Thursday, December 2, 2021

ಕೊರಳ ಪಟ್ಟಿ ಹಿಡಿಯುತ್ತೇನೆಂದ ಜಗದೀಶ್‌ ಕಾರಂತ್‌ ವಿರುದ್ಧ ದೂರು ದಾಖಲಿಸಿದ ದಕ್ಷಿಣ ಕನ್ನಡ DC

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಪೂಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಭಾನುವಾರ ಬಂಟ್ವಾಳದ ಕಾರಿಂಜದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಮಾತನಾಡಿದ್ದ ಜಗದೀಶ್ ಕಾರಂತ್ ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು.

ಒಂದು ವೇಳೆ ನಿಲ್ಲಿಸದೇ ಹೋದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುವ ಎಚ್ಚರಿಕೆಯನ್ನು ಬಹಿರಂಗ ಸಮಾವೇಶದಲ್ಲಿ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಒಂದು ಸರ್ಕಾರಿ ಜವಾಬ್ದಾರಿಯುತ ಅಧಿಕಾರಿ ಮೇಲೆ ಅವಹೆಳನಕಾರಿ ಪದ ಬಳಕೆ ಮಾಡಿದ ವಿಚಾರವಾಗಿ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರರಿಂದ ದೂರು ನೀಡಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...