Wednesday, December 1, 2021

ಉತ್ತರಪ್ರದೇಶದ ಹಿಂಸಾಚಾರಕ್ಕೆ ಕೇಂದ್ರ ಸರಕಾರವೇ ಕಾರಣ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಮಂಗಳೂರು: ಉತ್ತರ ಪ್ರದೇಶದಲ್ಲಿ ರೈತ ಹೋರಾಟದ ಸಂಧರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇದಕ್ಕೆಲ್ಲಾ ಕೇಂದ್ರ ಸರಕಾರವೇ ಕಾರಣ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.


ಸುಳ್ಯ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾಗಲು ಬಂದ ಡಿಕೆ ಶಿವಕುಮಾರ್‌ ಇಂದು ಮಾಧ್ಯಮಗಳ ಜೊತೆ ಮಾತನಾಡಿದರು.

ದೇಶದಲ್ಲಿ ಕಾನೂನು ಎನ್ನುವುದೇ ಇಲ್ಲದಂತಾಗಿದೆ. ಪ್ರತಿಭಟನೆ ಹೋರಾಟ ಮಾಡುವುದು ರೈತರ ಹಕ್ಕು. ಗಾಂಧೀಜಿ ಅಹಿಂಸೆಯ ಮೂಲಕ ಹೋರಾಟ ಮಾಡಿ ಅಂತಾ ಹೇಳಿರೋದು.

ಹನ್ನೊಂದು ತಿಂಗಳಿಂದ ರೈತರು ಬೀದಿಗಿಳಿದು ಹೋರಾಟ ಮಾಡ್ತಿದ್ದಾರೆ. ಕೇಂದ್ರ ಸಚಿವರ ಮಗ, ಉಪಮುಖ್ಯಮಂತ್ರಿ ಮಗ ಪ್ರತಿಭಟನಾಕಾರರನ್ನು ಮರ್ಡರ್ ಮಾಡಿದ್ದಾರೆ.

ಈ ಘಟನೆಯಲ್ಲಿ ನಾಲ್ಕು ಜನ ಸತ್ತಿದ್ದಾರೆ. ಹೋರಾಟ ಮಾಡ್ತಿದ್ದವರನ್ನು ಗಾಡಿ ಹತ್ತಿಸಿ ಕೊಂದಿದ್ದಾರೆ. ಇವತ್ತಿಗೂ ಅರೆಸ್ಟ್ ಮಾಡಿಲ್ಲ, ಮಂತ್ರಿಯಿಂದ ರಾಜೀನಾಮೆ ಪಡೆದಿಲ್ಲ ಎಂದು ದೂರಿದರು. ಪ್ರಿಯಾಂಕಾ ಗಾಂಧೀ ಅವರ ಮೇಲೂ ಮ್ಯಾನ್ ಹ್ಯಾಡ್ಲಿಂಗ್ ಮಾಡಿದ್ದಾರೆ.

ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಇದು ಭಾರತದ ಸಂಸ್ಕೃತಿಗೆ ಅವಮಾನ ಮಾಡಿದಂತೆ. ಬ್ರಿಟೀಷರಿಗಿಂತ ಹೀನಾಯವಾಗಿ ನಡೆದುಕೊಂಡಿದ್ದಾರೆ.

ಗಾಂಧೀಜಿಯವರು ಬದುಕಿದ್ರೆ ಏನು ಹೇಳ್ತಿದ್ರು, ಏನ್ ಮಾಡ್ತಿದ್ರು ಅಂತಾ ಅರ್ಥ ಆಗ್ತಿಲ್ಲ. ಈ ದೇಶಕ್ಕೆ ಗಾಂಧಿ ಕುಟುಂಬ ಎಲ್ಲಾ ವರ್ಗದ ಜನರಿಗೆ ನ್ಯಾಯ ಕೊಡಿಸಿದ್ದಾರೆ.

ಯು.ಪಿ ಪೊಲೀಸರಿಗೆ ಇವರ್ಯಾರು ಹೆದರಲ್ಲ. ನಾವೆಲ್ಲಾ ಅವರ ಪರವಾಗಿ ನಿಲ್ತೇವೆ, ಹೋರಾಟ ಮಾಡ್ತೇವೆ ಎಂದು ನುಡಿದರು.

ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ದಾಖಲಾದ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದೇನೆ. ನಾವು ನ್ಯಾಯಾಲಯಕ್ಕೆ ಗೌರವ ಕೊಡುವವರು ಎಂದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...