಲ್ಲಿ ನಡೆಯಬೇಕೋ ಅಥವಾ ಸಿವಿಲ್ ಕೋರ್ಟ್​ನಲ್ಲಿ ನಡೆಯಬೇಕೋ ಎಂಬ ಬಗ್ಗೆ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ತೀರ್ಪು ನೀಡಿದೆ.

ಇನ್ನೊಂದೆಡೆ ಮಸೀದಿ ಕಾಮಗಾರಿ ತಡೆಯಾಜ್ಞೆ ತೆರವು ನೀಡಿ ವಿಹೆಚ್‌ಪಿ ಅರ್ಜಿ ವಜಾಗೊಳಿಸುವಂತೆ ಮಸೀದಿ ಕಮಿಟಿ ಮನವಿ ಮಾಡಿತ್ತು. ಆದರೆ ಮಸೀದಿ ಕಮಿಟಿ ಅರ್ಜಿಯನ್ನೇ ಕೋರ್ಟ್ ವಜಾಗೊಳಿಸಿದೆ.
ಗುರುಪುರ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ಈ ಹಿನ್ನಲೆ ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಮನವಿ ಮಾಡಿದ್ದವು.

ಇದನ್ನು ವಿರೋಧಿಸಿದ್ದ ಮಸೀದಿ ಆಡಳಿತ ಮಂಡಳಿ ಮತ್ತು ಮುಸ್ಲಿಂ ಸಂಘಟನೆಗಳು ಈ ದಾವೆಯ ವಿಚಾರಣೆ ನಡೆಸುವ ಅಧಿಕಾರವು ನ್ಯಾಯಾಲಯಕ್ಕೆ ಇಲ್ಲ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದ ಅಧಿಸೂಚನೆ ಇರಬೇಕು.

ಆದರೆ ಮಳಲಿ ಮಸೀದಿಯ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರಲಿಲ್ಲ. ಹೀಗಿರುವಾಗ ಇದನ್ನು ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ.

ಅಲ್ಲದೇ ಇದನ್ನ ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್​ಗೆ ಅಧಿಕಾರ ಇಲ್ಲ , ವಕ್ಫ್ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ಮಾಡಬಹುದು ಎಂದು ವಾದ ಮಂಡಿಸಿತ್ತು.

DAKSHINA KANNADA

ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending