Friday, July 1, 2022

ಗಂಟಲು ಸೇರಿದ ಶ್ರೀಕೃಷ್ಣನ ಮೂರ್ತಿ-ತೀರ್ಥ ಸೇವಿಸುವಾಗ ಅವಘಡ

ಬೆಳಗಾವಿ: ಗಂಟಲಲ್ಲಿ ಲೋಹದ ಶ್ರೀ ಕೃಷ್ಣನ ಮೂರ್ತಿ ಸಿಕ್ಕಿಕೊಂಡು ಪ್ರಾಣಾಪಾಯಕ್ಕೆ ಸಿಲುಕಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮೂರ್ತಿ ಹೊರತೆಗೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ತೀರ್ಥ ಸೇವಿಸುವ ವೇಳೆ ತೀರ್ಥದ ಬಟ್ಟಲಿನಲ್ಲಿದ್ದ ದೇವರ ಮೂರ್ತಿ ಆಕಸ್ಮಿಕವಾಗಿ ವ್ಯಕ್ತಿಯ ಗಂಟಲು ಸೇರಿದೆ. ಆದರೆ 5 ಸೆಂ.ಮೀ ಉದ್ದದ ಮೂರ್ತಿ, ಗಂಟಲೊಳಗೆ ಸೇರಿರುವುದು 45 ವರ್ಷದ ವ್ಯಕ್ತಿಗೆ ಆ ಕ್ಷಣ ಅರಿವಿಗೆ ಬಂದಿರಲಿಲ್ಲ.

ಕೆಲ ನಿಮಿಷಗಳ ನಂತರ ಗಂಟಲುನೋವು ಮತ್ತು ಊತ ಕಾಣಿಸಿಕೊಂಡಿತ್ತು.

ಬಳಿಕ ಅವರನ್ನು ಚಿಕಿತ್ಸೆಗಾಗಿ ನಗರದ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ದಾಖಲಿಸಲಾಯಿತು.

ವೈದ್ಯರು ಎಂಡೋಸ್ಕೋಪಿ ಮೂಲಕ ಪರಿಶೀಲಿಸಿದಾಗ ಮೂರ್ತಿಯ ಎಡಗಾಲು ವ್ಯಕ್ತಿಯ ಅನ್ನನಾಳದಲ್ಲಿ ಸಿಲುಕಿದ್ದು ದೃಢವಾಗಿದೆ.

ಬಳಿಕ ಅವರನ್ನು ಚಿಕಿತ್ಸೆಗಾಗಿ ನಗರದ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ದಾಖಲಿಸಲಾಯಿತು.

ವೈದ್ಯರು ಎಂಡೋಸ್ಕೋಪಿ ಮೂಲಕ ಪರಿಶೀಲಿಸಿದಾಗ ಮೂರ್ತಿಯ ಎಡಗಾಲು ವ್ಯಕ್ತಿಯ ಅನ್ನನಾಳದಲ್ಲಿ ಸಿಲುಕಿದ್ದು ದೃಢವಾಗಿದೆ.

ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ಮೂರ್ತಿಯನ್ನು ದೇಹದಿಂದ ಹೊರ ತೆಗೆಯುವಲ್ಲಿ ಸಫಲರಾಗಿದ್ದಾರೆ.  ವ್ಯಕ್ತಿ ಅಪಾಯದಿಂದ ಪಾರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೊಗ್ಲಿಂಗ್ ಸ್ಮರಣೆ

ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.ಕನ್ನಡದ ಪ್ರಥಮ ಪತ್ರಿಕೆ...

ಟೈಲರ್ ಕನ್ನಯ್ಯ ಲಾಲ್ ಕೊಲೆಗೈದವರಿಗೆ ಮರಣದಂಡನೆ ವಿಧಿಸಿ: ಶಾಸಕ ಕಾಮತ್‌ ಆಗ್ರಹ

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು...