LATEST NEWS
ಮಕ್ಕಳು ಅಪ್ಪ – ಅಮ್ಮನ ಮುಂದೆ ಸುಳ್ಳು ಹೇಳಲು ಮುಖ್ಯ ಕಾರಣಗಳೇನು ಗೊತ್ತಾ ??
Published
5 days agoon
ಮಕ್ಕಳು ಏನೇ ವಿಷಯಗಳಿದ್ದರೂ ಅದನ್ನು ತಂದೆ – ತಾಯಿಯ ಬಳಿ ಹೇಳಲು ಬಯಸುತ್ತಾರೆ. ಆದರೆ, ಹೀಗೆ ಹೇಳಲು ಬಂದ ಮಕ್ಕಳ ಮೇಲೆ ಕೆಲವೊಮ್ಮೆ ಪೋಷಕರು ರೇಗುವುದುಂಟು. ಮಕ್ಕಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬ ಅರಿವಿಲ್ಲದೆ ಮಾಡುವ ಈ ತಪ್ಪು ಮುಂದೆ ಪೋಷಕರಿಗೇ ಸಮಸ್ಯೆಯಾಗಬಹುದು.
ಅಮ್ಮನ ಅಡುಗೆ ರುಚಿಯ ವಿಚಾರ ಇರಬಹುದು, ಸಹೋದರ ಸಹೋದರಿಯರ ನಡುವಿನ ಜಗಳ ಇರಬಹುದು, ಶಾಲೆಯಲ್ಲಿ ನಡೆದಿರುವ ಅದ್ಯಾವುದೋ ಸಂತಸದ ಅಥವಾ ಬೇಸರದ ಸಂಗತಿ ಇರಬಹುದು, ಪೋಷಕರು ವ್ಯವಧಾನದಿಂದ ಕೇಳಿಸಿಕೊಳ್ಳಬೇಕು. ಅದರ ಬದಲಾಗಿ ಮಕ್ಕಳು ಅದೇನೋ ಹೇಳಲು ಬಂದಾಗ ಅಸಹನೆ, ಸಿಟ್ಟು ಪ್ರದರ್ಶಿಸಿದರೆ ಮಕ್ಕಳ ಮೃದು ಮನಸಿಗೆ ಘಾಸಿ ಉಂಟಾಗುವ ಅಪಾಯ ಇದೆ. ಇದು ಪೋಷಕರನ್ನು ಮೆಚ್ಚಿಸಲು ಅಥವಾ ಗಮನವನ್ನು ತಮ್ಮತ್ತ ಸೆಳೆಯಲು ಮಕ್ಕಳು ಸುಳ್ಳಿನ ದಾರಿ ಹಿಡಿಯಲು ಅವಕಾಶ ಮಾಡಿಕೊಡುವ ಅಪಾಯ ಇದೆ.
ಇನ್ನು ಮಕ್ಕಳೇನೋ ಮಾಡಬೇಕು ಎಂಬ ತುಡಿತವನ್ನು ಪೋಷಕರ ಮುಂದೆ ವ್ಯಕ್ತಪಡಿಸಿದಾಗ ಗದರಿಸಿ ಸುಮ್ಮನಿರುವಂತೆ ಮಾಡುವುದು ಕೂಡ ಅವರ ಭವಿಷ್ಯವನ್ನು ಚಿವುಟಿದಂತೆ. ಇದರಿಂದ ತಮ್ಮ ಕನಸನ್ನು ಪೋಷಕರು ಕಮರಿ ಹಾಕಿದ್ರು ಎಂಬ ಅಸಮಾಧಾನ ಮಕ್ಕಳ ಮನಸಿನ ಮೂಲೆಯಲ್ಲಿ ಕೂತು ಬಿಡುತ್ತದೆ. ಇದು ಮುಂದೆ ಬೆಳೆದು ದೊಡ್ಡವರಾದ ಮಕ್ಕಳಲ್ಲಿ ಪೋಷಕರು ತಮಗೇನು ಮಾಡಿಲ್ಲ ಎಂಬ ಭಾವ ಮೂಡಿಸುವ ಸಾಧ್ಯತೆ ಕೂಡ ಇದೆ. ತಾನು ಮಾಡಬೇಕು ಅಂದುಕೊಂಡಿದ್ದನ್ನು ಮನೆಯಲ್ಲಿ ಸುಳ್ಳು ಹೇಳಿ ಮಾಡಲು ಆರಂಭಿಸಿ ಮುಂದೆ ಸುಳ್ಳು ಹೇಳುವುದನ್ನೇ ಮೈಗೂಡಿಸುವ ಮನಸ್ಥಿತಿಗೆ ಮಕ್ಕಳು ಬರಬಹುದು.
ಹುಟ್ಟಿದ ಮಗುವಿನ ಲಾಲನೆ ಪಾಲನೆ ಮಾಡುವ ಪೋಷಕರು ಮಗುವಿಗೆ ನಡೆಯುವುದರಿಂದ ಹಿಡಿದು ಮಾತನಾಡುವುದು, ತಿನ್ನುವುದು ಎಲ್ಲವನ್ನೂ ಕಲಿಸುತ್ತಾರೆ. ಆದರೆ, ಮಕ್ಕಳು ಬೆಳೆಯುತ್ತಾ ಹೋದಂತೆ ಕೆಲವೊಂದು ಬಾರಿ ಮಕ್ಕಳು ಕೇಳುವ ಪ್ರಶ್ನೆಗಳು, ಮಾಡುವ ಹಠಗಳು, ಹಾಗೂ ಅವರ ಬೇಡಿಕೆಗಳು ಕಿರಿಕಿರಿ ಅನಿಸಿ ಬಿಡುತ್ತದೆ. ಮಕ್ಕಳಿಗೆ ಏನು ಬೇಕು, ಏನು ಬೇಡ ಎಂಬುವುದು ಪೋಷಕರಿಗೆ ಗೊತ್ತಿರುತ್ತದೆಯಾದ್ರೂ ಕೆಲವೊಂದು ವಿಚಾರವನ್ನು ಮಕ್ಕಳಿಗೆ ನವಿರಾಗಿ ವಿವರಿಸಿ ಅರ್ಥೈಸಬೇಕು. ಆದ್ರೆ, ಎಲ್ಲವನ್ನೂ ನವಿರಾಗಿ ನಿರಾಕರಿಸುತ್ತಾ ಹೋದರೆ ನನ್ನ ಹೆತ್ತವರು ನನಗಾಗಿ ಏನೂ ಮಾಡುತ್ತಿಲ್ಲ ಎಂಬ ಭಾವ ಮಕ್ಕಳಲ್ಲಿ ಮೂಡಬಹುದು. ತಮ್ಮ ಕನಸಿಗೆ ಪೋಷಕರೇ ಅಡ್ಡಿ ಎಂಬ ಸಣ್ಣದೊಂದು ಅಸಹನೆ ಇಲ್ಲಿಂದಲೇ ಆರಂಭವಾಗಬಹುದು.
ಸಣ್ಣ ಪ್ರಾಯದಲ್ಲಿ ಮಕ್ಕಳು ದೂರು ಹೇಳುವ ಪ್ರಮುಖ ಕಾರಣಗಳು :
ಗಮನವನ್ನು ತನ್ನತ್ತ ಸೆಳೆಯಲು:
ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಮಕ್ಕಳಿದ್ದು, ಒಬ್ಬರ ಕಡೆ ಹೆಚ್ಚಿನ ಗಮನ ನೀಡುತ್ತಾರೆ ಅಂತ ಮಗುವಿನ ಮನಸಿನಲ್ಲಿ ಮೂಡಿದಾಗ ಗಮನ ತನ್ನತ್ತ ಸೆಳೆಯಲು ಸುಳ್ಳು ದೂರುಗಳನ್ನು ಹೇಳಲು ಆರಂಭಿಸುತ್ತಾರೆ. ಇದು ಶಾಲೆಯಲ್ಲೂ , ಕುಟುಂಬ ಸದಸ್ಯರ ಮುಂದೆಯೂ ನಡೆಯುವ ಮೂಲಕ ಪೋಷಕರನ್ನು ಮುಜುಗರಕ್ಕೆ ಸಿಲುಕಿಸಬಹುದು. ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ಮನೋಭಾವನೆಯಿಂದ ಮಕ್ಕಳು ಸಣ್ಣ ಸಣ್ಣ ವಿಚಾರಗಳಲ್ಲೂ ಜಗಳ ಆಡುವುದು, ಸುಳ್ಳು ಹೇಳುವುದು ಮಾಡಬಹುದು. ಇಂತಹ ವಿಚಾರ ಬಂದಾಗ ಮಕ್ಕಳ ಜಗಳವನ್ನು ನಾಜೂಕಾಗಿ ಪರಿಹರಿಸಬೇಕು.
ಅಸಹನೆ , ಸಿಟ್ಟು, ಜಗಳ , ದೂರುಗಳು ಇವುಗಳನ್ನು ನಿರ್ಲಕ್ಷ್ಯ ಮಾಡಬೇಡಿ.
ಮಕ್ಕಳು ಪದೇಪದೇ ಸಿಟ್ಟಾಗುವುದು, ಅಸಹನೆಯಿಂದ ಒಂಟಿಯಾಗಿ ಕೂರುವುದು, ಸ್ನೇಹಿತರ ಜೊತೆ ಜಗಳ ಮಾಡುವುದು, ದೂರುಗಳನ್ನು ಹೇಳಿಕೊಂಡು ಬರುತ್ತಾರೆ ಅಂದ್ರೆ ನಿರ್ಲಕ್ಷ್ಯ ಮಾಡಬೇಡಿ. ಯಾಕೆಂದರೆ ಇದು ಯಾಕಾಗಿ ಹೀಗೆ ಎಂಬುವುದನ್ನು ಮೊದಲು ತಮ್ಮಲ್ಲೇ ಪ್ರಶ್ನೆ ಮಾಡಿಕೊಳ್ಳಿ. ಪೋಷಕರಾಗಿ ತಮ್ಮಿಂದೇನು ತಪ್ಪಾಗಿಲ್ಲ ಎಂದರೆ ಒಂದು ಬಾರಿ ತಜ್ಞ ವೈದ್ಯರನ್ನು ಸಂಪರ್ಕಿಸಿ.
LATEST NEWS
ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ
Published
11 hours agoon
11/12/2024By
NEWS DESK3ಮಂಗಳೂರು/ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಅಜಾತ ಶತ್ರು, ಸರಳ ಸಜ್ಜನಿಕೆಯ ರಾಜಕಾರಣಿ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ತಮ್ಮ 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನು ಕೊನೆಗೊಳಿಸಿದ್ದಾರೆ.
ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಮನವಿ ಮಾಡಿದ್ದಾರೆ.
ಆರ್. ಅಶೋಕ್ ಟ್ವೀಟ್
ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್ “ಕರ್ನಾಟಕ ರತ್ನ “ಎಸ್.ಎಂ.ಕೃಷ್ಣ”
ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.
ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಇದನ್ನೂ ಓದಿ: ಎಸ್.ಎಂ.ಕೃಷ್ಣ ಅಂತಿಮ ಯಾತ್ರೆ: ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ, ಸಿಎಂ ಸಿದ್ದರಾಮಯ್ಯ ಭಾಗಿ
ಶ್ರೀ ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.
ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನೆರವೆರಿದೆ.
International news
ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಇಸ್ರೇಲ್ ಪ್ರಧಾನಿ
Published
12 hours agoon
11/12/2024By
NEWS DESK3ಮಂಗಳೂರು/ಟೆಲ್ ಅವೀವ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮೊದಲ ಬಾರಿಗೆ ಟೆಲ್ ಅವೀವ್ ನ ನ್ಯಾಯಾಲಯವೊಂದರಲ್ಲಿ ಮಂಗಳವಾರ ವಿಚಾರಣೆಗೆ ಹಾಜರಾದರು.
ಈ ಮೂಲಕ ಅಧಿಕಾರದಲ್ಲಿರುವಾಗಲೇ ಅಪರಾಧ ಪ್ರಕರಣ ಎದುರಿಸುತ್ತಿರುವ ಮೊದಲ ಪ್ರಧಾನಿ ಎಂದೆನಿಸಿದ್ದಾರೆ.ನ್ಯಾಯಧೀಶರಲ್ಲೊಬ್ಬರು ನೆತನ್ಯಾಹು ಅವರಿಗೆ ಕಟಕಟೆಯೊಳಗೆ ಕುಳಿತುಕೊಳ್ಳುವ ಇಲ್ಲವೇ ನಿಲ್ಲಲು ಅವಕಾಶವಿರುವುದಾಗಿ ತಿಳಿಸಿದರು. ನೆತನ್ಯಾಹು ಪದೇಪದೇ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ವಂಚನೆ, ಭ್ರಷ್ಟಾಚಾರ ಮತ್ತು ನಂಬಿಕೆ ದ್ರೋಹ ಆರೋಪಗಳಿಗೆ ಸಂಬಂಧಿಸಿದಂತೆ ಅವರ ವಿರುದ್ದ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಇದನ್ನೂ ಓದಿ:ದಂಡ ತಪ್ಪಿಸಿಕೊಳ್ಳಲು ವಾಹನ ಸವಾರರ ಹೊಸ ಪ್ಲಾನ್: ಸ್ಪೂನ್ ಅಸ್ತ್ರ !
ಇದು ಅಲ್ಲದೆ ತನ್ನ ಹಾಗೂ ಕುಟುಂಬವನ್ನು ಓಲೈಸುವಂತೆ ವರದಿಗಳನ್ನು ಪ್ರಕಟಿಸುವುದಕ್ಕೆ ಪ್ರತಿಫಲವಾಗಿ ಮಾಧ್ಯಮ ಮಾಲಕರಿಗೆ ಅನುಕೂಲಕರವಾಗುವಂತಹ ಕಾನೂನು, ನಿಯಮಗಳನ್ನು ಜಾರಿಗೊಳಿಸಿದ ಆರೋಪವನ್ನು ಕೂಡಾ ಅವರು ಎದುರಿಸುತ್ತಿದ್ದಾರೆ.
ರಾಜಕೀಯ ಲಾಭ ಮಾಡಿಕೊಟ್ಟಿರುವುದಕ್ಕೆ ಪ್ರತಿಯಾಗಿ ಶ್ರೀಮಂತರಿಂದ ಬೆಲೆಬಾಳುವ ವಸ್ತುಗಳನ್ನು ಪಡೆದಿರುವ ಪ್ರಕರಣದಲ್ಲಿ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಆರೋಪಿಗಳಾಗಿದ್ದಾರೆ.
2020 ಮೇ ನಲ್ಲಿ ಆರಂಭವಾಗಿದ್ದ ವಿಚಾರಣೆಯು ಪದೇ ಪದೇ ಮುಂದೂಡಲ್ಪಟ್ಟಿತ್ತು. ಮೇಲ್ಮನವಿ ಪ್ರಕ್ರಿಯೆಯ ಕಾರಣದಿಂದ ವಿಚಾರಣೆ ವಿಳಂಬವಾಗಿತ್ತು. ಗಾಜಾ ಮತ್ತು ಲೆಬೆನಾನ್ ಜೊತೆಗಿನ ಯುದ್ದದ ಕಾರಣಕ್ಕೆ ವಿಚಾರಣೆ ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ನೆತಾನ್ಯಾಹು ಹಲವಾರು ಬಾರಿ ಮನವಿ ಮಾಡಿದ್ದರು.
ಈ ಬಗ್ಗೆ ಮಾತನಾಡಿರುವ ನೆತನ್ಯಾಹು ‘ಈ ದಿನಕ್ಕಾಗಿ ನಾನು ಎಂಟು ವರ್ಷಗಳಿಂದ ಕಾಯುತ್ತಿದ್ದೆ. ನನ್ನ ವಿರುದ್ದದ ಆಧಾರರಹಿತ ಮತ್ತು ಸುಳ್ಳು ಆರೋಪಗಳಿಗೆ ಉತ್ತರ ನೀಡಲು ಮತ್ತು ಸತ್ಯವನ್ನು ಹೇಳಲು ಕಾತರನಾಗಿದ್ದೆ’ ಎಂದು ಹೇಳಿದ್ದಾರೆ.
DAKSHINA KANNADA
ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್ ಚಲನಚಿತ್ರ ತೆರೆಗೆ !!
Published
13 hours agoon
11/12/2024ಉಡುಪಿ: ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.
ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರಿತವಾಗಿದೆ ಎಂದು ಚಿತ್ರಕಥೆಯನ್ನು ಬರೆದಿರುವ ಅನೀಶ್ ಪೂಜಾರಿ ತಿಳಿಸಿದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ.
ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು. ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ಚಿತ್ರ ವಿತರಕ ಸಚಿನ್ ಉಪ್ಪಿನಂಗಡಿ, ನಿರ್ಮಾಫಕ ರಾಘವೇಂದ್ರ ಪುತ್ರ ರಾಹುಲ್ ಕುಡ್ವ, ನಟ ದೀಕ್ಷಿತ್ , ನಟಿ ಭವ್ಯಾ ಪೂಜಾರಿ, ಕಾರ್ಯಕಾರಿ ನಿರ್ಮಾಪಕ ಪ್ರಜ್ಞೇಶ್ ಶೆಟ್ಟಿ ಮೊದಲಾದವರಿದ್ದರು.
LATEST NEWS
ಆರ್ಬಿಐ ಹೊಸ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ !!
ದಂಡ ತಪ್ಪಿಸಿಕೊಳ್ಳಲು ವಾಹನ ಸವಾರರ ಹೊಸ ಪ್ಲಾನ್: ಸ್ಪೂನ್ ಅಸ್ತ್ರ !
ವಿಚ್ಛೇದನ ನೀಡದೆ ಎರಡನೇ ಮದುವೆ; ಮಂಟಪದಲ್ಲೇ ಮೊದಲ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ
ಅನುಪಮ್ ಅಗರ್ವಾಲ್ ವರ್ಗಾವಣೆಗೆ ಒತ್ತಾಯಿಸಿ ಕಾವೂರಿನಲ್ಲಿ ಪ್ರತಿಭಟನೆ !!
ಕಡಬ: ಪ್ಯಾಚ್ ವರ್ಕ್ ಮಾಡಿ ಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ
ಭಾರತದಲ್ಲಿ ಮನರಂಜನೆ ಮತ್ತು ಮಾಧ್ಯಮ ಉದ್ಯಮ ಭಾರೀ ಬೆಳವಣಿಗೆ !!
Trending
- BIG BOSS3 days ago
ಚೈತ್ರಾ ಕಣ್ಣೀರು, ಐಶ್ವರ್ಯ ಆಕ್ಟಿವಿಟಿ ರೂಮ್….ಎಲಿಮಿನೆಟ್ ಆಗಿದ್ದು ?
- BIG BOSS5 days ago
BBK11: ಈ ವಾರ ಬಿಗ್ಬಾಸ್ ಮನೆಯಲ್ಲಿ ಕಾದಿದ್ಯಾ ಬಿಗ್ ಟ್ವಿಸ್ಟ್; ಎಲಿಮಿನೇಷನ್ ಇರೋದು ಡೌಟ್
- BIG BOSS5 days ago
ಬಿಗ್ಬಾಸ್ ನಿರ್ಧಾರಗಳಿಗೆ ರೆಸ್ಪೆಕ್ಟೇ ಇಲ್ಲ -ಇಬ್ಬರು ಸ್ಪರ್ಧಿಗಳಿಗೆ ಕಿಚ್ಚ ಖಡಕ್ ಕ್ಲಾಸ್
- BANTWAL6 days ago
ಬಂಟ್ವಾಳ: ಕೆ.ಎಸ್. ಆರ್.ಟಿ.ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕನಿಂದ ಹಲ್ಲೆ