ಮಂಗಳೂರು/ಹರ್ಯಾಣ : ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ನೀರಜ್ ಸದ್ದಿಲ್ಲದೆ ವಿವಾಹವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ತನ್ನ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಈ ವಿಚಾರ ಬಹಿರಂಗ ಪಡಿಸಿದ್ದಾರೆ.
ಜೀವನದ ಹೊಸ ಅಧ್ಯಾಯನವನ್ನು ಕುಟುಂಬದೊಂದಿಗೆ ಶುರು ಮಾಡಿದ್ದೇನೆ. ನಮ್ಮನ್ನು ಈ ಹಂತಕ್ಕೆ ತಲುಪಿಸಿದ ಪ್ರತಿಯೊಂದು ಆಶೀರ್ವಾದಕ್ಕೂ ಕೃತಜ್ಞ. ಸಂತೋಷ, ಪ್ರೀತಿಯಿಂದ ಬಂಧ ಬೆಸೆದಿದೆ. ನೀರಜ್ – ಹಿಮಾನಿ ಎಂದು ಶೀರ್ಷಿಕೆ ಬರೆದು ಫೋಟೋಗಳನ್ನು ಹಂಚಿಕೊಂಡಿದ್ದಾರೆ ನೀರಜ್. ಹಿಮಾನಿ ಮೋರ್ ಸೋನಿಪತ್ ಮೂಲದವರಾಗಿದ್ದು, ಯುಎಸ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ನವದಂಪತಿ ಹನಿಮೂನ್‌ಗೆ ತೆರಳಿದ್ದಾರೆ ಎನ್ನಲಾಗಿದೆ.
ಹಿಮಾನಿಯೂ ಕ್ರೀಡಾಪಟು:
ನೀರಜ್ ಚೋಪ್ರಾ ಮದುವೆ ಫೋಟೋಗಳನ್ನು ಹಂಚಿಕೊಂಡ ಮೇಲೆಯೆ ಅವರು ವಿವಾಹವಾಗಿರುವ ವಿಚಾರ ಗೊತ್ತಾಗಿದೆ. ಫೋಟೋ ವೈರಲ್ ಆಗುತ್ತಿದ್ದಂತೆ ನೀರಜ್ ಚೋಪ್ರಾ ಕೈ ಹಿಡಿದ ಯುವತಿ ಯಾರು ಎಂಬ ಕುತೂಹಲ ಮನೆ ಮಾಡಿದೆ. ಗೂಗಲ್‌ನಲ್ಲಿ ಹಿಮಾನಿ ಬಗ್ಗೆ ಹುಡುಕಾಟ ನಡೆಸಲಾಗಿದೆ.
ಹಿಮಾನಿ ಮೋರ್ ಟೆನಿಸ್ ತಾರೆಯೂ ಹೌದು. ಸೋನಿಪತ್‌ನ ಲಿಟಲ್ ಏಂಜಲ್ಸ್ ಶಾಲೆಯಲ್ಲಿ ಓದಿದ್ದಾರೆ. ಲೂಯಿಸಿಯಾನ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾನಿಲಯದಲ್ಲಿ ಟೆನಿಸ್ ಕೋಚ್ ಆಗಿಯೂ ಕೆಲಸ ಮಾಡಿದ್ದಾರೆ.
ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಿರಾಂಡಾ ಹೌಸ್‌ನಲ್ಲಿ ರಾಜ್ಯ ಶಾಸ್ತ್ರ ಮತ್ತು ಭೌತಿಕ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಸದ್ಯ ಯುಎಸ್‌ಯಲ್ಲಿ ಓದುತ್ತಿದ್ದಾರೆ. ಅಂದಹಾಗೆ ಹಿಮಾನಿ ಸಹೋದರ ಹಿಮಾಂಶು ಕೂಡ ಟೆನಿಸ್ ಆಟಗಾರ ಎಂದು ತಿಳಿದುಬಂದಿದೆ.
ಅಭಿಮಾನಿಗಳಿಂದ ಶುಭಾಶಯ :
ಒಂದಿಂಚು ಮಾಹಿತಿ ನೀಡದೆ ಮದುವೆಯಾಗಿ ಶಾ*ಕ್ ಕೊಟ್ಟಿದ್ದಾರೆ ನೀರಜ್ ಚೋಪ್ರಾ. ನೀರಜ್ ಚೋಪ್ರಾ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಅವರ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ. ನವದಂಪತಿಗೆ ಅಭಿನಂದನೆಗಳು. ಚೆನ್ನಾಗಿರಿ ಎಂದು ಕಮೆಂಟ್ಸ್ ಮಾಡುತ್ತಿದ್ದಾರೆ.
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದಿದ್ದ ನೀರಜ್ ಚೋಪ್ರಾ ಎಲ್ಲರ ಮನ ಗೆದ್ದಿದ್ದರು. ಪ್ಯಾರೀಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದರು. ಈ ಮೂಲಕ ಸತತ 2 ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಮಂಗಳೂರು/ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪಂತ್, ಈ ಬಾರಿ ತಂಡ ಚೊಚ್ಚಲ ಟ್ರೋಫಿ ಜಯಿಸಲು ಸಂಪೂರ್ಣ ಸಾಮರ್ಥ್ಯ ಬಳಸಿ ಆಡುವುದಾಗಿ ಹೇಳಿದ್ದಾರೆ.
‘ನಾನು ತಂಡಕ್ಕಾಗಿ ನನ್ನ 200 ಪ್ರತಿಶತವನ್ನು ನೀಡುತ್ತೇನೆ. ಅದು ನಿಮಗೆ ನನ್ನ ಬದ್ಧತೆಯಾಗಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ನನ್ನ ಸಾಮರ್ಥ್ಯ ಮೀರಿ ಪ್ರಯತ್ನಿಸುತ್ತೇನೆ. ನಾನು ನಿಜವಾಗಿಯೂ ಉತ್ಸುಕನಾಗಿದ್ದೇನೆ. ಹೊಸ ಆರಂಭ ಮತ್ತು ಹೊಸ ಶಕ್ತಿಗಾಗಿ ಎದುರು ನೋಡುತ್ತಿದ್ದೇನೆ’ ಎಂದು ಪಂತ್ ಹೊಸ ನಾಯಕನಾಗಿ ನೇಮಕಗೊಂಡ ನಂತರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ನಾವು ಹೊಸ ಭರವಸೆ, ಆಕಾಂಕ್ಷೆ, ಹೊಸ ಆತ್ಮವಿಶ್ವಾಸದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸುತ್ತೇವೆ. ನಮ್ಮ ಹೊಸ ನಾಯಕ ರಿಷಭ್ ಪಂತ್ ಅವರನ್ನು ನಿಮಗೆಲ್ಲರಿಗೂ ಪರಿಚಯಿಸಲು ನಾನು ಬಯಸುತ್ತೇನೆ’ ಎಂದು ತಂಡದ ಮಾಲೀಕ ಸಂಜೀವ್ ಗೋಯೆಂಕಾ ಹೇಳಿದ್ದಾರೆ.
ಕಳೆದ ವರ್ಷ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಅವರನ್ನು 27 ಕೋಟಿ ರೂ. ನೀಡಿ ಲಖನೌ ತಂಡ ಖರೀದಿಸಿತ್ತು.
ಮಂಗಳೂರು : 144 ವರ್ಷಗಳ ಬಳಿಕ ನಡೆಯುವ ಮಹಾ ಕುಂಭಮೇಳದಲ್ಲಿ ಅಖಿಲ ಭಾರತೀಯ ಸಂತಸಮಿತಿ ಕರ್ನಾಟಕ ಘಟಕದಿಂದ ಕಾರ್ಯಕರ್ತರು 2025 ಜನವರಿ 25 ರಿಂದ 30 ರವರೆಗೆ ಭಾಗವಹಿಸುವುದಾಗಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ವಿಶ್ವದ ಅತೀ ದೊಡ್ಡ ಉತ್ಸವವೇ ಮಹಾ ಕುಂಭಮೇಳ, ನಾನಾ ಯತಿ ಶ್ರೇಷ್ಠರು ಭಾಗವಹಿಸುವ ಕುಂಭಮೇಳದಲ್ಲಿ ವ್ಯತ್ಯಾಸ್ತ ಹೈದವ ಸಂಘಟನೆಗಳಿಂದ ಚರ್ಚೆ ಬೈಠಕ್ ನಡೆಯುವುದು. ಜನವರಿ 21,22 ದಿನಾಂಕದಲ್ಲಿ ಅಖಿಲ ಭಾರತೀಯ ಸಂತ ಸಮಿತಿಯ ಬೈಠಕ್ ನಡೆಯಲಿದೆ. ಅಖಿಲ ಭಾರತ ಸಂತ ಸಮಿತಿ ಹಾಗೂ ಗಂಗಾ ಮಹಾಸಭೆಯ ಸಂಯುಕ್ತತೆಯಲ್ಲಿ ವಾಸ್ತವ್ಯ ಉಪಹಾರದ ವ್ಯವಸ್ಥೆಯು ಸಂಘಟನೆಯಿಂದ ಮಾಡಲಾಗಿದೆ.
ರಾಜ್ಯಾಧ್ಯಕ್ಷರಾದ ಮಂಗಳೂರು ಓಂ ಶ್ರೀ ಮಠದ ಸ್ವಾಮಿ ಹಾಗೂ ಮಾತಾಶ್ರೀ ಓಂ ಶ್ರೀ ಶಿವ ಜ್ಞಾನಮಹಿ ಸರಸ್ವತಿ ಸಮೇತ ಮಹಾಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ, ಸಮಿತಿ ಮುಖ್ಯ ಕಾರ್ಯದರ್ಶಿ ಕೊಡಗು ಅರಸೀಗುಪ್ಪೆ ಶ್ರೀ ಮಂಜುನಾಥ ಕ್ಷೇತ್ರದ ಸ್ವಾಮಿ ಶ್ರೀ ರಾಜೇಶ್ ನಾಥ್ ಗುರೂಜಿ, ಸಂಘಟನಾ ಕಾರ್ಯದರ್ಶಿ ಕೊಡಗು ಬೆಂಗಳೂರು ವಿರಕ್ತಮಠದ ಶ್ರೀ ನಿಶ್ಚಲ ನಿರಂಜನ ದೇಶೀ ಕೇಂದ್ರ ಸ್ವಾಮೀಜಿ, ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಅರಸೀಕೆರೆ ರುದ್ರಾಕ್ಷ ಫೌಂಡೇಶನ್ ಶ್ರೀ ಜಯಪ್ರಕಾಶ್ ಗುರೂಜಿ, ಕಾರ್ಯದರ್ಶಿಗಳಾದ ಕಡೂರು ಅಯ್ಯಪ್ಪ ಸ್ವಾಮಿ ಕ್ಷೇತ್ರದ ಶ್ರೀ ಭದ್ರಾರಾಜ್ ಸ್ವಾಮೀಜಿ, ಫೌಂಡರ್ ಶ್ರೀ ಮಹಾ ತಪಸ್ವಿ ಸೇವಾ ಪ್ರತಿಷ್ಠಾನ ಹರಿಹರ ಪರಂಪೂಜ್ಯ ಅವಧೂತ ಕವಿ ಗುರುರಾಜ ಗುರೂಜಿ ಹಾಗೂ ಸಮಿತಿಯ ಸಂಯೋಜಕ ಸಮಿತಿ ಅಧ್ಯಕ್ಷ ಅಡ್ವಕೇಟ್ ವೀರೇಶ್ ಅಜ್ಜಣ್ಣನವರ್ ಹರಿಹರ ಜೊತೆಯಲ್ಲಿ ಸ್ವಾಮೀಜಿಯವರ ಶಿಷ್ಯರು ಭಾಗವಹಿಸಲಿದ್ದಾರೆ.
ಮಂಗಳೂರು/ ಕೊಲ್ಕತ್ತಾ : ಆರ್‌ಜಿಕರ್ ವೈದ್ಯಕೀಯ ಮತ್ತು ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾ*ಚಾರ ನಡೆಸಿ, ಹ*ತ್ಯೆಗೈದಿರುವ ಆರೋಪಿ ಸಂಜಯ್ ರಾಯ್‌ಗೆ ಜೀ*ವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಪಶ್ಚಿಮ ಬಂಗಾಳದ ಸಿಯಾಲ್ದಾ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದ್ದು, ಅಪರಾಧಿಗೆ ಜೀ*ವಾವಧಿ ಶಿಕ್ಷೆ ಜೊತೆಗೆ 50,000 ರೂಪಾಯಿ ದಂಡವನ್ನೂ ವಿಧಿಸಿದೆ. ಅಲ್ಲದೇ, ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಇದೇ ವೇಳೆ ಆದೇಶಿಸಿದೆ.
2024ರ ಆಗಸ್ಟ್ 9 ರಂದು ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ನಡೆಸಿ, ಹ*ತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಇಡೀ ದೇಶದಾದ್ಯಂತ ಭಾರಿ ಆಕ್ರೋಶ ಕೇಳಿ ಬಂದಿತ್ತು. ದೇಶದ ಬಹುತೇಕ ಭಾಗಗಳಲ್ಲಿ ವೈದ್ಯರು ಮುಷ್ಕರ ನಡೆಸಿದ್ದರು.
ಆಗಸ್ಟ್ 10 ರಂದು ಸಂಜಯ್ ರಾಯ್‌ನನ್ನು ಬಂಧಿಸಲಾಯಿತು. ಕೊಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಪ್ರಕರಣದ ವಿಚಾರಣೆ ನವೆಂಬರ್ 12 ರಂದು ಆರಂಭವಾಗಿತ್ತು. ಒಟ್ಟು 50 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿದೆ. ಆರೋಪಿಯ ವಿಚಾರಣೆ ಜ.9ರಂದು ಕೊನೆಗೊಂಡಿತ್ತು.
Pingback: ಲಖನೌಗೆ ರಿಷಭ್ ಪಂತ್ ಸಾರಥಿ - NAMMAKUDLA NEWS - ನಮ್ಮಕುಡ್ಲ ನ್ಯೂಸ್