Saturday, August 20, 2022

ದೇವರ ದರ್ಶನಕ್ಕೆ ಟೈಂ ಫಿಕ್ಸ್‌ ಮಾಡಿದ ಜಿಲ್ಲಾಡಳಿತ: ಕಟೀಲು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾತ್ರ..!

ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು, ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.


ಇತರ ವಿವರಗಳು ಇಂತಿವೆ
1. ಮುಂದಿನ ಆದೇಶದವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ
ದೇವಸ್ಥಾನಗಳು ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭದಲ್ಲಿ
ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಸ್ ನಿಯಂತ್ರಣ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.
2. ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ ಹಾಗೂ
ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ
3. ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತೀಯ ಉತ್ಸವ, ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆ, ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ.
4. ಜಾತ್ರೆಗಳು, ದೇವಾಲಯದ ಉತ್ಸವಗಳು ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ.

 

LEAVE A REPLY

Please enter your comment!
Please enter your name here

Hot Topics