Connect with us

LATEST NEWS

ರಾಜ್ಯದಲ್ಲಿ ಅಮುಲ್​ ಮಾರಾಟಕ್ಕೆ ವಿರೋಧ: ನಂದಿನಿ ಉತ್ಪನ್ನಗಳನ್ನು ಖರೀದಿಸಿ ಹಂಚಿದ ಡಿಕೆ ಶಿವಕುಮಾರ್..!

Published

on

ಕೆಪಿಸಿಸಿ ಅಧ್ಯಕ್ಷ ಡಿ ಕೇ ಶಿವ ಕುಮಾರ್ ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮುಲ್‌ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದರು.

ಹಾಸನ : ಗುಜರಾತ್ ಮೂಲದ ಹಾಲು ಸಹಕಾರಿ ಸಂಘ ಅಮುಲ್, ಬೆಂಗಳೂರಿನ ಹಾಲು ಮಾರುಕಟ್ಟೆ ಪ್ರವೇಶಿಸಲು ನಿರ್ಧರಿಸಿರುವುದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ, 

ಸರ್ಕಾರ ಅಮುಲ್ ಸಮರ್ಥಿಸಿದರೆ ಕಾಂಗ್ರೆಸ್, ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ,

ಕೆಪಿಸಿಸಿ ಅಧ್ಯಕ್ಷ ಡಿ ಕೇ ಶಿವ ಕುಮಾರ್ ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮುಲ್‌ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದರು.

ಹಾಸನದ ಹಾಸನದ ಹೇಮಾವತಿ ಪ್ರತಿಮೆ ಬಳಿ ಇರುವ ನಂದಿನಿ ಹಾಲು ಮತ್ತು ಉತ್ಪನ್ನಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಹಾಲಿನ ಉತ್ಪನ್ನಗಳನ್ನು ಖರೀದಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಲಿನ ಉತ್ಪನ್ನಗಳಾದ ಮೈಸೂರು ಪಾಕ್, ಪೆಡಾ, ಬಿಸ್ಕೆಟ್, ಚಾಕಲೇಟ್​​ನ್ನು ಪಕ್ಷದ ಅಧ್ಯಕ್ಷನಾಗಿ ಖರೀದಿ ಮಾಡಿದ್ದೇನೆ. ನಮ್ಮ ರೈತರನ್ನು ಉಳಿಸಿಕೊಳ್ಳಬೇಕು, ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕು’

ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ ಅನ್ನು ಹೈಜಾಕ್ ಮಾಡಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ.

ಆದರೆ ಬಿಜೆಪಿ ಸರ್ಕಾರಕ್ಕೆ ಇದು ನೆನಪಿರಲಿ ಕನ್ನಡಿಗರು ಎಂದಿಗೂ ತಮ್ಮ ಸ್ವಾಭಿಮಾನ ಮಾರಿಕೊಳ್ಳುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

LATEST NEWS

ಏಪ್ರಿಲ್ 3 ರ ವರೆಗೆ ಭಾರೀ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ?

Published

on

ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್‌ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?

ಮಾರ್ಚ್ 29 ಮತ್ತು 30 ರಂದು ಪಶ್ಚಿಮ ಹಿಮಾಲಯ ಪ್ರದೇಶದ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಮಾರ್ಚ್ 29 ರಿಂದ 31 ರ ವರೆಗೆ ವಾಯುವ್ಯ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಸಾಧರಾಣ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?

ಚಂಡಮಾರುತದ ಪರಿಣಾಮವಾಗಿ, ಬಿಹಾರದ, ದಕ್ಷಿಣ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 3ರ ವರೆಗೆ ಆರ್ದ್ರ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಬಿಹಾರ ಮತ್ತು ಜಾರ್ಖಂಡ್‌ಗಳು ಮುಂದಿನ ಕೆಲವು ದಿನಗಳವರೆಗೆ ಮಳೆ ಸಾಧ್ಯತೆ ಇದೆ.

ಮಾರ್ಚ್ 31 ರಂದು ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳ ವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

ಇದಲ್ಲದೆ, ಅರುಣಾಚಲ ಪ್ರದೇಶದದಲ್ಲಿ ಏಪ್ರಿಲ್ 1 ರಂದು ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Continue Reading

DAKSHINA KANNADA

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ….ಅವರ ಆಸ್ತಿ ವಿವರ ಇಲ್ಲಿದೆ!

Published

on

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ. ಆಗಿದೆ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ., ಇನ್ನು ಒಟ್ಟು 9,62,010 ರೂ. ಅನ್ನು ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.
ಇನ್ನು ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್​ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಅವರು, ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.

ಬ್ರಿಜೇಶ್‌ ಚೌಟ ಯಾರು?

ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಇದನ್ನೂ ಓದಿ ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!

ನಳಿನ್ ಬದಲು ಚೌಟ ಕಣಕ್ಕೆ :

ಕಳೆದ 15 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಹಿಡಿತದಲ್ಲಿದೆ. ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲ್ ಅವರು ಗೆದ್ದುಕೊಂಡು ಬಂದಿದ್ದರು. ಈ ಬಾರಿ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಆ ಮೂಲಕ ನಳಿನ್ ಕುಮಾರ್ ಕಟೀಲ್​ಗೆ ಟಿಕೆಟ್​ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 4 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.

Continue Reading

bangalore

ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!

Published

on

ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

revannaನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ.

2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿದವಿಟ್‌ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ;ಅವರ ಆಸ್ತಿ ವಿವರ ಇಲ್ಲಿದೆ!

ಪ್ರಜ್ವಲ್ ರೇವಣ್ಣ ಮಾಡಿದ ಸಾಲ
ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್​ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.

ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ
ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.

Continue Reading

LATEST NEWS

Trending