Wednesday, December 1, 2021

ಮಂಗಳೂರಿನ ಸರ್ಕಾರದ ದೊಡ್ಡಾಸ್ಪತ್ರೆಯ ವೈದ್ಯಾಧಿಕಾರಿಯ ‘ರಂಗಿನಾಟ’

ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿ ಜೊತೆಗೆ ಈತ ಅಸಭ್ಯವಾಗಿ ವರ್ತಿಸಿದ್ದಾನೆ. ತನ್ನ ತೊಡೆಯ ಓರ್ವ ಮಹಿಳೆಯನ್ನು ಕೂರಿಸುವುದು, ಅವರ ತೊಡೆಯ ಮೇಲೆ ಮಲಗುವುದು, ಮಹಿಳಾ ಸಿಬ್ಬಂದಿ ಮೂಲಕ ಆತ ಪಾದ ಸೇವೆ ಮಾಡಿಸುತ್ತಿರುವ ಮೂಲಕ ರಂಗಿನಾಟ ಆಡಿದ್ದಾನೆ.

ಸರ್ಕಾರಿ ವೈದ್ಯನಾಗಿರುವ ಈತನ ಜೊತೆಗೆ ಸಹಕರಿಸದ ಹೊರ ಗುತ್ತಿಗೆಯ ಸಿಬ್ಬಂದಿಯನ್ನು ಕೆಲಸದಿಂದ ತೆಗೆಸುವ ಅಥವಾ ಟ್ರಾನ್ಸ್ಫರ್‌ ಮಾಡಿಸುವ ಹೀಗೆ ಹಲವಾರು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ. ಎಂದು ಆರೋಪ ಕೇಳಿ ಬಂದಿದೆ. ಈ ಭಯಕ್ಕೆ ಮಹಿಳಾ ಸಿಬ್ಬಂದಿ ಆತ ಹೇಳಿದಂತೆ ಕೇಳುತ್ತಿದ್ದರು.


ಈತ ಮಹಿಳಾ ಸಿಬ್ಬಂದಿ ಜೊತೆ ಆಗಾಗ ಟ್ರಿಪ್ ಹೋಗುತ್ತಿದ್ದ. ಈ ಸಂದರ್ಭದಲ್ಲೂ ಆತ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

ಕಿರುಕುಳದಿಂದ ನೊಂದ ಮಹಿಳೆಯರು ಆರೋಪಿ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿಂದೆಯೂ ದಕ್ಷಿಣ ಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ವರದಿಯಂತೆ ಈತ ಸಸ್ಪೆಂಡ್ ಆಗಿದ್ದರು. ಆದರೆ ಸರ್ಕಾರದ ಆದೇಶಕ್ಕೆ ತಡೆ ತಂದು ಮತ್ತೆ ಅದೇ ಕೃತ್ಯ ಮುಂದುವರಿಸುತ್ತಿದ್ದಾನೆ.

ಉಡುಪಿ ಜಿಲ್ಲೆ ಕುಂದಾಪುರ ಮೂಲದವನಾದ ಈತ ಸದ್ಯ ಮಂಗಳೂರಿನ ದೇರಳಕಟ್ಟೆಯಲ್ಲಿ ವಾಸವಾಗಿದ್ದಾನೆ.

ಕಿರುಕಳ ಪ್ರಕರಣದಲ್ಲಿಯೇ ಭಟ್ಕಳಕ್ಕೆ ವರ್ಗಾವಣೆಯಾಗಿ ಮತ್ತೆ ಈಗ ಮಂಗಳೂರಿಗೇ ಬಂದಿದ್ದನು.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...