ಕೊರೊನಾ ಕಾಲರ್ ಟ್ಯೂನ್ ಕೇಳಿ ಬೇಸತ್ತ ಡಿಕೆಶಿ: ಬಿಜೆಪಿ ಸರ್ಕಾರದ ಮೇಲೆ ಗರಂ
ಬೆಂಗಳೂರು: ದೇಶದಾದ್ಯಂತ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈ ಮಹಾಮಾರಿ ಸೋಂಕಿಗೆ ಜನರು ಭಯಭೀತರಾಗಿದ್ದಾರೆ.
ಈ ನಡುವೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಮಾಡುತ್ತಿದೆ.
ಯಾರಿಗಾದರೂ ದೂರವಾಣಿ ಕರೆ ಮಾಡಿದರೆ ಕೊರೊನಾ ಮುನ್ನೆಚ್ಚರಿಕೆ ಸಂದೇಶ ಬರುತ್ತದೆ.
ಆದರೆ ಇದಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಈ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ ಡಿಕೆಶಿ, “ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ’’ ಹಾಕಿದಂತಾಗಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ದೂರವಾಣಿ ಕರೆಗಳ ಆರಂಭದಲ್ಲಿ ನೀಡುತ್ತಿರುವ ಕರೋನಾ ಕುರಿತ ಮುನ್ನೆಚ್ಚರಿಕೆ ಸಂದೇಶ”.
“ದೇಶದ ಜನ ಇದರಿಂದ ತಲ್ಲಣಿಸಿ ಹೋಗಿದ್ದಾರೆ. ಹಣ್ಣು, ತರಕಾರಿಯಿಂದ ಹಿಡಿದು ಷೇರುಗಳವರೆಗೆ ಸರ್ವ ಮಾರುಕಟ್ಟೆಯೂ ಪಾತಾಳಕ್ಕೆ ಕುಸಿದಿದೆ. ದೇಶದ ಆರ್ಥಿಕ ವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ.
ಸಮಸ್ಯೆ ಇರುವೆಡೆ ಕ್ರಮ ಕೈಗೊಳ್ಳಬೇಕೇ ಹೊರತು ಈ ರೀತಿ ಸಾಮೂಹಿಕವಾಗಿ ಜನರನ್ನು ಹೆದರಿಸುವುದು ಸಲ್ಲದು” ಎಂದು ಅಭಿಪ್ರಾಯಪಟ್ಟಿದ್ದಾರೆ.
ಜನರನಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪ್ರತಿ ಪೋನ್ ಕರೆಗೂ ಮುನ್ನ ಕೊರೊನಾ ಮುನ್ನಚ್ಚರಿಕಾ ಸಂದೇಶಗಳನ್ನು ನೀಡುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಸರ್ಕಾರ ನೀಡಿರುವ ಅಂಕಿ ಅಂಶಗಳ ಪ್ರಕಾರ 44 ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ.
ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.
ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.
2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.