ಮಂಗಳೂರು: ರಾಜ್ಯಾದಾದ್ಯಂತ ಭಾರೀ ಮಳೆ ಹಿನ್ನೆಲೆ ಈ ತಿಂಗಳಲ್ಲಿ ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಕೆಲವು ಜಿಲ್ಲೆಗಳಲ್ಲಿ ರದ್ದುಗೊಂಡಿದ್ದು,
ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕು ಪಂಜ ಗ್ರಾಮದಲ್ಲಿ ನಾಳೆ (ಜು.16) ನಡೆಯಬೇಕಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.