Thursday, December 2, 2021

ಕೆರೆಗೆ ಬಿದ್ದು ವೈದ್ಯೆ ಸಾವು ಪ್ರಕರಣ: ಮಾಲೀಕನ ಮೇಲೆ ಸಂಶಯ ವ್ಯಕ್ತಪಡಿಸಿ ತಾಯಿಯಿಂದ ದೂರು ದಾಖಲು

ವಿಟ್ಲ: ಅಡ್ಯನಡ್ಕ ವಾರಣಾಸಿ ಫಾರ್ಮ್ ನಲ್ಲಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮೃತಳ ತಾಯಿ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕೆರೆಯ ಮಾಲಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಕೆರೆಯ ಮಾಲಕ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪಾರ್ಥ ವಾರಣಾಸಿ ಅವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಬಲ್‌ ಫೇರ್ನಾಂಡಿಸ್‌ ರವರ ಮಗಳು ಮೈಝಿ ಕರೋಲ್‌ ಫೆರ್ನಾಂಡಿಸ್‌ರವರು ಬಂಟ್ವಾಳ ತಾಲೂಕು ಕೇಪು ಗ್ರಾಮದ ವಾರಣಾಸಿ ಪಾಮ್ಸಗೆ ಕೃಷಿ ಅಧ್ಯಯನಕ್ಕೆಂದು ಸೆ. 14 ರಂದು ಆಗಮಿಸಿದ್ದರು.
ವಾರಣಾಸಿ ಫಾರ್ಮ್ಸ್ ನ ಕೆರೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ತಿಂಗಳ ಬಳಿಕ ಆಕೆಯ ತಾಯಿ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ದೂರು ನೀಡಿದ್ದಾರೆ.
ಫೆರ್ನಾಂಡಿಸ್‌ರವರು ತನ್ನ ರೂಮಿನಿಂದ ವಾರಣಾಸಿ ಫಾರ್ಮ್ಸ್ ನಲ್ಲಿರುವ ನೀರಾವರಿ ಕೆರೆ ಬಳಿ ಹೋದಾಗ ಕೆರೆಗೆ ತಡೆಗೋಡೆ ಬೇಲಿಯನ್ನು ಅದರ ಮಾಲೀಕರಾದ ಪಾರ್ಥರವರು ನಿರ್ಮಿಸದೆ ನಿರ್ಲಕ್ಷ ವಹಿಸಿರುವುದರಿಂದ ಮೈಝಿ ಕರೋಲ್‌ ಫೇರ್ನಾಂಡಿಸ್‌ ಸುಮಾರು 15 ಅಡಿ ನೀರಿರುವ ಕೆರೆಗೆ ಬಿದ್ದು ಮೃತಪಟ್ಟಿದ್ದರು ಎಂದು ಆಕೆಯ ತಾಯಿ ಆರೋಪಿಸಿದ್ದು, ಅಲ್ಲದೇ ಮೈಝಿ ಕರೋಲ್‌ ಫೇರ್ನಾಂಡಿಸ್‌ರವರ ಮರಣದ ಬಗ್ಗೆ ಸಂಶಯ ಇದೆ ಎಂದು ಆಕೆಯ ತಾಯಿ ದೂರು ನೀಡಿದ್ದು, ಪಾರ್ಥ ವಾರಣಾಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಟ್ಲ: ಕೃಷಿ ಫಾರ್ಮ್‌ಹೌಸ್‌ನ ಕೆರೆಗೆ ಬಿದ್ದು ವೈದ್ಯೆ ಸಾವು

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...