LATEST NEWS
ಶ್ವಾನ ಚಿರತೆ ಮರಿ ಕಾದಾಟ; ಸಾವನ್ನಪ್ಪಿದ ಎರಡೂ ಪ್ರಾಣಿಗಳು.. !
Published
4 years agoon
By
Adminಶ್ವಾನ-ಚಿರತೆ ಮರಿ ಕಾದಾಟ; ಸಾವನ್ನಪ್ಪಿದ ಎರಡೂ ಪ್ರಾಣಿಗಳು.. !
Dog leopard cub fight; Both animals killed ..
ಮಂಡ್ಯ: ಚಿರತೆ ಹಾಗೂ ನಾಯಿಗಳ ನಡುವೆ ಕಾದಾಟ ನಡೆದು ಎರಡೂ ಪ್ರಾಣಿಗಳು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ನಾಯಿ ಹಾಗೂ ಎಂಟು ತಿಂಗಳ ಚಿರತೆ ಮರಿ ಸೆಣೆಸಾಡಿದ್ದವು.
ಆದರೆ ಈ ಕಾದಾಟದಲ್ಲಿ ಚಿರತೆ ಹಾಗೂ ನಾಯಿ ಎರಡು ಕೂಡಾ ಸಾವನ್ನಪ್ಪಿದೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿರತೆ ಹಾವಳಿಗೆ ಅಣ್ಣೇಚಾಕನಹಳ್ಳಿ ಗ್ರಾಮದಲ್ಲಿ ಭಯದ ವಾತಾವರಣ ಮೂಡಿದ್ದು, ಬೋನು ಇರಿಸಿ ಚಿರತೆ ಸೆರೆ ಹಿಡಿಯುವ ಭರವಸೆಯನ್ನು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳ ತಂಡ ನೀಡಿದೆ.
bangalore
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇ*ನ್ನಿಲ್ಲ
Published
19 minutes agoon
15/01/2025By
NEWS DESK3ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ.
ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂ*ಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃ*ತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದರು. ಹಾಸ್ಯ ಪಾತ್ರಗಳಲ್ಲಿ ಸರಿಗಮ ವಿಜಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ತೆಲುಗು ವಿಜ್ಞಾನ ಸಮಿತಿ ನೀಡುವ ‘ಶ್ರೀ ಕೃಷ್ಣದೇವರಾಯ ಪುರಸ್ಕಾರ’, ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.
ಇದನ್ನೂ ಓದಿ: ಮೃ*ತಪಟ್ಟರೆಂದು ಭಾವಿಸಿ ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವ್ಯಕ್ತಿ
ಮಹಾಲಕ್ಷೀ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ನಾಳೆ ಬೆಳಿಗ್ಗೆ 10 ಗಂಟೆವರೆಗೆ ಪಾರ್ಥಿ*ವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆ ಅಂ*ತ್ಯಕ್ರಿಯೆ ನಡೆಯಲಿದೆ.
DAKSHINA KANNADA
ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
Published
33 minutes agoon
15/01/2025ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
LATEST NEWS
ಮೃ*ತಪಟ್ಟರೆಂದು ಭಾವಿಸಿ ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವ್ಯಕ್ತಿ
Published
47 minutes agoon
15/01/2025By
NEWS DESK3ಮಂಗಳೂರು/ಕಣ್ಣೂರು : ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರನ್ನು ಮನೆಗೆ ಕರೆದುಕೊಂಡು ಹೋಗುವ ವೇಳೆ ಮೃ*ತಪಟ್ಟರೆಂದು ಭಾವಿಸಿ ಕುಟುಂಬ ಸದಸ್ಯರು ಶ*ವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವಿಚಿತ್ರ ಘಟನೆ ಕಣ್ಣೂರಿನ ಎಕೆಜಿ ಸಹಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿದ್ದ ಕೂತುಪರಂಬ್ ಪಾಚ್ಚಪೋಯ್ಕ ಮಹಿಳಾ ಬ್ಯಾಂಕ್ ಬಳಿಯ ವೆಳ್ಳುವಕಂಡಿ ಪವಿತ್ರನ್ (67) ನಿಧನರಾದರೆಂದೂ ಭಾವಿಸಿ ಸೋಮವಾರ ರಾತ್ರಿ ಕಣ್ಣೂರಿನ ಎಕೆಜಿ ಸಹಕಾರಿ ಆಸ್ಪತ್ರೆಯ ಶವಗಾರಕ್ಕೆ ಕರೆದೊಯ್ಯಲಾಗಿತ್ತು.
ಅಂಬ್ಯುಲೆನ್ಸ್ ನಿಂದ ಶವಾಗಾರಕ್ಕೆ ಸ್ಥಳಾಂತರಿಸುವಾಗ ಪವಿತ್ರನ್ ತನ್ನ ಕೈ ಹಿಡಿದಿರುವುದಾಗಿ ಅಲ್ಲಿನ ಸಹಾಯಕ ತಿಳಿಸಿದ್ದಾರೆ. ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಲಾಗಿದೆ.
ಉಸಿರಾಟದ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಕಾರಣ, ಪವಿತ್ರನ್ ಅವರನ್ನು ಸೋಮವಾರ ರಾತ್ರಿ ಕಣ್ಣೂರಿನ ಮನೆಗೆ ಕೊಂಡೊಯ್ಯಲು ನಿರ್ಧರಿಸಲಾಗಿತ್ತು.
ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?
ವೆಂಟಿಲೇಟರ್ ನಿಂದ ಹೊರ ತೆಗೆದರೆ, ಜೀವ ಉಳಿಯದು ಎಂದು ವೈದ್ಯರು ತಿಳಿಸಿದ್ದರು. ಆದರೆ, ಸಂಬಂಧಿಕರು ವೆಂಟಿಲೇಟರ್ ನಿಂದ ಹೊರ ತೆಗೆದು ಮನೆಗೆ ಕರೆದೊಯ್ಯಲು ನಿರ್ಧರಿಸಿದ್ದರು. ಕಣ್ಣೂರು ತಲುಪಿದಾಗ ಅವರು ಮೃ*ತಪಟ್ಟರೆಂದು ಭಾವಿಸಿ ಶ*ವಾಗಾರಕ್ಕೆ ತಲುಪಿಸಲಾಗಿತ್ತು.
ಆದರೆ, ಪವಿತ್ರನ್ ತನ್ನ ಕೈ ಹಿಡಿದಿರುವುದಾಗಿ ಅಲ್ಲಿನ ಸಹಾಯಕ ತಿಳಿಸಿದ್ದರಿಂದ, ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಿದರು. ಪ್ರಸ್ತುತ ಎಕೆಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
LATEST NEWS
ಚಾಲೆಂಜಿಂಗ್ ಸ್ಟಾರ್ ನ್ಯೂ ಪೋಸ್ಟ್; ದರ್ಶನ್ ಅಭಿಮಾನಿಗಳಿಗೆ ದಿಲ್ಖುಷ್
ಮಹಾಕುಂಭ ಮೇಳ 2025: ಗಮನ ಸೆಳೆಯುತ್ತಿರುವ ನಾಗಾ ಸಾಧ್ವಿಗಳು
ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?
ಭಾರತೀಯ ಸೇನಾ ದಿನ : ವಿಶೇಷತೆ ಹಾಗೂ ಮಹತ್ವವೇನು ?
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ
ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS2 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- FILM6 days ago
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ