Connect with us

LATEST NEWS

ಇಂಡಿಯನ್ಸ್ 2024ರಲ್ಲಿ ಗೂಗಲ್‌ನಲ್ಲಿ ಹೆಚ್ಚು ಹುಡುಕಾಡಿದ ವಿಷಯಗಳು ಇದೇ ನೋಡಿ !

Published

on

ಬಾರತದ ಅಗ್ರ ವ್ಯಕ್ತಿ, ಅಜಾತಶತ್ರು ರತನ್‌ ಟಾಟಾರಿಂದ ಹಿಡಿದು ಐಪಿಎಲ್‌ ವರೆಗೆ ಭಾರತೀಯರು ಗೂಗಲ್‌ನಲ್ಲಿ ಹುಡುಕಾಡಿದ ಟಾಪ್‌ 10 ವಿಷಯಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ವರ್ಷ ಭಾರತೀಯರು ವೈವಿದ್ಯಮಯ ಕುತೂಹಲಕಾರಿ ವಿಷಯಗಳ ಬಗ್ಗೆ ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದು, ಅದರಲ್ಲಿ ಐಪಿಎಲ್‌, ಟಿ20 ವಿಶ್ವ ಕಪ್‌, ಬಿಜೆಪಿ ಮತ್ತು ಚುನಾವಣಾ ಫಲಿತಾಂಶದಂತಹ ರಾಜಕೀಯ ವಿಷಯಗಳು ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.


2025 ಆರಂಭಕ್ಕೆ ಇನ್ನೇನೂ ಕೆಲ ದಿನಗಳು ಮಾತ್ರ ಬಾಕಿ ಉಳಿದಿವೆ. ಹೊಸ ವರ್ಷವನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲು ಇಡೀ ವಿಶ್ವವೇ ಸಿದ್ಧತೆ ನಡೆಸುತ್ತಿದೆ. ಈ ಮಧ್ಯೆ ಸರ್ಚ್‌ ಇಂಜಿನ್‌ ಗೂಗಲ್‌ ಭಾರತೀಯರು ಗೂಗಲ್‌ನಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಅತಿ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎನ್ನುವ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. 2024 ರಲ್ಲಿ ವಿಶೇಷವಾಗಿ ಅತೀ ಹೆಚ್ಚು ಹುಡುಕಾಟ ನಡೆಸಿದ ಟಾಪ್‌ 10 ವಿಷಗಳು ಹೀಗಿವೆ.

ಭಾರತೀಯರು ಈ ಬಾರಿ ಗೂಗಲ್‌ನಲ್ಲಿ ಹೆಚ್ಚು ಹುಡುಕಾಡಿದ ಟಾಪ್‌ 10 ವಿಷಯಗಳು :

1. ಇಂಡಿಯನ್‌ ಪ್ರೀಮಿಯರ್‌ ಲೀಗ್ (IPL)

2. ಟಿ20 ವಿಶ್ವ ಕಪ್

3. ಭಾರತೀಯ ಜನತಾ ಪಕ್ಷ

4. ಚುನಾವಣಾ ಫಲಿತಾಂಶ 2024

5. ಒಲಿಂಪಿಕ್ಸ್‌ 2024

6. ಅತಿಯಾದ ಶಾಖ

7. ರತನ್‌ ಟಾಟಾ

8. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್:

9. ಪ್ರೋ ಕಬಡ್ಡಿ

10. ಇಂಡಿಯನ್‌ ಸೂಪರ್‌ ಲೀಗ್‌(ಐಎಸ್‌ಎಲ್)

         ಇಷ್ಟುಮಾತ್ರವಲ್ಲದೆ, “ನಿಯರ್‌ ಮಿ” ವಿಷಯದಲ್ಲಿ ವಾಯು ಮಾಲಿನ್ಯ ಮತ್ತು ಅದರ ಆರೋಗ್ಯ ಪರಿಣಾಮಗಳ ಬಗ್ಗೆ ತಿಳಿಯಲು ಮತ್ತು ಎಕ್ಯೂಐ ಮಟ್ಟದ ಬಗ್ಗೆ ತಿಳಿಯಲು ‘ಎಕ್ಯೂಐ ನಿಯರ್‌ ಮಿ’ ಬಗ್ಗೆ ಹೆಚ್ಚು ಸರ್ಚ್‌ ಮಾಡಿದ್ದಾರೆ. ಅಷ್ಟೇ ಅಲ್ಲದೆ ‘ಓಣಂ ಸಾಧ್ಯಾ ನಿಯರ್‌ ಮಿ’, ‘ರಾಮ ಮಂದಿರ’, ‘ಸ್ಪೋರ್ಟ್ಸ್‌ ಬಾರ್‌’, ‘ಬೆಸ್ಟ್‌ ಬೇಕರಿ ನಿಯರ್‌ ಮಿ’ ವಿಷಯಗಳ ಬಗ್ಗೆ ಸರ್ಚ್‌ ಮಾಡಲಾಗಿದೆ.

DAKSHINA KANNADA

ಮಂಗಳೂರು-ಸಿಂಗಾಪುರ ನೇರ ವಿಮಾನ ಯಾನ; ಬಹುಕಾಲದ ಬೇಡಿಕೆ ಈಡೇರಿಕೆ

Published

on

ಮಂಗಳೂರು : ಹೊಸ ವರ್ಷದ ಕೊಡುಗೆ ಎಂಬಂತೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಯಾನ 2025ರ ಜನವರಿ 21 ರಿಂದ ಶುರುವಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಕಂಪೆನಿ ಈ ವಿಮಾನ ಹಾರಾಟ ಆರಂಭಿಸಲು ಮುಂದೆ ಬಂದಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಕ್ಸ್ 862 ವಿಮಾನ 5.55 ಕ್ಕೆ ಹೊರಟು 13.25 ಕ್ಕೆ ಸಿಂಗಾಪುರ ತಲಪುತ್ತದೆ. ಮರು ಪ್ರಯಾಣದಲ್ಲಿ ಐಎಕ್ಸ್ 861 ವಿಮಾನ ಸಿಂಗಾಪುರದಿಂದ 14.25 ಕ್ಕೆ ಹೊರಟು 16.55 ಕ್ಕೆ ಮಂಗಳೂರು ತಲಪುವುದು.

2025ರ ಜ.21ರಿಂದ ಸಿಂಗಾಪುರಕ್ಕೆ ವಿಮಾನ :

ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024 ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು. ಫೆ.1 ರಿಂದ ದಿಲ್ಲಿಗೆ ದಿನನಿತ್ಯ ವಿಮಾನ ಸೌಲಭ್ಯಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1, 2025 ರಿಂದ ಮಂಗಳೂರು ಮತ್ತು ರಾಜಧಾನಿ ದಿಲ್ಲಿ ನಡುವೆ ದೈನಂದಿನ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

Continue Reading

Ancient Mangaluru

ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಭೀಕರ ಅಪ*ಘಾತ !

Published

on

ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.

 

ಕಾರಿನಲ್ಲಿದ್ದವರಿಗೆ ಗಂ*ಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ

ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ಮಾಹಿತಿ ತಿಳಿದು ಬಂದಿದೆ. ಕಾರಿನಲ್ಲಿ ಕೆಲ ಪೂಜಾ ಸಾಮಾಗ್ರಿಗಳು ಸೇರಿದಂತೆ ಕುಂಕುಮ ಪ್ರಸಾದಗಳು ಕಂಡುಬಂದಿದೆ.

Continue Reading

DAKSHINA KANNADA

ಉತ್ತಮ ಜನಸ್ಪಂದನೆಯೊಂದಿಗೆ ಮಂಗಳೂರು-ಕಾರ್ಕಳ KSRTC ಸಂಚಾರ ಆರಂಭ

Published

on

ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.

ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.

 

ಕೆ.ಎಸ್‌.ಆರ್‌.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌, ‘ಮಂಗಳೂರು-ಕಾರ್ಕಳ ಮಧ್ಯೆ 8 ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3 ಟ್ರಿಪ್‌ಗೆ ಅವಕಾಶ ನೀಡಿದೆ. ಕೇಂದ್ರ ಸರಕಾರದ ಏರಿಯಾ ಸ್ಕೀಂ ನಿಯಮ ಪ್ರಕಾರ ಹಾಗೂ ಚಾಪ್ಟರ್‌ -5ರಂತೆ ಹೊಸ ರೂಟ್‌ಗೆ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ’ ಎಂದು ವಾದ ಮಂಡಿಸಿದರು. ‘ಮುಂದಿನ ದಿನಗಳಲ್ಲಿ ಅಗತ್ಯ ಇರುವ ಇತರ ಪ್ರದೇಶಗಳಲ್ಲಿ ಸರಕಾರಿ ಬಸ್‌ ಸಂಚಾರ ಆರಂಭಿಸಲು ಸರಕಾರ ವನ್ನು ಕೇಳಿಕೊಂಡಿದ್ದೇವೆ’ ಎಂದು ಸದಸ್ಯ ಐವನ್‌ ಡಿ’ ಸೋಜಾ ತಿಳಿಸಿದರು.

ಇದನ್ನೂ ಓದಿ : ಮಂಗಳೂರು-ಕಾರ್ಕಳ ಕೆ.ಎಸ್‌.ಆರ್‌.ಟಿ.ಸಿ ಪ್ರಾಯೋಗಿಕ ಸಂಚಾರಕ್ಕೆ ನಾಳೆ ಚಾಲನೆ !!

 

ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ. ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ‌ ಪರವಾನಗಿ‌ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನ‌ಸ್ಪಂದನೆ ಲಭಿಸಿದೆ.

Continue Reading

LATEST NEWS

Trending

Exit mobile version