Connect with us

    LATEST NEWS

    ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್‌ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್

    Published

    on

    ಬೆಂಗಳೂರು/ಮಂಗಳೂರು: ಬಹುತೇಕ ವೈದ್ಯರು ಬರೆಯುವ ಪ್ರಿಸ್ಕ್ರಿಪ್ಶನ್‌ ಇಂಗ್ಲೀಷ್‌ನಲ್ಲಿದ್ದು ಬಹುತೇಕ ವೈದ್ಯರು ಅಸ್ಪಷ್ಟವಾಗಿ ಬರೆಯುತ್ತಾರೆ. ಅದನ್ನು ಓದಲು ಪರದಾಡಬೇಕಾಗುತ್ತದೆ. ಆದರೆ ಬೆಂಗಳೂರಿನಲ್ಲಿರುವ ವೈದ್ಯರೊಬ್ಬರು ಬರೆದಿರುವ ಔಷಧೀಯ ಚೀಟಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಅಷ್ಟಕ್ಕೂ ಈ ವೈದ್ಯರು ಬರೆದಿದ್ದ ಪ್ರಿಸ್ಕ್ರಿಪ್ಶನ್‌ನಲ್ಲೇನಿದೆ? ಈ ವೈದ್ಯರು ಔಷಧ ಚೀಟಿಯನ್ನು ಇಂಗ್ಲೀಷ್‌ನಲ್ಲಿ ಬರೆಯುವ ಬದಲು ಕನ್ನಡದಲ್ಲಿ ಬರೆದಿದ್ದಾರೆ. ಈ ಮೂಲಕ ಎಲ್ಲಾ ವೈದ್ಯರಿಗೂ ಮಾದರಿಯಾಗಿದ್ದಾರೆ. ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ವೈದ್ಯಲೋಕದಲ್ಲಿ ಬದಲಾವಣೆಗೆ ನಾಂದಿ ಹಾಡಿದ್ದಾರೆ.

    ಬೆಂಗಳೂರು ನಗರದ ಕೆ ವಿ ಡೆಂಟಲ್‌ ಕ್ಲಿನಿಕ್‌ ಆಸ್ಪತ್ರೆಯ ಹರಿಪ್ರಸಾದ್ ಸಿ ಎಸ್ ಅವರು ಬದಲಾವಣೆ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ. ತಮ್ಮ ಆರೋಗ್ಯ ತಪಾಸಣೆಗೆಂದು ಬಂದ ರೋಗಿಗೆ ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲಾ ವೈದ್ಯರಿಗೂ ಮಾದರಿಯಾಗಿದ್ದಾರೆ.

    ಯೂಟ್ಯೂಬ್ ನೋಡಿ ಆಪರೇಷನ್; ನಕಲಿ ವೈದ್ಯನ ಕೃ*ತ್ಯಕ್ಕೆ ಬಾಲಕ ಬ*ಲಿ

    ಸೆ.2 ರಂದು ಶಂಕರ್ ಎಂಬ ವ್ಯಕ್ತಿ ಡಾ. ಹರಿಪ್ರಸಾದ್ ಎಂಬ ವೈದ್ಯರ ಬಳಿ ಆರೋಗ್ಯ ತಪಾಸಣೆಗೆಂದು ತೆರಳಿದ್ದಾರೆ. ಈ ವೇಳೆ ವೈದ್ಯರು ಜೆನ್ ಮ್ಯಾಕ್ಸ್ 500 ಎಂಜಿ ಊಟದ ನಂತರ, ಮೇಗಡಾಲ್ ಮಾತ್ರೆ ಊಟದ ನಂತರ ಎಂದು ಕನ್ನಡದಲ್ಲಿ ಬರದಿದ್ದಾರೆ. ಔಷಧಿಯನ್ನು ಎಷ್ಟು ದಿನ ತೆಗೆದುಕೊಳ್ಳಬೇಕು ಮತ್ತು ಯಾವ ಸಂದರ್ಭದಲ್ಲಿ ತೆಗೆದುಕೊಳ್ಳಬೇಕು ಎಂಬುದನ್ನು ಸಹ ಕನ್ನಡದಲ್ಲೇ ಬರೆದಿದ್ದಾರೆ. ಇದೀಗ ಈ ಔಷಧ ಚೀಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

    ಇದರ ಬೆನ್ನಲ್ಲೇ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶ ಹೊರಡಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಒಂದು ವೇಳೆ ಕನ್ನಡದಲ್ಲಿ ಬರೆಯಲು ಬರದಿದ್ದರೆ ಪ್ರಾಧಿಕಾರದಿಂದ ಕಲಿಕಾ ಕೇಂದ್ರ ಆರಂಭಿಸುತ್ತೇವೆ ಎಂದು ಬಿಳಿಮಲೆ ಹೇಳಿದ್ದಾರೆ.

    2 Comments

    2 Comments

    1. Pingback: ಓವರ್‌ಟೇಕ್‌ ಭರದಲ್ಲಿ ಕಾರುಗಳ ಮಧ್ಯೆ ಭೀ*ಕರ ಅಫಘಾ*ತ; 6 ಮಂದಿ ದುರ್ಮರ*ಣ - NAMMAKUDLA NEWS - ನಮ್ಮಕುಡ್ಲ ನ್ಯೂಸ್

    2. Ananthakrishna M K

      10/09/2024 at 7:37 PM

      But many pharmacists may not able to read kannada since so many pharma shops run by other state people. We love kannada extremely. But issuance of wrong medicines should not happen.

    Leave a Reply

    Your email address will not be published. Required fields are marked *

    DAKSHINA KANNADA

    ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ

    Published

    on

    ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.

    ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

    ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.

    ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

    Continue Reading

    LATEST NEWS

    ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ

    Published

    on

    ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.

    ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.

    Continue Reading

    LATEST NEWS

    ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ

    Published

    on

    ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.

    ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

    ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

    ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.

    Continue Reading

    LATEST NEWS

    Trending