Connect with us

DAKSHINA KANNADA

ದಕ್ಷಿಣಕನ್ನಡ ಜಿಲ್ಲೆಯಲ್ಲಿ 250ಕ್ಕೆ ಏರಿಕೆಯಾದ ಕೊರೊನಾ ಬಲಿ

Published

on

ಮಂಗಳೂರು ಅಗಸ್ಟ್ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 246 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 246 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8071 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 641 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1948 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕೂಡ ಜಿಲ್ಲೆಯಲ್ಲಿ 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 250 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -150, ಬಂಟ್ವಾಳ -47, ಸುಳ್ಯ -7, ಬೆಳ್ತಂಗಡಿ – 15, ಪುತ್ತೂರು -16, ಬೆಳ್ತಂಗಡಿ -15 ಹೊರ ಜಿಲ್ಲೆಯವರು -11 ಪ್ರಕರಣಗಳಿವೆ.

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending