BANTWAL
ದ.ಕ. ಜಿಲ್ಲೆಯಲ್ಲಿ ಸೋಮವಾರದಿಂದ ಸೆಮಿ ಅನ್ ಲಾಕ್ : ಬಸ್ ಸಂಚಾರಕ್ಕೆ ಇಲ್ಲ ಅವಕಾಶ..!
ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಾಳೆ ಸೋಮವಾರದಿಂದ ಲಾಕ್‌ಡೌನ್ ಕೊಂಚ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಧಿಕೃತ ಪ್ರಕಟನೆ ಹೊರಡಿಸಿದ್ದಾರೆ.
ಜುಲೈ 5ರವರೆಗೆ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಆ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಡಿಸಿ ಸ್ಪಷ್ಪಪಡಿಸಿದ್ದಾರೆ.
ಪ್ರತಿ ದಿನ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಲ್ಲದೆ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಆದರೆ ರಿಕ್ಷಾ ಮತ್ತು ಟ್ಯಾಕ್ಸಿಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆಯಾದರೂ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ದಿನಸಿ ಅಂಗಡಿ, ಮಾಂಸದಂಗಡಿ, ತಳ್ಳು ಗಾಡಿಗಳಿಗೂ ಮಧ್ಯಾಹ್ನ ಒಂದು ಗಂಟೆ ವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
ಜಿಲ್ಲಾಧಿಕಾರಿ ಅವರ ಸಮಗ್ರ ವಿವರದ ಪ್ರತಿ:
BANTWAL
ಬಂಟ್ವಾಳ: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.
ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ.ಇದರ ಜೊತೆಗೆ ಗೊದ್ರೇಜ್ , ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ.
ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು ನಡೆಯುವುದನ್ನು ಸ್ವತಃ ಅಲ್ಲಿನ ಅರ್ಚಕರು ಸಿ.ಸಿ.ಕ್ಯಾಮರಾದ ಮೂಲಕ ನೋಡಿದ್ದಾರೆ ಆದರೂ ಕಳ್ಳರ ಬಳಿ ಮಾರಕಾಸ್ತ್ರಗಳು ಇರುವುದು ಕಂಡು ಬಂದದ್ದರಿಂದ ತಡೆಯಲು ಅಸಾಧ್ಯವಾಗಿತ್ತು. ಮತ್ತು ಈ ಕಳ್ಳತನದ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಸುದ್ದಿಯಾಗಿತ್ತು. ಅಂತಹ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕಳ್ಳರು ಯೋಚಿಸಿಯಾಗಿರಬೇಕು,ಇಲ್ಲಿನ ಸಿ.ಸಿ.ಕ್ಯಾಮರಾ ದ ಪೂಟೇಜ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಿಗ್ಗೆ (ನ.4ರಂದು) ದೇವಸ್ಥಾನದ ಸಿಬ್ಬಂದಿಯೊರ್ವರು 6.ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.
ಇತ್ತೀಚೆಗೆ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.
BANTWAL
ಬಂಟ್ವಾಳ : ಬಸ್ – ಸ್ಕೂಟರ್ ಮುಖಾಮುಖಿ ; ಸವಾರ ಸಾ*ವು
ಬಂಟ್ವಾಳ: ಖಾಸಗಿ ಬಸ್ ಹಾಗೂ ಸ್ಕೂಟರ್ ಢಿಕ್ಕಿಯಾಗಿ ಸವಾರ ಮೃ*ತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ರವಿವಾರ (ನ.3) ರಾತ್ರಿ ನಡೆದಿದೆ.
ತುಂಬೆ ನಿವಾಸಿ ಪ್ರವೀಣ್ (30) ಮೃ*ತ ದುರ್ದೈವಿ ಎಂದು ಗುರುತಿಸಲಾಗಿದೆ.
ಸಹ ಸವಾರ ಸಂದೀಪ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದರೆ ಸ್ಕೂಟರನ್ನು ಯಾರು ಚಲಾಯಿಸುತ್ತಿದ್ದರು ಎಂಬುದು ಖಚಿತಗೊಂಡಿಲ್ಲ.
ಖಾಸಗಿ ಬಸ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ . ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BANTWAL
ಬಂಟ್ವಾಳ: ಇಬ್ಬರು LPG ಸಿಲಿಂಡರ್ ಕಳ್ಳರ ಬಂಧನ.!
ಬಂಟ್ವಾಳ : ಗ್ಯಾಸ್ ಸಿಲಿಂಡರ್ ಕಳವು ಗೈದಿದ್ದ ಇಬ್ಬರು ಖದೀಮ ಕಳ್ಳರನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು ಹಳೆಕೋಟೆ ನಿವಾಸಿ ಇಮ್ತಿಯಾಝ್ (38) ಬಂಧಿತ ಆರೋಪಿಗಳು.
ಮಿತ್ತೂರು ಮತ್ತು ಕೊಡಾಜೆ ಎಂಬಲ್ಲಿ ಮನೆಯಿಂದ ಅನಿಲ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ವಸ್ತುಗಳನ್ನು ಈ ಇಬ್ಬರು ಆರೋಪಿಗಳು ಕಳವು ಮಾಡಿದ್ದು, ಕಳವು ಪ್ರಕರಣ ದಾಖಲಾಗಿತ್ತು. ಕಳ್ಳರ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾಧ ತಂಡದ ಸಿಬ್ಬಂದಿಗಳು ಮಾಣಿ ಜಂಕ್ಷನ್ ನಲ್ಲಿ ಆಟೋ ರಿಕ್ಷಾ ಸಹಿತ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಟ್ಲ ಠಾಣೆಯ ಮಿತ್ತೂರು ಮತ್ತು ಕೊಡಾಜೆಯ ಎರಡು ಮನೆ ಕಳವು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2.50 ಲಕ್ಷ ರೂ ಎಂದು ಅಂದಾಜಿಸಲಾಗಿದೆ.
- LATEST NEWS6 days ago
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಕ್ಕಿಯ ಜೊತೆಗೆ ಉಚಿತವಾಗಿ ಸಿಗಲಿವೆ ಈ 9 ವಸ್ತುಗಳು.!
- DAKSHINA KANNADA3 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- kerala6 days ago
ಕಾಸರಗೋಡು : ‘ಮಗು’ ವನ್ನು ರಕ್ಷಿಸಿದ ‘ದೈವ’ನರ್ತಕ ; ವಿರೋಚಿತ ಕಥೆ !!
- FILM6 days ago
ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ಕರಾವಳಿ ಬೆಡಗಿ ಆ್ಯಂಕರ್ ಅನುಶ್ರೀ