Connect with us

LATEST NEWS

ದ. ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಆಸ್ತಿ ವ್ಯಾಜ್ಯವನ್ನು ತಿರಸ್ಕರಿಸಿದ ನ್ಯಾಯಾಲಯ

Published

on

ಮಂಗಳೂರು: ದ. ಕ. ಜಿಲ್ಲಾ ಸರಕಾರಿ ನೌಕರರ ಸಂಘದ 33 ಸೆಂಟ್ಸ್ ಜಮೀನನ್ನು ಸರಕಾರಕ್ಕೆ ನಿಗದಿಪಡಿಸಿದ ಮಂಗಳೂರು ಉಪವಿಭಾಗಾಧಿಕಾರಿಯ ಆದೇಶದ ವಿರುದ್ಧ ಸಂಘವು ಸಲ್ಲಿಸಿದ ದಾವೆಯನ್ನು ಮ೦ಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ತಿರಸ್ಕರಿಸಿ ಅರ್ಜಿ ವಜಾಗೊಳಿಸಿದೆ.

ನಗರದ ಹೃದಯಭಾಗದಲ್ಲಿ ಮಿನಿ ವಿಧಾನಸೌಧ ಕಟ್ಟಡದ ಬಳಿಯಿರುವ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸ೦ಘದ ಸ್ವಾಧೀನ ಮತ್ತು ಒಡೆತನಕ್ಕೊಳಪಟ್ಟ ಮ೦ಗಳೂರು ತಾಲೂಕು ಅತ್ತಾವರ ಗ್ರಾಮದ ಸರ್ವೆ ನಂ.278/2B ಗೆ ಒಳಪಟ್ಟ 33 ಸೆಂಟ್ಸ್ ಸ್ಥಳದ ಪಹಣಿಯನ್ನು ರದ್ದುಪಡಿಸಿ ಸರಕಾರದ

ಹೆಸರಿಗೆ ನಿಹಿತ ಪಡಿಸುವಂತೆ ಹಾಗೂ ಸದರಿ ಸ್ಥಿರಾಸ್ಥಿಯಲ್ಲಿರುವ ಕಟ್ಟಡವನ್ನು ಜಿಲ್ಲಾ ಸಂಘದ ಸ್ವಾಧೀನತೆಯಿಂದ ಬಿಡಿಸಿ ಸರಕಾರದ ವಶಕ್ಕೆ ಪಡೆದು ಅಕ್ರಮ ಎಸಗಿದ ಸಂಬಂಧಪಟ್ಟ ಜಿಲ್ಲಾ ಪದಾಧಿಕಾರಿಗಳ ವಿರುದ್ಧ ಭೂ ಕಂದಾಯ ಕಾಯ್ದೆ 192 ಎ ಪ್ರಕಾರ ಕ್ರಮ ಕೈಗೊಳ್ಳಲು ಮ೦ಗಳೂರಿನ ತಹಸೀಲ್ದಾರ್ ರವರಿಗೆ ಮಂಗಳೂರಿನ ಸಹಾಯಕ ಆಯುಕ್ತರು ಮತ್ತು ಉಪವಿಭಾಗ ದಂಡಾಧಿಕಾರಿಗಳ ನ್ಯಾಯಾಲಯ ದಿನಾ೦ಕ 30.11.2021 ರ೦ದು ಆದೇಶ ನೀಡಿತ್ತು.

ಕಳೆದ ಆರು ದಶಕಗಳಿಂದ ತನ್ನ ಸ್ವಾಧೀನದಲ್ಲಿದ್ದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಕಟ್ಟಡ ಸಹಿತ ಸ್ಥಿರಾಸ್ತಿಯನ್ನು ರಕ್ಷಿಸಿಕೊಳ್ಳಲು ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಉಪವಿಭಾಗಾಧಿಕಾರಿಯ ಆದೇಶ ರದ್ದುಪಡಿಸುವಂತೆ ಜಿಲ್ಲಾ ಸಂಘವು ದಾವೆ ಹೂಡಿತ್ತು.

ಸದರಿ ದಾವೆಯಲ್ಲಿ ಸಲ್ಲಿಸಲಾದ ಮಧ್ಯಂತರ ಅರ್ಜಿಯ ಮೇಲೆ ಆದೇಶ ಹೊರಡಿಸಿದ ನ್ಯಾಯಾಲಯವು ದಾವೆಯ ಮುಂದಿನ ವಾಯಿದೆ ವರೆಗೆ ಎ.ಸಿ. ಕೋರ್ಟಿನ ಆದೇಶಕ್ಕೆ ದಿನಾ೦ಕ 5.1.2022 ರ೦ದು ತಡೆಯಾಜ್ಞೆ ನೀಡಿತ್ತು.
ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಸಹಾಯಕ ಆಯುಕ್ತರ ನ್ಯಾಯಾಲಯದ ಆದೇಶದ ವಿರುದ್ಧ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಲು ಅವಕಾಶವಿಲ್ಲ ಎಂಬ ಸರಕಾರಿ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಮಂಗಳೂರಿನ ಸಹಾಯಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಸಂಘವು ಹೂಡಿದ ದಾವೆಯನ್ನು ತಿರಸ್ಕರಿಸಿ ದಿನಾಂಕ 14.2.2022 ರಂದು ಆದೇಶ ಹೊರಡಿಸಿದೆ.

BELTHANGADY

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬಂಧನ..! ಶಾಸಕ ಪೂಂಜಾ ಪ್ರತಿಭಟನೆ

Published

on

ಬೆಳ್ತಂಗಡಿ : ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ರಾತೋರಾತ್ರಿ ಬಂಧಿಸಿದ್ದಾರೆ. ಆದ್ರೆ, ಈ ಬಂಧನವನ್ನು ವಿರೋಧಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಡೀ ರಾತ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಬೆಳ್ತಂಗಡಿಯ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗಕ್ಕೆ ಮೇ 18 ರ ಸಂಜೆ ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಅಕ್ರಮ ಗಣಿಗಾರಿಕೆಯ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರ ಜೊತೆಯಲ್ಲಿ ದಾಳಿಯನ್ನು ನಡೆಸಲಾಗಿತ್ತು. ಈ ವೇಳೆ ಸ್ಥಳದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದ್ದು, ಸ್ಥಳದಿಂದ ಒಂದು ಹಿಟಾಚಿ, ಕಂಪ್ರೆಸರ್, ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು. ವಿಚಾರಣೆಯ ವೇಳೆ ಈ ಅಕ್ರಮ ಗಣಿಗಾರಿಕೆ ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರದ್ದು ಎಂದು ಗೊತ್ತಾಗಿತ್ತು.

ಅಕ್ರಮ ಗಣಿಗಾರಿಕೆ ಸಾಬೀತಾದ ಹಿನ್ನೆಲೆಯಲ್ಲಿ ರಾತೋ ರಾತ್ರಿ ಶಶಿರಾಜ್ ಶೆಟ್ಟಿ ಅವರ ಮನೆಗೆ ನುಗ್ಗಿ ಅವರನ್ನು ಬಂಧಿಸಿದ್ದರು. ಈ ವಿಚಾರ ತಿಳಿದು ಠಾಣೆಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಶಶಿರಾಜ್ ಶೆಟ್ಟಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ರು. ಆದ್ರೆ, ಶಾಸಕರ ಮಾತಿಗೆ ಒಪ್ಪದ ಪೊಲೀಸರು ಆರೋಪಿಯ ವಿರುದ್ಧ ಎಫ್‌ ಐ ಆರ್ ದಾಖಲಿಸಿಕೊಂಡಿದ್ದಾರೆ. ಇದರಿಂದ ಆಕ್ರೋಶಿತರಾದ ಶಾಸಕ ಪೂಂಜಾ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

ಪೊಲೀಸರ ಮೇಲೆ ಕಾಂಗ್ರೆಸ್ ಏಜೆಂಟರ ಆರೋಪ :

ರಾತೋರಾತ್ರಿ ಮನೆಗೆ ನುಗ್ಗಿದ ಪೊಲೀಸರು ಅಕ್ರಮದಲ್ಲಿ ಭಾಗಿಯಾದ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ ಅಂತ ಶಾಸಕ ಪೂಂಜಾ ಆರೋಪಿಸಿದ್ದಾರೆ. ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಸರ್ಕಾರ ಬಂದಾಗ ನೋಡಿಕೊಳ್ಳುವುದಾಗಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ.

Continue Reading

LATEST NEWS

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹ*ತ್ಯೆಗೆ ಯತ್ನ

Published

on

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಆಕೆಯ ತಂಗಿ ಯಶೋಧಾ ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮನೆಯಲ್ಲಿ ಫಿನಾಯಲ್ ಸೇವಿಸಿ ಜೀವಾಂತ್ಯಗೊಳಿಸಲು ಯತ್ನಿಸಿದ ಆಕೆಯನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಯಿತು. ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಕೊಲೆಗೀಡಾದ ಅಂಜಲಿ
ಅಂಜಲಿ ಅಂಬಿಗೇರ ಹ*ತ್ಯೆ ಖಂಡಿಸಿ ಶನಿವಾರ (ಮೇ 18) ರಂದು ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಯಶೋಧಾ ಕೂಡ ಭಾಗಿಯಾಗಿದ್ದಳು.

ಪ್ರತಿಭಟನೆ ವೇಳೆ ಯಶೋಧಾ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ರಾತ್ರಿ ಪಿನಾಯಲ್​ ಸೇವಿಸಿ ಜೀವಾಂತ್ಯಗೊಳಿಸಲು ಯತ್ನಿಸಿದ್ದಾಳೆ. ಅಕ್ಕನ ಸಾ*ವಿನಿಂದ ಮನನೊಂದಿದ್ದ ಯಶೋಧಾ ಆತ್ಮಹ*ತ್ಯೆಗೆ ಯತ್ನಿಸಿದ್ದಾಳೆ.

ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

ಏನಿದು ಪ್ರಕರಣ ?

ಮೇ 15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬೆಳ್ಳಂಬೆಳಗ್ಗೆ ಯುವತಿಯ ಭೀಕರ ಹ*ತ್ಯೆ ನಡೆದಿತ್ತು. ಅಂಜಲಿ ಅಂಬಿಗೇರ (21) ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಏಕಾಏಕಿ ಮನೆಗೆ ನುಗ್ಗಿದ್ದ. ಬಳಿಕ ಆಕೆಯ ಮನೆಯವರ ಎದುರೇ ಅಂಜಲಿಯನ್ನ ಭೀಕರವಾಗಿ ಹ*ತ್ಯೆಗೈದಿದ್ದ. ಪರಾರಿಯಾಗಿದ್ದ ಆರೋಪಿಯನ್ನು ಈಗಾಗಲೇ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

Continue Reading

DAKSHINA KANNADA

‘ಆರ್‌ಸಿಬಿ’ ಸೂಪರ್‌ ಕಮ್‌ಬ್ಯಾಕ್..! ಕ್ರೀಡಾಂಗಣದಲ್ಲಿ ಸ್ಟಾರ್ಸ್‌ ಕಲರವ

Published

on

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ಕಡೆ ಮಳೆಯ ಆರ್ಭಟ. ಇನ್ನೊಂದು ಕಡೆ ಸತತ 7 ಪಂದ್ಯಗಳಲ್ಲಿ ಸೋತು ಪ್ಲೇ ಆಫ್ ಕನಸಲ್ಲಿದ್ದ ತಂಡಕ್ಕೆ ಈ ಪದ್ಯ ಅದೃಷ್ಟವನ್ನು ತಂದುಕೊಟ್ಟಿದೆ. ಒಂದು ಕಡೆ ಪ್ಲೇ ಆಫ್ ಗೆ ಹೋಗಲು ರನ್ ಮಾತ್ರ ಅಲ್ಲ, ನಿಗದಿತ ರನ್ನಿನ ಒಳಗಡೆ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಕಟ್ಟಿ ಹಾಕಬೇಕಿತ್ತು.

 

ಅದೃಷ್ಟ ಹೊತ್ತು ತಂದ ಮಳೆರಾಯ

ಇನ್ನು ವಿಶೇಷ ಅಂದ್ರೆ ಬೆಂಗಳೂರಿನ ಹಲವು ಕಡೆ ಮಳೆರಾಯನ ಆರ್ಭಟ ಜೋರಾಗಿತ್ತು. ಎಡೆಬಿಡದೆ ಸುರಿದ ಮಳೆಯಿಂದ ಸಂಚಾರಕ್ಕೂ ಅಡ್ಡಿ ಉಂಟಾಗಿತ್ತು.  ಅದೃಷ್ಟ ಅಂದ್ರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಲ್ಪ ಹೊತ್ತಷ್ಟೇ ಮಳೆ ಸುರಿದಿದೆ. ಇದು ಮಳೆರಾಯನ ಕೃಪೆಯೆಂದೇ ನೆಟ್ಟಿಗರು ಹೇಳುತ್ತಿದ್ದಾರೆ. ಒಂದು ವೇಳೆ ಮಳೆಯಬ್ಬರ ಜೋರಾಗಿದ್ದು ಪಂದ್ಯ ಮಳೆಗೆ ಆಹುತಿಯಾಗಿದ್ದರೆ ಆರ್‌ಸಿಬಿ ಒಂದು ಆಂಕ ಪಡೆದು ಪಂದ್ಯಕೂಟದಿಂದ ನಿರ್ಗಮಿಸಬೇಕಾಗಿತ್ತು.

ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ. ಆರ್ಸಿಬಿ ಫ್ಯಾನ್ಸ್ ಗಳ ಹರ್ಷ ಹೇಳತೀರದು. ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಟಾರ್ಸ್‌ ಕಲರವ

ಇನ್ನೂ ಈ ರೋಚಕ ಪಂದ್ಯ ವನ್ನು ವೀಕ್ಷಿಸಲು ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್, ಕಾಂತಾರ ಸಿನೆಮಾ ರಿಷಬ್ ಶೆಟ್ಟಿ ಭಾಗಿಯಾಗಿದ್ದರು. ಇನ್ನೂ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡು ಚಿಯರ್‌ ಅಪ್ ಮಾಡಿದ್ದು, ಕ್ಯಾಮೆರಾ ಕಣ್ಣಿಗೆ ಇಬ್ಬರೂ ಪೋಸ್ ನೀಡಿದ್ದಾರೆ. ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಆರ್‌ಸಿಬಿ ಫ್ಯಾನ್‌ ಆಗಿದ್ದು ನಿನ್ನೆಯ ಪಂದ್ಯ ವನ್ನು ವೀಕ್ಷಣೆ ಮಾಡಿದ್ದಾರೆ.

ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ ನ ಮಹಿಳಾ ತಂಡ ಈ ಬಾರಿಯ ಟ್ರೋಫಿಯನ್ನು ತಂದುಕೊಟ್ಟಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಮಹಿಳಾ ತಂಡ ಜರ್ಸಿಯನ್ನು ತೊಟ್ಟು ಚಿಯರ್ ಅಪ್ ಮಾಡಿದ್ದಾರೆ.

ಇನ್ನು ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಜಯ ಗಳಿಸಿದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಎಂದು ಕಾದು ನೋಡಬೇಕಿದೆ.

Continue Reading

LATEST NEWS

Trending