bengaluru
‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ’ -ಸಿಎಂಗೆ ಬಿಎಸ್‌ವೈ ಬರೆದ ಪತ್ರ
ಬೆಂಗಳೂರು: ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿನ ಬದಲು ಮಹನೀಯರ ಹೆಸರನ್ನು ಇಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ” ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುತ್ತೇನೆ ಎಂದು ಘೋಷಣೆ ಮಾಡಿದ್ದೀರಿ. ತಮ್ಮ ಪ್ರೀತಿ, ಅಭಿಮಾನಕ್ಕೆ ಕೃತಜ್ಞತೆಗಳು.
ಆದರೆ ರಾಷ್ಟ್ರದ ಪ್ರಹತಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಹೀಗಾಗಿ ಅಂತವರ ಹೆಸರನ್ನಿಡುವುದು ಸೂಕ್ತವಾಗಿದೆ. ಒಂದು ಬಾರಿ ಸಭೆ ಮಾಡಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಿ” ಎಂದು ತಿಳಿಸಿದ್ದಾರೆ.
ಬೆಂಗಳೂರಿನ ನಂತರ ಅತಿ ಹೆಚ್ಚು ಉದ್ದದ ರನ್‌ವೇ ಹೊಂದಿರುವ ಏರ್‌ಪೋರ್ಟ್ ಶಿವಮೊಗ್ಗ ವಿಮಾನ ನಿಲ್ದಾಣವಾಗಿದೆ. ಯಡಿಯೂರಪ್ಪ ಅವರು ಇದರ ಕಾಮಗಾರಿ ವೀಕ್ಷಿಸುವಂತೆ ಸೂಚಿಸಿದ್ದರು. ಅದರಂತೆ ಕಾಮಗಾರಿ ವೀಕ್ಷಣೆ ಮಾಡಿದ್ದೇನೆ ಎಂದಿದ್ದರು.
bangalore
ಬಿಗ್ ಬಾಸ್ ಮನೆಯಲ್ಲಿ ನಮ್ರತಾ-ಸ್ನೇಹಿತ್ ಲವ್ವಿ-ಡವ್ವಿ
Bigboss: ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್- ಸಂಗೀತಾ ಇಬ್ಬರ ಒಂದು ಜೋಡಿ ಆದರೆ ಇತ್ತ ಸ್ನೇಹಿತ್ ಮತ್ತು ನಮ್ರತಾ ಇವರಿಬ್ಬರ ಪ್ರೇಮ ಕತೆ ಶುರುವಾಗಿದೆ.
ಕ್ಯಾಪ್ಟೆನ್ಸಿ ವಿಚಾರದಲ್ಲಿ ನಮ್ರತಾ ಹಾಗೂ ಸ್ನೇಹಿತ್ ಮುನಿಸಿಕೊಂಡಿದ್ದು, ಇದೀಗ ಮತ್ತೇ ಅವರ ಫ್ರೆಂಡ್‌ಶಿಪ್ ಶುರುವಾಗಿದೆ. ‘ ನಾನು ನಿಮ್ಮ ಪ್ರೀತಿನ ಒಪ್ಪಿಕೊಂಡ್ರೆ ಏನು ಮಾಡ್ತೀರಾ ಎಂದು ಸ್ನೇಹಿತ್ ಗೆ ನಮ್ರತಾ ಹೇಳಿದ್ದಾರೆ. ಅವರ ಮಾತಿಗೆ ಸ್ನೇಹಿತ್ ನಾಚಿ ನೀರಾಗಿದ್ದಾರೆ. ಇದೀಗ ಇವರಿಬ್ಬರ ಲವ್ವಿ-ಡವ್ವಿಯಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ಸ್ನೇಹಿತ್ ಕ್ಯಾಪ್ಟನ್ ಆಗಿದ್ದಾಗ ಟಾಸ್ಕ್‌ನಿಂದ ನಮ್ರತಾ ಅವರನ್ನು ಹೊರಗೆ ಹಾಕಿದ್ದರು. ಬಳಿಕ ನಮ್ರತಾ ಅವರ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದರು.
ಕಳೆದ 60 ದಿನಗಳಿಂದ ನಡೆಯುತ್ತಿರೋ ಸೀನ್ ಅಂದರೆ ನಮ್ರತಾ ಹಿಂದೆ ಹೋಗೋದನ್ನ ಸ್ನೇಹಿತ್ ಬಿಟ್ಟಿಲ್ಲ. ನಮ್ರತಾಗೆ ಆಗಾಗ ಪ್ರೇಮ ನಿವೇದನೆ ಮಾಡುತ್ತಲೇ ಬಂದಿದ್ದಾರೆ. ನಮ್ರತಾ ಬೀಳಲ್ಲ, ಸ್ನೇಹಿತ್ ಬಿಡಲ್ಲ. ಇದೀಗ ಇದೆನ್ನೆಲ್ಲಾ ಗಮನಿಸಿ ನಮ್ರತಾ, ಸರಿ ನಾನು ನಿಮ್ಮ ಪ್ರೀತಿಯನ್ನ ಒಪ್ಪಿಕೊಂಡರೆ ಮುಂದೇನು? ಫ್ಯೂಚರ್ ಪ್ಲ್ಯಾನ್ ಏನು ಎಂದು ಕೇಳಿದ್ದಾರೆ. ಹೇಳಿ ಈಗ ನಾನು ಪ್ರೀತಿ ಮಾಡ್ತೀನಿ ಅಂದ್ರೆ ಏನು ಮಾಡ್ತೀರಿ ಎಂದು ನೇರವಾಗಿ ಪ್ರಶ್ನೆ ಎಸೆದರು.
ಆದರೆ, ಈ ಪ್ರಶ್ನೆಗೆ ಏನು ಉತ್ತರಿಸಬೇಕು ಎಂಬುದೇ ಸ್ನೇಹಿತ್‌ಗೆ ತಿಳಿಯಲಿಲ್ಲ. ಅವರು ನಕ್ಕು ಸುಮ್ಮನಾದರು. ಹೇಳಿ ಈಗ ನಾನು ಪ್ರೀತಿಸುತ್ತೇನೆ ಎಂದರೆ ಏನು ಮಾಡ್ತೀರಾ. ಇಷ್ಟು ದಿನ ಸುಮ್ಮನೆ ಕಾಳು ಹಾಕಿದ್ರಾ ಎಂದು ಮರು ಪ್ರಶ್ನೆ ಹಾಕಿದರು. ಬಿಗ್ ಬಾಸ್‌ನಿಂದ ಹೊರಗೆ ಹೋದ ಬಳಿಕ ಮನೆಯವರ ಜೊತೆ ಮಾತನಾಡೋಣ.
ಒಂದು ವರ್ಷ ಮದುವೆ ಆಗೋದು ಬೇಡ. ನಿಮ್ಮಿಷ್ಟದ ಜಾಗಕ್ಕೆ ಹೊಗೋಣ. ಸ್ವಿಜರ್‌ಲೆಂಡ್‌ಗೆ ಮೊದಲು ಹೋಗೋಣ ಎಂದರು ಸ್ನೇಹಿತ್. ಅವರ ಮಾತನ್ನು ಕೇಳಿ ನಮ್ರತಾ ನಕ್ಕರು. ನಮ್ರತಾ ನಗುತ್ತಲೇ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ರಾ? ಈ ಬಗ್ಗೆ ಕ್ಲ್ಯಾರಿಟಿ ಇಲ್ಲ. ಆದರೆ ನಮ್ರತಾ ನಗುವಿಗೆ ಸ್ನೇಹಿತ್ ಮಾತ್ರ ನಾಚಿ ನೀರಾಗಿದ್ದಾರೆ. ಅಂತೂ ಇಂತೂ ಕೋಪ ಮಾತನಾಡುತ್ತಿದ್ದಲ್ಲಾ ಅಂತ ಸಮಾಧಾನದಲ್ಲಿದ್ದಾರೆ ಸ್ನೇಹಿತ್.
bangalore
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅಮ್ಮ ನಿಧನ..!
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅಮ್ಮ ವಯೋಸಹಜದ ಕಾಯಿಲೆಯಿಂದ ಇಂದು ನಿಧನ ಹೊಂದಿದರು.
ಲೀಲಾವತಿ ಅವರು ಕೆಲವು ಸಮಯದ ಹಿಂದೆ ಆರೋಗ್ಯ ಸಮಸ್ಯೆಯಿಂದ ಬಳಳುತ್ತಿದ್ದರು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.
ಸಿನಿಮಾ ರಂಗಕ್ಕೆ ಕಾಲಿಟ್ಟ ಲೀಲಾವತಿ ಅಮ್ಮ ತಮಿಳು, ತೆಲುಗು, ಕನ್ನಡ, ಮಲೆಯಾಳಂ ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹುಟ್ಟಿದ್ದ ಅವರು ಕಿರಿಯ ವಯಸ್ಸಿನಲ್ಲೇ ಸಿನಿಮಾ ರಂಗಕ್ಕೆ ಕಾಲಿಟ್ಟು ಸುಮಾರು ಸಾಧನೆ ಮಾಡಿದ್ದಾರೆ. ಅವರ ಸಾಧನೆಗೆ ಹಲವಾರು ಪುರಸ್ಕಾರಗಳೂ ಸಂದಿವೆ. ಕರ್ನಾಟಕ ಸರಕಾರ ಕೊಡಮಾಡುವ ಜೀವಮಾನ ಸಾಧನೆಗಾಗಿ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ತುಮಕೂರ ವಿಶ್ವವಿದ್ಯಾಲಯ ಇವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
bangalore
ದೈವದ ರೀಲ್ಸ್ ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ ಕಾಂತಾರ ರಿಷಬ್ ಶೆಟ್ಟಿ..!!
ಇತ್ತೀಚಿನ ದಿನಗಳಲ್ಲಿ ದೈವದ ಬಗ್ಗೆ ರೀಲ್ಸ್ ಮಾಡೋದು ಹೆಚ್ಚಾಗುತ್ತಿದೆ. ಅಲ್ಲದೆ ವೇದಿಕೆಗಳಲ್ಲೂ ದೈವದ ವೇಷ ಹಾಕಿ ನೃತ್ಯ ಮಾಡುತ್ತಿದ್ದಾರೆ. ಇಂತಹ ವೇಷಗಳು, ನೃತ್ಯಗಳು ಹಾಗೂ ರೀಲ್ಸ್ ಗಳನ್ನು ಮಾಡೋದರಿಂದ ದೈವಾರಾಧಕರಿಗೆ, ದೈವ ನರ್ತಕರಿಗೆ ಬೇಸರ ಆಗ್ತಾ ಇದೆ. ಇದರ ಬಗ್ಗೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ನಂದಿ ಅವಾರ್ಡ್ ಫಂಕ್ಷನ್ ನಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಚಿತ್ರ ಬಂದ್ಮೇಲೆ ಒಂದಷ್ಟು ಬೇಸರದ ಸಂಗತಿಗಳೂ ನಡೆದವು. ದೈವದ ರೀಲ್ಸ್ ಮಾಡೋರು ಹೆಚ್ಚಾಗಿದ್ದಾರೆ. ಅದರಿಂದ ದೈವವನ್ನ ನಂಬೋ ಜನರಿಗೆ, ದೈವವನ್ನ ಆರಾಧಿಸೋ ನರ್ತಕರಿಗೆ ಬೇಸರ ಕೂಡ ಆಗಿದೆ. ನನಗೆ ಇವರೆಲ್ಲ ಈ ಒಂದು ಸತ್ಯದ ಬಗ್ಗೆ ಹೇಳ್ತಾನೇ ಇದ್ದಾರೆ. ಹಾಗಾಗಿಯೇ ಈ ಒಂದು ವಿಚಾರವನ್ನು ಮಾಧ್ಯಮದ ಮೂಲಕ ತಿಳಿಸೋಕೆ ಇಷ್ಟಪಡುತ್ತೇನೆ. ಇದರಿಂದ ಇದು ಎಲ್ಲೋ ಒಂದು ಕಡೆಗೆ ಇಡೀ ಕಾಂತಾರ ಚಿತ್ರ ಉದ್ದೇಶಕ್ಕೆ ಕಪ್ಪು ಚುಕ್ಕಿ ಆಗುತ್ತಿದೆ ಅನಿಸುತ್ತಿದೆ. ಇದನ್ನ ಯಾರೂ ಮಾಡ್ಬೇಡಿ. ಇದರಿಂದ ಎಲ್ಲರಿಗೂ ಹರ್ಟ್ ಆಗುತ್ತದೆ’ ಎಂದು ರಿಷಬ್ ಶೆಟ್ಟಿ ಹೇಳಿಕೊಂಡಿದ್ದಾರೆ.
ರೀಲ್ಸ್ ಅನ್ನೋದು ಸದ್ಯದ ಅತಿ ದೊಡ್ಡ ಕಿಚ್ಚಾಗಿದೆ. ಇದರಿಂದ ಒಳ್ಳೆಯ ಎಂಜಾಯ್ ಮೆಂಟ್ ಸಿಗುತ್ತಿದೆ. ಆದರೆ ಇದರ ಎಫೆಕ್ಟ್ ಬೇರೆನೆ ಆಗ್ತಾ ಇದೆ. ಕಾಂತಾರ ದೈವದ ರೀಲ್ಸ್ ಮಾಡೋದರಿಂದಲೇ ತುಳುನಾಡ ದೈವಾರಾಧಕರಿಗೆ, ದೈವ ನರ್ತಕರಿಗೆ, ಬೇಸರ ಆಗುತ್ತದೆ. ನಾನು ಒಬ್ಬ ದೈವ ಭಕ್ತನೇ ಆಗಿದ್ದೇನೆ. ಇದು ನನಗೂ ಬೇಸರ ತರಿಸುತ್ತಿದೆ. ಚಿತ್ರದ ಮೂಲ ಉದ್ದೇಶ ದೈವದ ಶಕ್ತಿ ಮತ್ತು ಸಂಸ್ಕೃತಿಯನ್ನ ಎಲ್ಲೆಡೆ ಹೇಳೋದೇ ಆಗಿದೆ. ಆದರೆ ರೀಲ್ಸ್ ಅನ್ನೋದು ಎಲ್ಲೋ ಒಂದು ಕಡೆಗೆ ಕಪ್ಪು ಚುಕ್ಕೆ ಆಗುತ್ತದೆ ಎಂದು ನೊಂದು ಕೊಂಡು ಹೇಳಿದ್ದಾರೆ. ಕಾಂತಾರ ಚಿತ್ರದಲ್ಲಿ ದೈವಾರಾಧನೆ ಇದೆ. ಇದನ್ನ ಅಷ್ಟೆ ಗೌರವದಿಂದಲೇ ಮಾಡಿದ್ದೇವೆ. ದೈವ ನರ್ತಕರನ್ನ ಸಲಹೆ-ಸೂಚನೆಯಂತೆ ಚಿತ್ರೀರಿಸಿದ್ದೇವೆ. ಇಲ್ಲಿ ದೈವಕ್ಕೆ ಮಾಡಬೇಕಿರೋ ಎಲ್ಲ ಪಾವಿತ್ರ್ಯತೆಯನ್ನು ಅಚ್ಚುಕಟ್ಟಾಗಿಯೆ ಮಾಡಿದ್ದೇವೆ. ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕಾಂತಾರ ಚಿತ್ರ ಮಾಡಿದ್ದೇವೆ ಎಂದಿದ್ದಾರೆ. ಚಿತ್ರಕ್ಕೆ ಬಂದ ಪ್ರಶಸ್ತಿಯನ್ನ ದೈವ ನರ್ತಕರಿಗೆ, ಕನ್ನಡಿಗರಿಗೆ, ಪವರ್ ಸ್ಟಾರ್ ಪುನೀತ್ ಅವರಿಗೆ ಅರ್ಪಿಸಿದ್ದಾರೆ ಎಂದರು. ಜೊತೆಗೆ ದೈವದ ರೀಲ್ಸ್ ಮಾಡ್ಬೇಡಿ ಅಂತಲೂ ರಿಕ್ವೆಸ್ಟ್ ಮಾಡಿದ್ದಾರೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್