ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ಬಾರಿಯೂ ದಾಖಲೆಯ ಅಕ್ರಮ ಚಿನ್ನ ಸಾಗಾಟ ಪ್ರಕರಣಗಳನ್ನು ಬೇಧಿಸಿದ್ದಾರೆ.
ಮಂಗಳೂರು : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ಬಾರಿಯೂ ದಾಖಲೆಯ ಅಕ್ರಮ ಚಿನ್ನ ಸಾಗಾಟ ಪ್ರಕರಣಗಳನ್ನು ಬೇಧಿಸಿದ್ದಾರೆ.
ಫೆಬ್ರವರಿ 16 ರಿಂದ 28 ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪತ್ತೆ ಮಾಡಲಾಗಿದೆ.
ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ – ಶರ್ಟ್‌ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಅವಧಿಯಲ್ಲಿ ಒಟ್ಟು ರೂ. 1,08,28,240 ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಸಾಗಾಟದ ಚಿನ್ನ ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.