Friday, August 19, 2022

ಅನಾರೋಗ್ಯದಿಂದ ಯುವತಿ ಸಾವು – ವೈದ್ಯರ ನಿರ್ಲಕ್ಷ್ಯ ಕುಟುಂಬಸ್ಥರ ಆರೋಪ

ಉಡುಪಿ ಅಗಸ್ಟ್ 22: ಖಾಸಗಿ ಹಾಗೂ ಸರಕಾರಿ ವೈದ್ಯರ ನಿರ್ಲಕ್ಷ್ಯ ದಿಂದಾಗಿ ಮಹಿಳೆ ಸಾವನಪ್ಪಿದ್ದಾರೆ ಮೃತರ ಸಂಬಂಧಿಕರು ಆರೋಪಿಸಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಮೃತ ಯುವತಿಯನ್ನು ರಕ್ಷಾ (26) ಎಂದು ಗುರುತಿಸಲಾಗಿದೆ. ರಕ್ಷಾ ಎರಡು ಮೂರು ದಿನ ಅನಾರೋಗ್ಯದಿಂದ ಬಳಲುತ್ತಿದ್ದರು. ಆಗಸ್ಟ್ 21 ರ ಬೆಳಿಗ್ಗೆ ಯುವತಿಯನ್ನು ಚಿಕಿತ್ಸೆಗಾಗಿ ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಮನೆಗೆ ವಾಪಾಸ್‌ ಕರೆತರಲಾಗಿತ್ತು. ಆದರೆ, ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆಯನ್ನು ಮನೆಯವರು ಕರೆದಾಗ ಆಕೆ ಯಾವುದೇ ಸ್ಪಂದನೆ ನೀಡಿಲ್ಲ. ತಕ್ಷಣ ಆಕೆಯನ್ನು ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಆದರ್ಶ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅಷ್ಟರಲ್ಲಿ ಆಸ್ಪತ್ರೆಯ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ಹೇಳಲಾಗಿದೆ.


ಯುವತಿ ಒಮ್ಮೆಲ್ಲೇ ಸಾವನ್ನಪ್ಪಲು ಮಿಷನ್ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ರಕ್ಷಾ ಅವರ ಕುಟುಂಬ ಸದಸ್ಯರು ದೂರಿದ್ದಾರೆ. ಸ್ಥಳೀಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರೂ ಆಗಿರುವ ರಕ್ಷಾ ಅವರ ಪತಿ ಶಿವಪ್ರಸಾದ್, ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಈ ಪ್ರಕರಣದ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.


ಈ ನಡುವೆ ರಕ್ಷಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗಿದೆ. ಆದರೆ ರ್‍ಯಾಪಿಡ್‌ ಆಂಟಿಜನ್‌ ಟೆಸ್ಟ್‌ನಲ್ಲಿ ನೆಗೆಟಿವ್‌ ಆಗಿತ್ತು ಎಂದು ಕೂಡಾ ಹೇಳಲಾಗಿದೆ. ಹಾಗೆಯೇ ಮೃತ ದೇಹದ ಅಂತಿಮ ಸಂಸ್ಕಾರದ ವಿಚಾರದಲ್ಲಿ ಗೊಂದಲಗಳು ಉಂಟಾಗಿದೆ ಎಂದು ವರದಿಯಾಗಿದೆ. ಹಾಗೆಯೇ ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ಚುಚ್ಚುಮದ್ದು ನೀಡಿದ ವೈದ್ಯರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಕ್ಷಾ ಅವರು ಇಂಧಿರಾನಗರದ ನಿವಾಸಿಯಾಗಿದ್ದು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...

ಲಾಠಿ ಹಿಡಿದ ಕೈಯಲ್ಲಿ ಪೊರಕೆ ಹಿಡಿದು ಕಲ್ಲಡ್ಕ ಬಸ್ಟ್ಯಾಂಡ್ ಕ್ಲೀನ್: ಮೆಲ್ಕಾರ್ ಟ್ರಾಫಿಕ್ ಪೊಲೀಸರ ಸಮಾಜಮುಖಿ ಕಾರ್ಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ‌ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ.ಕಲ್ಲಡ್ಕದ ಪೇಟೆಯಲ್ಲಿರುವ ಬಸ್ ನಿಲ್ದಾಣ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...