Connect with us

    LATEST NEWS

    ಈ ಆಹಾರ ಪದಾರ್ಥಗಳಿಗೂ ಬಳಸಲಾಗುತ್ತೆ ಪ್ರಾಣಿಗಳ ಕೊಬ್ಬು, ಸೇವಿಸುವ ಮುನ್ನ ಇರಲಿ ಎಚ್ಚರ

    Published

    on

    ಇಂದಿನ ಬಿಡುವಿಲ್ಲದ ಜೀವನ ಶೈಲಿಯಲ್ಲಿ ತಾವು ಏನು ತಿನ್ನುತ್ತೇವೆ, ಈ ಆಹಾರವು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎನ್ನುವ ಬಗ್ಗೆ ಯೋಚಿಸಲು ಸಮಯವಿಲ್ಲ. ಹೀಗಿರುವಾಗಲೇ ತಿರುಪತಿಯ ಲಡ್ದುವಿನಲ್ಲಿ ಪ್ರಾಣಿ ಕೊಬ್ಬು ಇದೆ ಎನ್ನುವ ವಿಚಾರವು ಚರ್ಚೆಗೆ ಕಾರಣವಾಗಿದೆ. ಆದರೆ ಪ್ರಾಣಿಗಳ ಕೊಬ್ಬನ್ನು ವಿವಿಧ ಆಹಾರಗಳು ಮತ್ತು ಉತ್ಪನ್ನಗಳಿಗೆ ಸೇರಿಸಲಾಗುತ್ತದೆ. ಹೀಗಾಗಿ ಈ ಪ್ರಾಣಿಗಳ ಕೊಬ್ಬನ್ನು ಹೊಂದಿರುವ ಕೆಲವು ಸಾಮಾನ್ಯ ಉತ್ಪನ್ನಗಳ ಬಗೆಗೆ ನಿಮಗೆ ತಿಳಿದಿದ್ದರೆ ಉತ್ತಮ.

    ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗುವ ಆಹಾರ ಪದಾರ್ಥಗಳು:

    ಮಾರ್ಗರೀನ್: ಕೆಲವು ವಿವಿಧ ಮಾರ್ಗರೀನ್ ಪ್ರಾಣಿಗಳ ಕೊಬ್ಬನ್ನು ಹೊಂದಿರುತ್ತದೆ. ಇವುಗಳನ್ನು ‘ಸುವಾಸನೆ’ ಅಥವಾ ‘ನೈಸರ್ಗಿಕ ಕೊಬ್ಬು’ಎನ್ನಲಾಗುತ್ತದೆ.

    ಬಿಸ್ಕತ್ತುಗಳು ಮತ್ತು ಕುಕೀಗಳು: ನಾವು ಸೇವಿಸುವ ಬಿಸ್ಕತ್ತುಗಳು ಮತ್ತು ಕುಕೀಗಳು ಪ್ರಾಣಿಗಳ ಕೊಬ್ಬನ್ನು ಒಳಗೊಂಡಿರುತ್ತವೆ. ಹೀಗಾಗಿ ನೀವು ಬೆಣ್ಣೆ ರುಚಿಯ ಬಿಸ್ಕತ್ತುಗಳು ಮತ್ತು ಕುಕೀಗಳನ್ನು ಸೇವಿಸುತ್ತಿದ್ದರೆ ಹೆಚ್ಚು ಜಾಗರೂಕರಾಗಿರುವುದು ಉತ್ತಮ.

    ಪ್ಯಾಟೀಸ್ ಮತ್ತು ಸಾಸೇಜ್‌ಗಳು: ಸಾಸೇಜ್‌ಗಳು, ಪ್ಯಾಟೀಸ್ ಮತ್ತು ಮಾಂಸದ ಚೆಂಡುಗಳಂತಹ ಮಾಂಸ ಆಧಾರಿತ ಉತ್ಪನ್ನಗಳಲ್ಲಿ ಈ ಪ್ರಾಣಿಗಳ ಕೊಬ್ಬು ಇರುತ್ತದೆ.

    ತ್ವರಿತ ಆಹಾರ: ಪ್ರಾಣಿಗಳ ಕೊಬ್ಬನ್ನು ಫ್ರೆಂಚ್ ಫ್ರೈಸ್ ಮತ್ತು ಬರ್ಗರ್‌ಗಳಂತಹ ಅನೇಕ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಹೆಚ್ಚು ಬಳಸಲಾಗುತ್ತದೆ.

    ಸೂಪ್‌ಗಳು ಮತ್ತು ಸ್ಟಾಕ್‌ಗಳು: ಪ್ರಾಣಿಗಳ ಕೊಬ್ಬನ್ನು ಕೆಲವು ಸೂಪ್‌ಗಳು ಮತ್ತು ಸ್ಟಾಕ್‌ ಗಳಂತಹ ಪದಾರ್ಥಗಳ ಪರಿಮಳವನ್ನು ಹೆಚ್ಚಿಸಲು ಬಳಸಲಾಗುತ್ತದೆ.

    ಚೀಸ್ ಮತ್ತು ಡೈರಿ ಉತ್ಪನ್ನಗಳು: ಪ್ರಾಣಿಗಳ ಕೊಬ್ಬನ್ನು ಕೆಲವು ಸಂಸ್ಕರಿಸಿದ ಚೀಸ್‌ನಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ

    ಚಾಕೊಲೇಟ್ ಹಾಗೂ ಘನೀಕೃತ ಆಹಾರಗಳು: ಕೆಲವು ಚಾಕೊಲೇಟ್ ರುಚಿ ಹಾಗೂ ವಿನ್ಯಾಸವನ್ನು ಒದಗಿಸಲು ಪ್ರಾಣಿಗಳ ಕೊಬ್ಬನ್ನು ಸೇರಿಸಬಹುದು. ಅದಲ್ಲದೇ ಸಿದ್ಧಪಡಿಸಿದ ಹೆಪ್ಪುಗಟ್ಟಿದ ಆಹಾರಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಹೆಚ್ಚು ಬಳಸಲಾಗುತ್ತದೆ.

    DAKSHINA KANNADA

    ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧ*ನ

    Published

    on

    ಮಂಗಳೂರು : ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧ*ನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಇಹಲೋಕ ತ್ಯಜಿಸಿದರು.

    ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್  ರಾಜ್ಯಾಧ್ಯಕ್ಷರಾಗಿದ್ದ ಡೇಸಾ, ಮಾನವ ಹಕ್ಕು ಹೋರಾಟಗಾರರಾಗಿದ್ದರು. ಅನ್ಯಾಯ, ಅಕ್ರಮಗಳ ವಿರುದ್ಧ ಧ್ವನಿ ಎತ್ತುತ್ತಿದ್ದರು. ಅಲ್ಲದೇ,  ಪೊಲೀಸರ ದೌರ್ಜ*ನ್ಯದ ವಿರುದ್ಧ ಸಂಘಟಿತ ಹೋರಾಟ ನಡೆಸುತ್ತಿದ್ದರು.

    ಇದನ್ನೂ ಓದಿ : 2.5 ಲಕ್ಷಕ್ಕೆ ನವಜಾತ ಶಿಶು ಮಾರಾಟ ಯತ್ನ; 10 ಮಂದಿಯ ಬಂಧನ

    ಅನೇಕ ಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದ ಅವರ ಮೇಲೆ ಹಿಂದೊಮ್ಮೆಅವರ ಕಚೇರಿಯಲ್ಲೇ ಕೊ*ಲೆಯತ್ನವೂ ನಡೆದಿತ್ತು.  ಡೇಸಾ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಯಾವುದೇ ಧಾರ್ಮಿಕ ಕ್ರಿಯೆ ನಡೆಸದೆ ಮೃ*ತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನಾಳೆ ಹಸ್ತಾಂತರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Continue Reading

    LATEST NEWS

    ಉಡುಪಿ : ಚಲಿಸುತ್ತಿದ್ದ ಕಾರಿನಲ್ಲಿ ಬೆಂ*ಕಿ

    Published

    on

    ಉಡುಪಿ : ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂ*ಕಿ ಕಾಣಿಸಿಕೊಂಡಿರುವ ಘಟನೆ ಉಡುಪಿಯ ಕಿನ್ನಿಮೂಲ್ಕಿ ಸಮೀಪದ ಗೋವಿಂದ ಕಲ್ಯಾಣ ಮಂಟಪ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದೆ.

    ಹಿರಿಯ ನಾಗರಿಕರೊಬ್ಬರು ತಮ್ಮ ಆಲ್ಟೋ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಇಂಜಿನ್ ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ತಕ್ಷಣವೇ ವೃದ್ಧರು ಕಾರಿನಿಂದ ಇಳಿದಿದ್ದಾರೆ.

    ಸಾರ್ವಜನಿಕರು ಅ*ಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.  ಅ*ಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ  ಬೆಂ*ಕಿ ನಂದಿಸಿದ್ದು, ಇದರಿಂದ ಸಂಭಾವ್ಯ ಅಪಾಯ ತಪ್ಪಿದೆ.

    Continue Reading

    LATEST NEWS

    ದಸರಾ ಹಬ್ಬ: ಮೈಸೂರಿಗೆ ತೆರಳುವ 34 ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

    Published

    on

    ಬೆಂಗಳೂರು: ದಸರಾ ಸಂಬಂಧ ಮೈಸೂರಿಗೆ ಪ್ರಯಾಣಿಸುವರ ಸಂಖ್ಯೆ ಅಧಿಕವಾಗುವುದರಿಂದ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಲಿದೆ. ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈಋತ್ಯ ರೈಲ್ವೆ ವಲಯವು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಣೆ ಮಾಡಲಿದೆ.

    1 ಸ್ಲೀಪರ್‌ ಬೋಗಿ

    ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್‌

    ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್‌ (17302)

    ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌ (06233/06234)

    ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್‌ಪ್ರೆಸ್‌ (17307)

    ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್‌ (17308)

    ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್‌ (16591)

    ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ (16592)

    ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16535)

    ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16536)

    (ಈ ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ)

    2 ಸ್ಲೀಪರ್‌ ಬೋಗಿ

    ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್‌

    ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ (16228)

    (ಈ ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ)

    1 ಜನರಲ್‌ ಬೋಗಿ

    ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್

    ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ (16221)

    ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌

    ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274)

    ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582)

    ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213)

    ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214)

    ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌ (16225)

    ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್‌ (16226)

    ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365)

    ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366)

    ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್‌ (16239/16240)

    ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267)

    ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268)

    ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269)

    ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270)

    ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್‌ಪ್ರೆಸ್‌ (16529)

    ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

    Continue Reading

    LATEST NEWS

    Trending