ಬೆಂಗಳೂರು: ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯರೊಬ್ಬರು ಅಪಾರ್ಟ್‌ಮೆಂಟ್ ನ 11ನೇ ಮಾಳಿಗೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆಗೆ ಶರಣಾದ ಡಾಕ್ಟರ್.
ಇವರು 3 ತಿಂಗಳ ಹಿಂದೆ ವೈದ್ಯೆಯೊಬ್ಬರನ್ನು ಮದುವೆಯಾಗಿ ಅಮೃತಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದರು. ಆದರೆ ಇದ್ದಕಿದ್ದಂತೆ ಆತ್ಮಹತ್ಯೆ ಶರಣಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.