Connect with us

    DAKSHINA KANNADA

    ದ.ಕ – ಉಡುಪಿಯಲ್ಲಿ ಹೆಚ್ಚುತ್ತಿದೆ ಕೊರೊನಾ : ಮಣಿಪಾಲ ಎಂಐಟಿಯಲ್ಲಿ 27 ಪಾಸಿಟಿವ್..!

    Published

    on

    ಮಂಗಳೂರು/ಉಡುಪಿ :  ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಹಾಮಾರಿ ಕೊರೊನಾ ಮತ್ತೆ ಹೆಚ್ಚಾಗುತ್ತಿದ್ದು ರಾಜ್ಯದ 2 ನೇ ಕೋರೊನಾ ಹಾಟ್ ಸ್ಪಾಟ್ ಆಗುವ ಭೀತಿ ಎದುರಾಗಿದೆ.

    ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 72 ಮಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದ್ದು ಕೇರಳದಿಂದ ಬಂದ ವಿದ್ಯಾರ್ಥಿಗಳಿಂದಲೇ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

    ಜಿಲ್ಲೆಯಲ್ಲಿ ಇಂದು ಕೊರೋನಾಗೆ ಯಾರೂ ಬಲಿಯಾಗಿಲ್ಲವಾದರೂ ಈವರೆಗೆ ಬಲಿಯಾದವರ ಸಂಖ್ಯೆ ಒಟ್ಟು ಸಂಖ್ಯೆ 741 ಕ್ಕೇರಿಕೆಯಾಗಿದೆ.

    ಜೊತೆಗೆ ಜಿಲ್ಲೆಯಲ್ಲಿ ಇಂದು ಕೇವಲ 25 ಮಂದಿ ಮಾತ್ರ ಕೊರೋನಾದಿಂದ ಗುಣಮುಖರಾಗಿದ್ದು ಈವರೆಗೆ ಒಟ್ಟು 34,935 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

    ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 378 ಆಕ್ವೀವ್ ಕೇಸ್ ಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    ಉಡುಪಿ ವರದಿ : ಉಡುಪಿಯಲ್ಲೂ ಕೊರೋನಾ ಪಾಸಿಟಿವ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇದೇ ಮೊದಲ ಬಾರಿಗೆ 42 ಪ್ರಕರಣಗಳು ದಾಖಲಾಗಿವೆ.

    ಮಣಿಪಾಲದ ಎಂಐಟಿ ಒಂದೇ ಕಡೆ ಇಂದು 27 ಪ್ರಕರಣ ಪತ್ತೆಯಾಗಿದ್ದು ಎಂಐಟಿ ಕ್ಯಾಂಪಸನ್ನು ಕಂಟೈನ್ಮೆಂಟ್ ಜೋನ್ ಎಂದು ಜಿಲ್ಲಾಡಳಿತ ಘೋಷಣೆ ಮಾಡಿದೆ.

    ಇಲ್ಲಿ ಕೂಡ ಹೊರ ರಾಜ್ಯದ ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಂಡಿದೆ.

    ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಿರುವ ಹಿನ್ನಲೆ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ತೆಗೆದುಕೊಳ್ಳಲು ಎಂಐಟಿ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.

    ಇದೇ ಸಮಯದಲ್ಲಿ ಲ್ಯಾಬೋರೆಟರಿ, ಪ್ರ್ಯಾಕ್ಟಿಕಲ್ ತರಗತಿಗಳನ್ನು ಆಡಳಿತ ಮುಂದೂಡಿದೆ. ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲು ಮಂಡಳಿ ತೀರ್ಮಾನಿಸಿದೆ.

    ಜೊತೆಗೆ ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೋನಾ ಪಾಸಿಟಿವ್ ಕಂಡು ಬಂದಿದ್ದರಿಂದ ಆತಂಕ ಹೆಚ್ಚಾಗಿದೆ.

    ಸಾರ್ವಜನಿಕರಿಗೆ ಸೋಂಕು ಪಸರಿಸದಂತೆ ಮುನ್ನೆಚ್ಚರಿಕೆ ಕ್ರಮಗಳ ಜೊತೆ ಅರಿವು ಮೂಡಿಸುವ ಕಾರ್ಯ ಕೂಡ ಜಿಲ್ಲಾಡಳಿತ ಮತ್ತು ಜಿಲ್ಲಾರೋಗ್ಯಾಧಿಕಾರಿಗಳು ಮಾಡುತ್ತಿದ್ದಾರೆ ಎಂದು ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

    ಖಡಕ್ ಎಚ್ಚರಿಕೆ ರವಾನಿಸಿದ ಉಡುಪಿ ಡಿಸಿ : ಕೋವಿಡ್ ಎರಡನೇ ಅಲೆಯ ಭೀತಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೋವಿಡ್ ಸುರಕ್ಷತಾ ನಿಯಮಗಳಾದ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.

    ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

    ಇಷ್ಟೇ ಅಲ್ಲ ಕಾನೂನು ಉಲ್ಲಂಘಿಸಿ ಕೊರೊನಾ ಹರಡಲು ಕಾರಣರಾಗುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಸ್ವತಃ ಜಿಲ್ಲಾಧಿಕಾರಿಗಳು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಎರಡನೇ ಹಂತದ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಸಾರ್ವಜನಿಕರು ಜಾಗೃತರಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

    ಶಾಪಿಂಗ್ ಮಾಲ್‌ಗಳಲ್ಲಿ, ಅಂಗಡಿಗಳಿಗೆ ತೆರಳುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಅಂಗಡಿಗೆ ಬರುವ ಸಾರ್ವಜನಿಕರ ಪ್ರವೇಶವನ್ನು ಅಂಗಡಿ ಮಾಲಕರು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅಂಗಡಿ ಮಾಲಕರ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

    ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರು 72 ಗಂಟೆಯ ಮೊದಲಿನ ಕೊರೋನದ ನೆಗೆಟಿವ್ ವರದಿಯನ್ನು ಕಡ್ಡಾಯ ವಾಗಿ ತರಬೇಕು.

    ಹೊರ ರಾಜ್ಯಗಳಿಂದ ನೆಗೆಟಿವ್ ವರದಿಯನ್ನು ತಾರದೆ ಬಂದವರ ಬಗ್ಗೆ ಸಾರ್ವಜನಿಕರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ಯನ್ನು ನೀಡಬೇಕು. ಅವರಿಗೆ ತಕ್ಷಣ ಕೊರೋನ ಪರೀಕ್ಷೆಯನ್ನು ನಡೆಸಲಾಗುವುದು ಎಂದರು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending