Connect with us

DAKSHINA KANNADA

‘ದುಶ್ಚಟಗಳಿಗೆ ಬಲಿಯಾಗಬೇಡಿ’ ಮಂಗಳೂರು ಪೊಲೀಸ್ ಕಮಿಷನರ್ ವಿದ್ಯಾರ್ಥಿಗಳಿಗೆ ಕಿವಿಮಾತು

Published

on

ಮಂಗಳೂರು: ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವು ವಿವೇಕ ಸಪ್ತಾಹದ ಪ್ರಯುಕ್ತ ಇಂದು ಕಾಲೇಜಿನ ಸಭಾಂಗಣದಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ನೆರವೇರಿಸಿದರು.

ನಂತರ ಮಾತನಾಡಿದ ಅವರು “ದುಶ್ಚಟಗಳಿಗೆ ಬಲಿಯಾಗದಂತೆ ತಮ್ಮನ್ನು ತಾವು ನಿಯಂತ್ರಿಸಿಕೊಳ್ಳಬೇಕು.

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಕಲಿಯಲೇಬೇಕು ಅದಕ್ಕೆ ಯಾವುದೇ ರೀತಿಯ ಪರ್ಯಾಯ ಮಾರ್ಗಗಳಿಲ್ಲ.

ಆದರೆ ಈ ಮೂರು ವರ್ಷದ ಪದವಿ ಶಿಕ್ಷಣ ಕೇವಲ ಮೂರೇ ವರ್ಷಕ್ಕೆ ಮುಗಿದು ಹೋಗದೆ ವ್ಯಕ್ತಿತ್ವ ವಿಕಸನಕ್ಕೆ ಒಂದು ಮುನ್ನುಡಿಯಾಗಬೇಕು. ಅದರ ಜೊತೆಗೆ ಕ್ರೀಡೆ, ಸಾಂಸ್ಕೃತಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಮನದಟ್ಟು ಮಾಡಿದರು.

ಇನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಮಾತನಾಡಿ “ಕ್ಷಣದ ಸುಖಕ್ಕೆ ಬಲಿಯಾಗಿ ಮಾದಕ ದ್ರವ್ಯದ ವ್ಯಾಸನಿಗಳಾಗಿ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ.

ವಿವೇಕಾನಂದರು ರಾಷ್ಟ್ರದ ಶಕ್ತಿಯೇ ಯುವಕರು ಹೇಳಿದ್ದರು. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಗೊಂಡು ಮಾದಕ ವಸ್ತುಗಳ ದಾಸರಾಗದೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಿ.

ಆ ಮುಖೇನ ಉತ್ತಮ ವ್ಯಕ್ತಿತ್ವ ಬೆಳೆಯಲಿ, ಚಾರಿತ್ರ್ಯವಂತರಾಗಿ. ಮಾನವೀಯತೆ ಸಂಬಂಧ ಬೆಳೆಯಲಿ” ಎಂದು ಅವರು ಹೇಳಿದರು.

ಕೆನರಾ ಸಮೂಹ ಸಂಸ್ಥೆಯ ಟ್ರಸ್ಟಿ ಪುರುಷೋತ್ತಮ, ಕಾಲೇಜಿನ ರಾ. ಸೆ.ಯೋಜನಾಧಿಕಾರಿಗಳಾದ ಸೀಮಾ ಪ್ರಭು, ವಾಣಿ ಯು. ಎಸ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಷಣಕಾರ ಗಣೇಶ್ ನಾಯಕ್ ಮುಲ್ಕಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ.ವಿ ವಹಿಸಿದ್ದರು..

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending