ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಕೊರೋನಾ ಅಂಕಿ ಅಂಶಗಳು ಸಾವವು- ನೋವಿನೊಂದಿಗೆ ಮತ್ತೆ ಭಾರಿ ಏರಿಕೆ ಕಂಡಿರುವುದು ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ.
ನಿನ್ನೆ ಜಿಲ್ಲೆಯಲ್ಲಿ 790 ಜನರಲ್ಲಿ ಕೊರೊನಾ ಸೋಂಕು ಧೃಡಪಟ್ಟಿದ್ದರೆ ಬರೋಬ್ಬರಿ 10ನ ಜನ ಕೊರೊನಾಕ್ಕೆ ಬಲಿಯಾಗಿದ್ದಾರೆ. ಇದು 2 ನೇ ಅಲೆಯಲ್ಲಿ ಇದುವರೆಗೆ ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತ ಗರಿಷ್ಟ ಸಂಖ್ಯೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ998 ಕ್ಕೇರಿಕೆಯಾಗಿದೆ. ನಿನ್ನೆ ಜಿಲ್ಲೆಯಲ್ಲಿ 790 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ 12.72ಕ್ಕೇರಿದೆ.
ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಈ ಸೋಂಕಿಗೊಳಗಾದವರ ಸಂಖ್ಯೆ85,665 ಕ್ಕೇರಿದೆ.966 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 78,073 ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 6,594 ಸಕ್ರಿಯ ಪ್ರಕರಣಗಳಿವೆ.
ಮತ್ತೆ 2 ಫಂಗಸ್ ಪ್ರಕರಣಗಳು : ಜಿಲ್ಲೆಯಲ್ಲಿ ನಿನ್ನೆ ಬ್ಲ್ಯಾಕ್ ಪಂಗಸ್‌ನ 2 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.
ಈ ಎರಡೂ ಪತ್ತೆಯಾದ ಹೊಸ ಪ್ರಕರಣಗಳು ದ.ಕ. ಜಿಲ್ಲೆಗೆ ಸಂಬಂಧಿಸಿದ್ದಾಗಿದೆ. ಬ್ಲಾಕ್ ಫಂಗಸ್‌ಗೆ ಸಂಬಂಧಿಸಿ ದ.ಕ.ಜಿಲ್ಲೆಯಲ್ಲಿ ಈವರೆಗೆ 16 ಮಂದಿ ಮೃತಪಟ್ಟಿದ್ದು, ಅದರಲ್ಲಿ 2 ಮಂದಿ ದ.ಕ. ಜಿಲ್ಲೆಯವರಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸಕ್ರಿಯ ಬ್ಲಾಕ್ ಫಂಗಸ್ ಪ್ರಕರಣಗಳಲ್ಲಿ 9 ದ.ಕ. ಜಿಲ್ಲೆಗೆ ಸಂಬಂಧಿಸಿದ್ದಾಗಿದ್ದು, 31 ಪ್ರಕರಣಗಳು ಹೊರ ಜಿಲ್ಲೆಯದ್ದಾಗಿದ್ದು ಯಾರೂ ಕೂಡ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿಲ್ಲ..!
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 70,099 ಪ್ರಕರಣಗಳಲ್ಲಿ 84,72,376 ರೂ. ದಂಡ ವಸೂಲು ಮಾಡಲಾಗಿದೆ.