Connect with us

DAKSHINA KANNADA

ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಇರಿಸಿದ್ದ ಬಾಂಬ್‌ ಪತ್ತೆಮಾಡಿದ್ದ ಲೀನಾ ಇನ್ನಿಲ್ಲ..!

Published

on

ಮಂಗಳೂರು :  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಐಎಸ್ ಎಫ್ ಶ್ವಾನದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಬ್ ಪತ್ತೆಕಾರ್ಯದಲ್ಲಿ ನಿಪುಣತೆ ಪಡೆದಿರುವ ಲಾಬ್ರಡೋರ್ ಜಾತಿಯ ಶ್ವಾನ ಲೀನಾ ಅನಾರೋಗ್ಯದಿಂದ ಮೃತಪಟ್ಟಿದೆ.

8 ವರ್ಷದ ಲೀನಾ ಕಳೆದ ಫೆಬ್ರವರಿಯಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ನಿನ್ನೆ ಲೀನಾ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದೆ. ಕಳೆದ ವರ್ಷ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಇರಿಸಿದ್ದ ಬಾಂಬ್‌ನ್ನು ಪತ್ತೆ ಮಾಡಿದ ಹೆಗ್ಗಳಿಕೆ ಲೀನಾ ಹೊಂದಿದೆ.

ಈಗ ಅನಾರೋಗ್ಯದಿಂದ ಮೃತಪಟ್ಟ ಲೀನಾಗೆ ಸೇನಾ ಗೌರವದೊಂದಿಗೆ ವಿಮಾನ ನಿಲ್ದಾಣ ಆವರಣದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

2013 ಮೇ 5ರಂದು ಜನಿಸಿದ ಲೀನಾ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕಾರ್ಯಾಚರಣೆಯ ತರಬೇತಿ ಪಡೆದು ಮಂಗಳೂರು ವಿಮಾನ ನಿಲ್ದಾಣ ಶ್ವಾನದಳಕ್ಕೆ ಸೇರ್ಪಡೆಯಾಗಿತ್ತು.

ಮಂಗಳೂರು ವಿಮಾನ ನಿಲ್ದಾಣದಲ್ಲಿರುವ ಷ್ಟ ಶ್ವಾನದಳ ವಿಭಾಗದ ನಾಲ್ಕು ಶ್ವಾನಗಳಲ್ಲಿ ಲೀನಾ ಅತ್ಯಂತ ಚುರುಕಿನಿಂದ ಕೂಡಿತ್ತು. ದಾಖಲೆಗಳಲ್ಲಿ ಲೀನಾ ಎಂಬ ಹೆಸರಿದ್ದರೂ ಸಿಐಎಸ್‌ಎಫ್ ಸಿಬ್ಬಂದಿ ಇದನ್ನು ಎಂದೇ ಕರೆಯುತ್ತಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಬೇರೊಂದು ಶ್ವಾನ ಶ್ವಾನದಳ ಸೇರ್ಪಡೆಗಾಗಿ ವಿಭಾಗಕ್ಕೆ ರಾಂಚಿಯಲ್ಲಿ ತರಬೇತಿಯಲ್ಲಿದೆ.

2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿ ಆದಿತ್ಯ ರಾವ್ ಇರಿಸಿದ್ದ ಬಾಂಬ್‌ನ್ನು ಪತ್ತೆಮಾಡಿದ್ದು ಇದೇ ಲೀನಾ, ವಿಮಾನ ನಿಲ್ದಾಣದಲ್ಲಿ ಪ್ರತಿ ಗಂಟೆಗೊಮ್ಮೆ ಶ್ವಾನದಳದಿಂದ ಸ್ಫೋಟಕ ಪತ್ತೆ ತಪಾಸಣೆ ನಡೆಯುತ್ತಿರುತ್ತದೆ.

ಅದೇ ರೀತಿ ಅಂದು ಲೀನಾ ವಿಮಾನ ನಿಲ್ದಾಣ ಪ್ರಾಂಗಣದಲ್ಲಿ ತಪಾಸಣೆಯಲ್ಲಿ ನಿರತವಾಗಿತ್ತು. ಅಷ್ಟರಲ್ಲಿ ಬಾಕ್ಸ್ ವೊಂದರಲ್ಲಿ ಸ್ಫೋಟಕ ಇರುವುದನ್ನು ಲೀನಾ ಪತ್ತೆಮಾಡಿತ್ತು.

ಬಳಿಕ ಸ್ಫೋಟಕ ತಜ್ಞರನ್ನು ಕರೆಸಿ ಪರಿಶೀಲಿಸಿದಾ ಅದು ನೈಜ ಬಾಂಬ್ ಎಂಬುದು ಸಾಬೀತಾಗಿತ್ತು.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending