ದ.ಕ. ಮೊದಲ ದಿನ ಲಾಕ್ ಡೌನ್ ಬಹುತೇಕ ಯಶಸ್ವಿ : ಸುರಿಯುವ ಮಳೆಯ ಮಧ್ಯೆ ಮನೆಯಿಂದ ಹೊರ ಬಾರದ ಜನ..!
ದ.ಕ. ಮೊದಲ ದಿನ ಲಾಕ್ ಡೌನ್ ಬಹುತೇಕ ಯಶಸ್ವಿ : ಸುರಿಯುವ ಮಳೆಯ ಮಧ್ಯೆ ಮನೆಯಿಂದ ಹೊರ ಬಾರದ ಜನ..!
ಮಂಗಳೂರು : ಕೊರೊನಾ ಸೋಂಕು ಹರಡುವಿಕೆಗೆ ತಾತ್ಕಾಲಿಕ ತಡೆ ಹಾಕಲು ಇಂದಿನಿಂದ ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ಜಿಲ್ಲೆಯಲ್ಲಿ ನಿಷೇಧಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 8 ರಿಂದ 11 ರ ವರೆಗೆ ಸಮಯಾವಕಾಶವನ್ನು ನೀಡಲಾಗಿತ್ತು. ಆ ಬಳಿಕ ಜಿಲ್ಲೆ ಸಂಪೂರ್ಣ ಬಂದ್ ಆಗಿತ್ತು. ಲಾಕ್ ಡೌನ ನ ಮೊದಲ ದಿನವಾದ ಇಂದು ಪುತ್ತೂರು, ಉಳ್ಳಾಲ ಪೇಟೆಯಲ್ಲಿ ಜನರ ಸಂಖ್ಯೆ ಅತ್ಯಂತ ವಿರಳವಾಗಿರುವುದು ಕಂಡು ಬಂದಿದೆ.
ಅಗತ್ಯ ವಸ್ತುಗಳ ಖರೀದಿಗೆ ಸಮಯಾವಕಾಶವನ್ನು ನೀಡಿದ್ದರೂ, ಜನ ಮಾತ್ರ ಮನೆಯಿಂದ ಹೊರಗಿಳಿದಿಲ್ಲ. ಪೇಟೆಯಾದ್ಯಂತ ಜನಸಂಖ್ಯೆ ಅತೀ ವಿರಳವಾಗಿದ್ದು, ಬೆರಳೆಣಿಕೆಯ ದಿನಸಿ ಅಂಗಡಿಗಳು ತೆರೆದಿದ್ದುವು.
ಪೆಟ್ರೋಲ್ ಬಂಕ್, ಮೆಡಿಕಲ್, ಹಾಲು ಹಾಗೂ ಪೇಪರ್ ಸ್ಟಾಲ್ ಗಳು ಎಂದಿನಂತೆ ಕಾರ್ಯಾಚರಿಸಲು ಅವಕಾಶವನ್ನು ನೀಡಲಾಗಿತ್ತು. ಬೆಳಿಗ್ಗೆ 11 ರ ವರೆಗೆ ಅಂಗಡಿ ತೆರೆಯಲು ಅವಕಾಶವಿದ್ದರೂ, ಕೆಲವರು ಮಾತ್ರ ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿರುವುದು ಬಹುತೇಕ ಕಡೆಗಳಲ್ಲಿ ಕಂಡು ಬಂದಿದೆ.
ಲಾಕ್ ಡೌನ್ ಜೊತೆಗೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯೂ ಸುರಿಯುತ್ತಿದೆ. ನಿನ್ನೆಯಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿಯೂ ಜನ ಖರೀದಿಗೆ ಇಳಿಯಲು ನಿರಾಸಕ್ತಿ ತೋರಿಸುತ್ತಿದ್ದಾರೆ.
ಜಿಲ್ಲೆಯ ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಸುಳ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪಶ್ಟಿಮಘಟ್ಟ ಪ್ರದೇಶಗಳಲ್ಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿಯಲ್ಲಿ ನೀರಿನ ಮಟ್ಟವೂ ಹೆಚ್ಚಾಗುತ್ತಿದೆ.
ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಕಾರ್ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಲಾಕ್ ಡೌನ್ ಜೊತೆಗೆ ಮಳೆಯೂ ಜನರನ್ನು ರಸ್ತೆಗೆ ಇಳಿಯದಂತೆ ತಡೆದಿದೆ. ಇನ್ನು ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ವಾಹನಗಳ ವಿರುದ್ಧ ಕ್ರಮಕ್ಕೂ ಪೋಲೀಸರು ಮುಂದಾಗಿದ್ದಾರೆ.
ಈ ಸಂಬಂಧ ಆಯಕಟ್ಟಿನ ಸ್ಥಳಗಳಲ್ಲಿ ಪೋಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ಅನಗತ್ಯ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದಾರೆ.
DAKSHINA KANNADA
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!
ಮಂಜೇಶ್ವರ/ಮಂಗಳೂರು: ಈ ಹಿಂದೆ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಕರ್ನಾಟಕದಲ್ಲಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿಯನ್ನು ಬರೆಯುವಂತೆ ಕನ್ನಡ ಪ್ರಾಧಿಕಾರ ಸೂಚನೆ ಕೂಡಾ ನೀಡಿತ್ತು. ಆದರೆ ಕರ್ನಾಟಕದಲ್ಲಿ ಈ ಸೂಚನೆ ಕಟ್ಟುನಿಟ್ಟಾಗಿ ಜಾರಿಯಾಗುವ ಮೊದಲೇ ಕೇರಳದ ಕಾಸರಗೋಡಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.
ಹೌದು, ಕಾಸರಗೋಡಿನ ಮಂಜೇಶ್ವರದಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದ ಡಾ.ಮುರಳೀ ಮೋಹನ ಚೂಂತೂರು ರವರು ಕನ್ನಡ ಪ್ರೇಮ ಮೆರೆದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿನೆಲೆ ಅವರು ಇತ್ತೀಚೆಗೆ ಮಂಗಳೂರು ಭೇಟಿ ನೀಡಿದ ವೇಳೆ ವೈದ್ಯರು ಕೂಡಾ ಕನ್ನಡದಲ್ಲಿ ಔಷಧ ಚೀಟಿಯನ್ನು ಜನರಿಗೆ ಅರ್ಥವಾಗುವಂತೆ ಬರೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.
ಹಾಗಾಗಿ ರಾಜ್ಯದಲ್ಲಿ ಒಬ್ಬ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಮೊದಲ ಸ್ಪಂದನ ನೀಡಿದ್ದರು. ಇದೀಗ ಕೇರಳ ರಾಜ್ಯದಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ತನ್ನ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ.
ಸರ್ಕಾರಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸುವಂತೆ ಸಚಿವರಿಗೆ ಪ್ರಾಧಿಕಾರ ಪತ್ರ
ಅದಾದ ಬಳಿಕ ಆರೋಗ್ಯ ಸಚಿವರು ಪತ್ರಿಕಾ ಹೇಳಿಕೆ ಹೊರಡಿಸಿ, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿ ಬಳಿಕ ಸಾಧಕ ಬಾಧಕ ನೋಡಿಕೊಂಡು ಅನುಷ್ಠಾನಕ್ಕೆ ತರವಲಾಗುವುದು ಎಂದಿದ್ದರು. ಈಗ ಗಡಿನಾಡಿನ ಕನ್ನಡಿಗ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವ ಮೂಲಕ ಇತರರಿಗೆ ಮಾರ್ಗದರ್ಶಿಯಾಗಿರುವುದನ್ನು ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
LATEST NEWS
ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾ*ವು
ಬೆಂಗಳೂರು : ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾ*ವನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಗಬ್ಯೂರು ಗ್ರಾಮದಲ್ಲಿ ನಡೆದಿದೆ.
5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃ*ತ ಬಾಲಕ. ಗಬ್ಯೂರ್ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಇಂದು ದೆಹಲಿ ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ ಕ್ಯಾಬಿನೆಟ್ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾ ಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು . ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.