Tuesday, January 26, 2021

ರಾಧಿಕಾ ಕುಮಾರಸ್ವಾಮಿ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ..?

ರಾಧಿಕಾ ಕುಮಾರಸ್ವಾಮಿ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ರಾಧಿಕಾ ಕುಮಾರಸ್ವಾಮಿ ಯಾರ್ರಿ ಅದು? ಅವರ್ಯಾರೆಂದು ನನಗೆ ಗೊತ್ತಿಲ್ಲ… ಅದೇನೋ ಕೇಸ್​ ನನಗೆ ಗೊತ್ತಿಲ್ಲ     ಗೊತ್ತಿಲ್ಲದವರ ಬಗ್ಗೆ ನಾನ್ಯಾಕೆ ಪ್ರತಿಕ್ರಿಯೆ ನೀಡಬೇಕು…?ಹೀಗೆ ಹೇಳಿದ್ದು ಇನ್ನಾರೂ ಅಲ್ಲ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ,

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಪತ್ರಕರ್ತರು ಪ್ರಶ್ನಿಸಿದಾಗ ರಾಧಿಕಾ ಕುಮಾರಸ್ವಾಮಿ ಅವರ ಕುರಿತಂತೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕೊಟ್ಟಿದ್ದಾರೆ. ಅದರ ಬಗ್ಗೆ ಏನ್ ಹೇಳ್ತೀರಿ ಎಂದು ಮಾಧ್ಯಮದವರು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ.

ಅದಕ್ಕೆ ಉತ್ತರವಾಗಿ ಕುಮಾರಸ್ವಾಮಿ ಅವರು, ಅವರ್ಯಾರು ಎಂದೇ ನನಗೆ ಗೊತ್ತಿಲ್ಲ. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ? ಗೊತ್ತಿಲ್ಲದ ಕುಟುಂಬದವರ ಬಗ್ಗೆ ನನಗೆ ಕೇಳಬೇಡಿ ಎಂಬುದಾಗಿ ಪ್ರತಿಕ್ರಿಯಿಸಿದ್ದಾರೆ.

ಅದೇ ವೇಳೆ ರಾಜಕೀಯದ ಈಗಿನ ಪರಿಸ್ಥಿತಿ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಸದ್ಯದ ರಾಜಕೀಯ ಪರಿಸ್ಥಿತಿ, ಹಾಗೂ ರಾಜ್ಯ ಸರ್ಕಾರದ ಬಗ್ಗೆ ನಾನೇನೂ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ.

ನನ್ನ ಉದ್ದೇಶ ಏನಿದ್ದರೂ ಇನ್ನೂ ಎರಡೂವರೆ ವರ್ಷಗಳ ನಂತರ. ಈಗಿನ ಸರ್ಕಾರದ ಅವಧಿ ಮುಕ್ತಾಯಗೊಂಡ ನಂತರವೇ ಅದರ ಬಗ್ಗೆ ಯೋಚನೆ ಮಾಡುತ್ತೇನೆ ಎಂದರು.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.