DAKSHINA KANNADA
ಹಲಾಲ್ ಪ್ರಮಾಣಪತ್ರಗಳನ್ನು ಹೊಂದಿರುವ ಆಹಾರ ಖರೀದಿಸಬೇಡಿ-ಹಿಂದೂ ಜನಜಾಗೃತಿ
Published
2 years agoon
By
Adminಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ಪೂರ್ತಿಯ ನಿಮಿತ್ತ ಹಿಂದು ರಾಷ್ಟ್ರ ಸಂಕಲ್ಪ ಅಭಿಯಾನದಂತೆ 2000 ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮತ್ತು ರಾಜ್ಯದಾದ್ಯಂತ ಹಲಾಲ್ ವಿರೋಧಿ ಹೋರಾಟ ಸಮಿತಿಯ ಸ್ಥಾಪನೆ ಆಯೋಜನೆ ಮಾಡಲಾಗಿದೆ ಎಂದು ಜನಜಾಗೃತಿ ಸಮಿತಿಯ ಪ್ರಮುಖರು ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಆಗಸ್ಟ್ 31ರಿಂದ ನವೆಂಬರ್ 8ರವರೆಗೆ ಈ ಅಭಿಯಾನ ನಡೆಯಲಿದೆ. ಅಭಿಯಾನದಲ್ಲಿ ದೇಶದಾದ್ಯಂತ 2000ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಿಂದು ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಿದ್ದೇವೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ್ ಶಿಂಧೆ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾರ್ಯಕ್ರಮದ ಅಂಗವಾಗಿ 3000 ಸ್ಥಳಗಳಲ್ಲಿ ಪ್ರವಚನಗಳು, 2000ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಥಳಗಳಲ್ಲಿ ರಾಷ್ಟ್ರಜಾಗೃತಿ ಮೂಡಿಸುವ ಫಲಕ ಪ್ರದರ್ಶನ, 1000 ದೇವಾಲಯಗಳ ಮತ್ತು 250 ಐತಿಹಾಸಿಕ ಸ್ಥಗಳಲ್ಲಿ ಸ್ವಚ್ಛತೆ, 200 ಸ್ಥಳಗಳಲ್ಲಿ ಮಹಿಳೆಯರಿಗೆ ಸ್ವರಕ್ಷಣೆಯ ತರಬೇತಿ ನೀಡಲಾಗುತ್ತಿದೆ ಎಂದರು.
ಹಲಾಲ್ ಸರ್ಟಿಫಿಕೇಟ್ ಇರುವ ಆಹಾರ ಪದಾರ್ಥಗಳನ್ನು ನಾವು ಅದನ್ನು ತಿರಸ್ಕರಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ನಮಗೆ ಭಾರೀ ಮಾರಕವಾಗಲಿದೆ.
ಇದು ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟ ವ್ಯವಸ್ಥೆಯಾಗಿದೆ ಎಂದವರು ಅಭಿಪ್ರಾಯಪಟ್ಟರು.
ಪುತ್ತೂರಿನ ದಿನೇಶ್ ಜೈನ್ , ರಾಜ್ಯ ಸಮನ್ವಯಕಾರ ಗುರುಪ್ರಸಾದ್ ಗೌಡ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
DAKSHINA KANNADA
ಗೆಜ್ಜೆ ಹಸ್ತಾಂತರ, ಚೌಕಿ ಪೂಜೆಯೊಂದಿಗೆ ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಆರಂಭ
Published
20 hours agoon
26/11/2024ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ನಡೆಯಿತು. ನಿನ್ನೆ (ನ.25) ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ, ಸೇವೆಯಾಟ ‘ಪಾಂಡಾಶ್ವಮೇಧ’ ನಡೆಯಿತು.
ಈ ಸಂದರ್ಭ ವೇದವ್ಯಾಸ ತಂತ್ರಿ, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಗಣೇಶ್ ವಿ. ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ ಎಕ್ಕಾರು, ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಮತ್ತಿತರ ಹಿರಿಯ ಗಣ್ಯರು ಉಪಸ್ಥಿತರಿದ್ದರು. ಈ ಬಾರಿಯೂ ಕಟೀಲು ಮೇಳದ ಯಕ್ಷಗಾನ ಬಯಲಾಟಗಳು ಕಾಲಮಿತಿಯಲ್ಲಿ ನಡೆಯಲಿವೆ.
DAKSHINA KANNADA
ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ
Published
2 days agoon
25/11/2024By
NEWS DESK4ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
DAKSHINA KANNADA
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
Published
2 days agoon
25/11/2024By
NEWS DESK4ಮಂಗಳೂರು/ಮಸ್ಕತ್ : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.
ಈ ಸಂದರ್ಭ ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :
ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.
LATEST NEWS
ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಪ್ರಕರಣ – 8 ಜನರ ಬಂಧನ
ಉಡುಪಿ: ಕಾಲಿವುಡ್ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ
ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ
ಏಲಿಯನ್ಗಳು ನಿಜಕ್ಕೂ ಇದೆಯಾ? ಡಾ.ಸೋಮನಾಥ್ರಿಂದ ಅಚ್ಚರಿಯ ಮಾಹಿತಿ !!
ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಮುಂದಿನ ಸಿಎಂ ಇವರೇ ?
Trending
- LATEST NEWS7 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru5 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION6 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS4 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!