ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಪತ್ನಿ ದೇವಿಶಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ದಂಪತಿಗಳಿಗೆ ಗೌರವಾರ್ಪಣೆ ಮಾಡಲಾಯಿತು.
ಸೂರ್ಯಕುಮಾರ್ ಯಾದವ್ ಮತ್ತು ದೇವಿಶಾ ಶೆಟ್ಟಿ ಈಗ ಮತ್ತೆ ಸುದ್ದಿಯಲ್ಲಿದ್ದು, ಈ ಬಾರಿ ಸುದ್ದಿಯಾಗಲು ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿರುವುದು. ಟಿ20 ವಿಶ್ವಕಪ್ಗೂ ಮುನ್ನ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಅದಕ್ಕಾಗಿ, ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬಳಿಕ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಸೂರ್ಯಕುಮಾರ್ ಯಾದವ್ಗೆ ವಿಶೇಷ ನಂಟು ಬೆಳೆಯಲು ಮುಖ್ಯ ಕಾರಣ ಪತ್ನಿ ದೇವಿಶಾ ಶೆಟ್ಟಿ.
ದೇವಿಶಾ ಶೆಟ್ಟಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಮುಂಬೈನಲ್ಲಿ ಹುಟ್ಟಿ ಬೆಳೆದ ದೇವಿಶಾ ಪೊದ್ದಾರ್ ಪದವಿ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಪೂರೈಸಿದ್ದು, ಸೂರ್ಯಕುಮಾರ್ ಯಾದವ್ ಕೂಡ ಅಲ್ಲಿಯೇ ಓದಿದ್ದರು. 2012 ರಲ್ಲಿ ಕಾಲೇಜ್ನಲ್ಲಿ ನಡೆದ ನೃತ್ಯ ಕಾರ್ಯಕ್ರಮದಲ್ಲಿ ಸೂರ್ಯಕುಮಾರ್ ಯಾದವ್, ದೇವಿಶಾ ಶೆಟ್ಟಿ ಅವರನ್ನು ಮೊದಲು ನೋಡಿದ್ದಾರೆ. ಇದೇ ವೇಳೆ ದೇವಿಶಾ ಮಾಡಿದ ನೃತ್ಯಕ್ಕೆ ಫಿದಾ ಆಗಿದ್ದರು. ಸೂರ್ಯಕುಮಾರ್ ಸೀನಿಯರ್ ಆಗಿದ್ದು, ದೇವಿಶಾ ಜೂನಿಯರ್ ವಿದ್ಯಾರ್ಥಿನಿ.
ನಿಧಾನವಾಗಿ ಆವರಿಬ್ಬರ ಸ್ನೇಹ ಬೆಳೆದಿದ್ದು, ಬಳಿಕ ಪ್ರೇಮವಾಗಿ ಬದಲಾಗಿದೆ. ಸೂರ್ಯನ ಪ್ರೇಮ ನಿವೇದನೆಯನ್ನು ದೇವಿಶಾ ಶೆಟ್ಟಿ ಒಪ್ಪಿಕೊಂಡಿದ್ದರು. ಅಲ್ಲದೆ 2012 ರಿಂದ 2016 ರವರೆಗೆ ಇಬ್ಬರು ಪ್ರೇಮಪಕ್ಷಿಗಳಾಗಿ ತಿರುಗಾಡಿದ್ದು, 2016 ರಲ್ಲಿ ತಮ್ಮ ಪ್ರೇಮ ವಿಚಾರವನ್ನು ಮನೆಯವರಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ, ಅದಾಗಲೇ ಐಪಿಎಲ್ ಮೂಲಕ ಸದ್ದು ಮಾಡಿದ್ದ ಸೂರ್ಯನನ್ನು ದೇವಿಶಾ ಕುಟುಂಬದವರು ಒಪ್ಪಿದ್ದು, ಇತ್ತ ಸೂರ್ಯಕುಮಾರ್ ಯಾದವ್ ಅವರ ಕುಟುಂಬದವರಿಗೂ ದೇವಿಶಾ ಇಷ್ಟವಾಗಿದ್ದರು.
ಮೇ 29, 2016 ರಲ್ಲಿ ಇಬ್ಬರ ನಿಶ್ಚಿತಾರ್ಥ ನೆರವೇರಿದ್ದು, ದಕ್ಷಿಣ ಭಾರತದ ಸಂಪ್ರದಾಯದಂತೆ ಜುಲೈ 7, 2016 ರಂದು ವಿವಾಹವಾದಗಿದ್ದು. ಇದೀಗ ಇಬ್ಬರು ಮಾದರಿ ದಂಪತಿಗಳಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಮುಂಬೈನಲ್ಲೇ ಬೆಳೆದರೂ ತವರಿನ ನಂಟು ಬಿಟ್ಟುಕೊಳ್ಳದ ದೇವಿಶಾ ಶೆಟ್ಟಿ ಪತಿಯ ಜೊತೆ ಆಗಾಗ ತುಳುನಾಡಿಗೆ ಬರುವ ಮೂಲಕ ಸುದ್ದಿಯಾಗುತ್ತಿದ್ದಾರೆ.
ಮಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಮೈಲಿಗಲ್ಲು ಸ್ಥಾಪಿಸಿರುವ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಯುಎಸ್ ಎಯಲ್ಲಿ ಅಭಿವೃದ್ದಿ ಪಡಿಸಲಾದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಮಂಗಳೂರಿಗೆ ಪರಿಚಯಿಸಿದೆ. ಸ್ಮಿತ್ ಪ್ಲಸ್ ನೆವ್ಯೂದವರು ಅಭಿವೃದ್ದಿ ಪಡಿಸಿರುವ ಈ ಸುಧಾರಿತ ಶಸ್ತ್ರ ಚಿಕಿತ್ಸಾ ಸೌಲಭ್ಯವನ್ನು ಡಾ. ಎ.ಜೆ.ಶೆಟ್ಟಿ ಅವರು ಉದ್ಘಾಟಿಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಹೇಳಿದ್ದಾರೆ.
ಈ ವ್ಯವಸ್ಥೆಯ ಮೂಲಕ ರೋಗಿಗಳಿಗೆ ಉತ್ತಮ ಶಸ್ತ್ರ ಚಿಕಿತ್ಸಾ ಫಲಿತಾಂಶ ಹಾಗೂ ವೇಗವಾಗಿ ಚೇತರಿಕೆಗೆ ದಾರಿ ಮಾಡಿಕೊಡುತ್ತದೆ. ಈ ಹಿಂದೆಯೂ ಹಲವು ತಂತ್ರಜ್ಞಾನಗಳನ್ನು ಮೊದಲು ಮಂಗಳೂರಿಗೆ ಪರಿಚಯಿಸಿದ ಎಜೆ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ಇದೀಗ ಪರಿಚಯಿಸಿರುವ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ತಂತ್ರಜ್ಞಾನ ಕೂಡ ಎಜೆ ಆಸ್ಪತ್ರೆಯ ಗರಿಮೆಯನ್ನು ಹೆಚ್ಚು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರು : ದೈವದ ಶಾಪದಿಂದಾಗಿ ಸಾಲು ಸಾಲು ಅಕಾಲಿಕ ಸಾವು ಸಂಭವಿಸುತ್ತಿದೆ ಎಂದು ದೈವ ದೇವರುಗಳ ನಂಬಿಕೆಗೆ ಹೆಸರಾದ ದಕ್ಷಿಣಕನ್ನಡ ಜಿಲ್ಲೆಯ ಕುಂಪಲ ಗ್ರಾಮದಲ್ಲಿ ಆತಂಕ ಸೃಷ್ಠಿಯಾಗಿದೆ.
ಸುಮಾರು 50ಕ್ಕೂ ಹೆಚ್ಚು ಮಂದಿ 2019ರಿಂದ ವಯಸಲ್ಲದ ವಯಸ್ಸಿಗೆ ಅಪಮೃತ್ಯು ಹೊಂದಿದ್ದು, ಹೆಚ್ಚಿನ ಮಂದಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಅಪಘಾತ, ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಅದರಲ್ಲೂ ರೂಪದರ್ಶಿಯಾಗಿದ್ದ ಪ್ರೇಕ್ಷಾ ಎಂಬ ಯುವತಿ ನೇಣಿಗೆ ಕೊರಳೊಡ್ಡಿದ್ದರೆ, ಅಶ್ವಿನಿ ಬಂಗೇರ ಎಂಬ ಯುವತಿ ಗೃಹಪ್ರವೇಶವಾದ ಐದೇ ದಿನದಲ್ಲಿ ತನ್ನದೇ ನೂತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ದುರಂತ ಸಂಭವನೆಗೆ ಮೂಲ ಕಾರಣ ಏನು ?
ಸರಣಿ ಸಾವಿನಿಂದ ಭಯಭೀತರಾಗಿದ್ದ ಊರಿನ ಮಂದಿ ಕುಂಪಲದ ಆದಿಶಕ್ತಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ದೈವಜ್ಞರ ಮೂಲಕ ಪ್ರಶ್ನಾ ಚಿಂತನೆಯನ್ನಿಟ್ಟಿದ್ದು, ಸರಣಿ ಸಾವಿಗೆ ದೈವದ ಮುನಿಸೇ ಕಾರಣ ಎಂಬ ಸುಳಿವು ಸಿಕ್ಕಿತು. ಇದರ ಜೊತೆ ಗ್ರಾಮದ ಜನರ ಅಕಾಲಿಕ ಮರಣಕ್ಕೆ ತಡೆ ನೀಡಲು ಮಹಾ ಮೃತ್ಯುಂಜಯ ಯಾಗ ನಡೆಸಬೇಕೆಂದು ಸೂಚನೆ ನೀಡಿದ್ದು, ಈ ಸಾವು ನೋವು ತಡೆಯಲು ಮಹಾ ಮೃತ್ಯುಂಜಯ ಹೋಮ ನಡೆಸಲಾಯಿತು.
ಪೂರ್ವ ದಿಕ್ಕಿನಲ್ಲಿ ದೈವ ಸಾನಿಧ್ಯ ಇರುವ ಬಗ್ಗೆ ಕುಂಪಲ ಗ್ರಾಮಸ್ಥರಿಗೆ ಸುಳಿವು ಸಿಕ್ಕಿತ್ತು. ಆದರೆ ಅದು ಪಾಳು ಬಿದ್ದು ದೈವಕ್ಕೆ ಕಾಲಾದಿಯಲ್ಲಿ ನಡೆಯುವ ಪೂಜೆ, ಪುನಸ್ಕಾರಗಳು ನಿಂತಿರುವ ಬಗ್ಗೆ ಗೋಚರವಾಗಿದೆ. ಮೃತ್ಯು ಭಯವನ್ನು ಶಮನಗೊಳಿಸಲು ಮಹಾ ಮೃತ್ಯುಂಜಯ ಯಾಗ ಮಾಡಲಾಗುತ್ತದೆ. ಇದೀಗ ಕುಂಪಲ ಗ್ರಾಮದಲ್ಲಿಯು ಈ ಯಾಗ ನಡೆಸಲಾಗಿದ್ದು ಸಕರಾತ್ಮಕ ವಾತಾವರಣ ಸೃಷ್ಟಿಯಾಗಿದೆ ಎಂದು ಅಲ್ಲಿನವರು ಹೇಳುತ್ತಾರೆ. ಮುಂದಿನ ದಿನಗಳಲ್ಲಾದರೂ ಕುಂಪಲ ಗ್ರಾಮದಲ್ಲಿ ದುರ್ಘಟನೆಗಳು ನಿವಾರಣೆಯಾಗಿ ಮನೆ ಮನೆಯಲ್ಲಿ ನೆಮ್ಮದಿ ನೆಲೆಯೂರುವುದೋ ಎಂಬುವುದನ್ನು ನಿರೀಕ್ಷಿಸಬೇಕಷ್ಟೇ.
ಮಂಗಳೂರು : ಭಾನುವಾರ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಜಪ್ಪಿನ ಮೊಗರು ಬಳಿಯ ಅಂಗಡಿಯೊಂದು ಹೊತ್ತಿ ಉರಿದ ಘಟನೆ ಸಂಭವಿಸಿದೆ.
ಜಪ್ಪಿನ ಮೊಗರು ಬಳಿಯ ಗ್ಲಾಸ್ ಸೆಂಟರ್ ಒಂದರಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಇಡೀ ಅಂಗಡಿಯನ್ನು ಬಸ್ಮ ಮಾಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದು, ಅಗ್ನಿ ಶಾಮಕದಳಕ್ಕೂ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯುಟ್ ಕಾರಣ ಅಂತ ಹೇಳಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ.
ಅಗ್ನಿಯ ಕೆನ್ನಾಲಿಗೆ ಸುಟ್ಟು ಕರಕಲಾದ ಗ್ಲಾಸ್ ಸೆಂಟರ್‌ನಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.