Home ದೇಶ-ವಿದೇಶ ಮೇ 25 ರಿಂದ ಮಂಗಳೂರಿನಲ್ಲಿ ಹಾರಾಟ ನಡೆಸಲಿವೆ ದೇಶಿಯ ಲೋಹದ ಹಕ್ಕಿಗಳು

ಮೇ 25 ರಿಂದ ಮಂಗಳೂರಿನಲ್ಲಿ ಹಾರಾಟ ನಡೆಸಲಿವೆ ದೇಶಿಯ ಲೋಹದ ಹಕ್ಕಿಗಳು

ಮೇ 25 ರಿಂದ ಮಂಗಳೂರಿನಲ್ಲಿ ಹಾರಾಟ ನಡೆಸಲಿವೆ ದೇಶಿಯ ಲೋಹದ ಹಕ್ಕಿಗಳು

ಮಂಗಳೂರು: ಕೋವಿಡ್-19 ದಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ಮತ್ತೆ ಆರಂಭವಾಗಲಿದೆ.

ದೇಶೀಯ ವಿಮಾನಯಾನ ಆರಂಭಿಸಲು ವಿಮಾನಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ (ಮೇ.25) ಮಂಗಳೂರಿನಿಂದ ಬೆಂಗಳೂರು, ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭವಾಗಲಿದೆ.

ಮೇ 25 ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದೆ.

ಸ್ಪೈಸ್ ಜೆಟ್ ​​​ನ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ. ಏರ್ ಇಂಡಿಯಾ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ‌.

ಬೆಂಗಳೂರಿನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30ಕ್ಕೆ, ರಾತ್ರಿ 7 ಗಂಟೆಗೆ ಮತ್ತು ಇಂಡಿಗೋ ವಿಮಾನ ಸಂಜೆ 5.55ಕ್ಕೆ,

ಮಂಗಳೂರಿನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 10.20ಕ್ಕೆ ಹಾಗೂ ರಾತ್ರಿ 9.35 ಹಾಗೂ ಇಂಡಿಗೋ ಸಂಜೆ 7.30ಕ್ಕೆ ಸಂಚರಿಸಲಿದೆ.

ಮುಂಬೈನಿಂದ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 7.05ಕ್ಕೆ, ಇಂಡಿಗೋ ಬೆಳಗ್ಗೆ 9.30ಕ್ಕೆ ಮಂಗಳೂರಿಗೆ ಹೊರಡಲಿವೆ.

ಮಂಗಳೂರಿನಿಂದ ಮುಂಬೈಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 9.05ಕ್ಕೆ ಇಂಡಿಗೋ 11.40 ಕ್ಕೆ ತೆರಳಲಿದೆ.

ಚೆನ್ನೈನಿಂದ ಮಂಗಳೂರಿಗೆ ಸಂಜೆ 5.45ಕ್ಕೆ ಹಾಗೂ ಮಂಗಳೂರಿನಿಂದ ಚೆನ್ನೈಗೆ ರಾತ್ರಿ 8.05ಕ್ಕೆ ಇಂಡಿಗೋ ವಿಮಾನ ಸಂಚರಿಸಲಿದೆ ಎಂದು ಇಂಡಿಗೋ ಮತ್ತು ಸ್ಪೈಸ್ ಜೆಟ್ ಮಾಹಿತಿ ನೀಡಿದೆ.

- Advertisment -

RECENT NEWS

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ...

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ ಬೆಂಗಳೂರು: ಹಲವಾರು ದಿಟ್ಟ ಕ್ರಮಗಳಿಂದ ಸರಕಾರವನ್ನು ಹಲವು ಬಾರಿ ಎದುರು ಹಾಕಿಕೊಂಡಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು...