Sunday, May 16, 2021

ಮಂಗಳೂರು ಧಕ್ಕೆಯಲ್ಲಿ ಸಾರ್ವಜನಿಕರಿಗೆ ಮೀನು ಖರೀದಿಗೆ ನಿಷೇಧ ಹೇರಿದ ಜಿಲ್ಲಾಡಳಿತ..!

ಮಂಗಳೂರು:ಮಂಗಳೂರು ನಗರದ ಧಕ್ಕೆಯಲ್ಲಿ ಸಾರ್ವಜನಿಕರಿಗೆ ಮೀನು ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ.

ಮೀನುಗಾರಿಕಾ ಬಂದರಿನಲ್ಲಿ ಚಿಲ್ಲರೆ ಮೀನು ಮಾರಾಟಗಾರರು ಮೀನು ಮಾರಾಟ ಮಾಡುವುದು ಹಾಗೂ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ಈ ಬಗ್ಗೆ  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆ ಹಳೆ ಬಂದರುಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕಾ ಬಂದರಿನಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಮೀನು ಖರೀದಿಗೆ ಗುಂಪುಗೂಡುತ್ತಿದ್ದಾರೆ. ಹೀಗಾಗಿ, ಮೀನುಗಾರಿಕಾ ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ.

ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಮೀನುಗಳನ್ನು ಸ್ಥಳೀಯ ವ್ಯಾಪ್ತಿಯ ಮೀನು ಮಾರುಕಟ್ಟೆಗಳಲ್ಲಿ ಖರೀದಿಸಬಹುದಾಗಿದೆ.

ಅಲ್ಲದೇ, ಸ್ಥಳೀಯ ಮಾರುಕಟ್ಟೆಗಳಲ್ಲಿಯೇ ಕಟ್ಟಿಂಗ್ ಮಾಡುವುದು ಮತ್ತು ಶುಚಿಗೊಳಿಸುವುದು ಅವಶ್ಯ ಎಂದು ಅವರು ತಿಳಿಸಿದರು.ಇನ್ನು, ಮಂಗಳೂರು ಮೀನುಗಾರಿಕಾ ಬಂದರಿನ ಒಳಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರರಾಜ್ಯದಿಂದ ಮೀನು ಬರುವ ಹೋಲ್​ಸೇಲ್ ಮಾರುಕಟ್ಟೆಯಲ್ಲಿ ರಿಟೇಲ್ ಮತ್ತು ಚಿಲ್ಲರೆ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಈ ಸೂಚನೆಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ವಿಪತ್ತು ನಿರ್ವಹಣೆ ಕಲಂ 51ರ ಅಡಿ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗ ಅಧಿನಿಯಮದಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿಗಳು ಸೇರಿದಂತೆ ಚಿಲ್ಲರೆ ಮಾರಾಟ ನಿಷೇಧ ಉಲ್ಲಂಘನೆ ನಿಯಂತ್ರಿಸಲು ಅಧಿಕಾರಿಗಳು ಮುಂದಾಗಬೇಕು.

ಉಲ್ಲಂಘಿಸುವವರ ವೀಡಿಯೋ-ಚಿತ್ರಗಳನ್ನು ಸಂಗ್ರಹಿಸಬೇಕು. ಇವುಗಳ ನಿಯಂತ್ರಣಕ್ಕೆ ಹೆಚ್ಚಿನ ಹೋಮ್‍ ಗಾರ್ಡ್ಸ್ ಹಾಗೂ ಪೊಲೀಸರನ್ನು ನೇಮಕ ಮಾಡಬೇಕೆಂದು ಸೂಚನೆ ನೀಡಿದರು.

ಶಾಸಕ ವೇದವ್ಯಾಸ್‍ ಕಾಮತ್ ಮಾತನಾಡಿ, ಸರ್ಕಾರ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಹೊಸ-ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರುತ್ತಿದೆ.

ಧ್ವನಿವರ್ಧಕಗಳನ್ನು ಬಳಸಿ ಇದರ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮೀನು ಮಾರಾಟಗಾರರಿಗೆ ಮಾಹಿತಿ ನೀಡಬೇಕು. ಇದನ್ನು ಪ್ರತಿಯೊಬ್ಬ ನಾಗರಿಕರು ಚಾಚು ತಪ್ಪದೇ ಪಾಲನೆ ಮಾಡಬೇಕು. ಯಾರೂ ಕಾನೂನು ವ್ಯವಸ್ಥೆಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಮಾಡುತ್ತಿಲ್ಲವೋ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...