ಬಳ್ಳಾರಿ: ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಂಡು ಮೆರೆಯುತ್ತಿದ್ದಾರೆ. ಯಾರೇ ಕಾನೂನು ಕ್ರಮ ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ.
ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ ಎಂದು ಗಲಭೆಕೋರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್‌ನಿಂದ ಗಲಾಟೆ ಪ್ರಕರಣದ ಬಗ್ಗೆ ಹೊಸಪೇಟೆಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ‘ಪೊಲೀಸ್ ಠಾಣೆ ಬಳಿ ಗಲಾಟೆ ಮಾಡಿದ್ದು ಅಕ್ಷಮ್ಯ ಅಪರಾಧ.
ಪೊಲೀಸರು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಇದಕ್ಕೆ ಮತ್ತೆ ರಾಜಕೀಯ ಬಣ್ಣವನ್ನ ಬಳಿಯುವುದು ಬೇಡ. ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.
ಹುಬ್ಬಳ್ಳಿ ನಡೆದಿರುವ ಘಟನೆ ಮತ್ತೆ ಎಲ್ಲೂ ನಡೆಯಬಾರದು. ಕಾನೂನು ಸುವ್ಯವಸ್ಥೆ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ‘ಎಂದು ಹೇಳಿದರು.