Connect with us

DAKSHINA KANNADA

ಮಂಗಳೂರು ಏರ್‌ಪೋರ್ಟ್‌ನಲ್ಲಿ ಸೊತ್ತು ಕಳೆದುಕೊಂಡರೆ ಚಿಂತೆ ಬೇಡ-ವಿಶೇಷ ವ್ಯವಸ್ಥೆ

Published

on

ಮಂಗಳೂರು: ಯಾವುದಾದರೂ ವಸ್ತುಗಳನ್ನು ಕಳೆದುಕೊಂಡರೆ ಅದನ್ನು ಮರಳಿ ಪಡೆಯಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.


ಇದಕ್ಕೋಸ್ಕರ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಸೊತ್ತುಗಳನ್ನು ಕಳೆದುಕೊಂಡವರು ಅದರ ದಾಖಲೆ ಪತ್ರಗಳನ್ನು ತೋರಿಸಿ, ಇಲ್ಲವೇ ಗುರುತು ತಿಳಿಸಿ ಅದನ್ನು ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಆಧಾರ್ ಕಾರ್ಡ್‌ಗಳಿಂದ ಹಿಡಿದು ಸೊಳ್ಳೆ ಬ್ಯಾಟ್‌ಗಳವರೆಗೆ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಸಿಕ್ಕಿದ್ದು, ವಾರಸುದಾರರಿಗೆ ತಲುಪಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಪ್ರತಿ ತಿಂಗಳು ವಿವಿಧ ಬಗೆಯ ಸರಾಸರಿ 150 ವಸ್ತುಗಳು ಪತ್ತೆಯಾಗುತ್ತದೆ. ಯಾವುದಾದರೂ ಸೊತ್ತು ಸಿಕ್ಕಿದವರು ಅದನ್ನು ತಂದು ಟರ್ಮಿನಲ್ ಮ್ಯಾನೇಜರ್‌ ಕಚೇರಿಯಲ್ಲಿ ನೀಡುತ್ತಾರೆ.

ಬಳಿಕ ಅಲ್ಲಿ ಸಿಕ್ಕಿದ ಸೊತ್ತಿದ ಬಗ್ಗೆ ರಿಜಿಸ್ಟರ್‌ನಲ್ಲಿ ನಮೂದಿಸಲಾಗುತ್ತದೆ. ಸೊತ್ತನ್ನು ಕಳೆದುಕೊಂಡ ವ್ಯಕ್ತಿಯು ಕಚೇರಿ ಸಮಯದಲ್ಲಿ ಟರ್ಮಿನಲ್ ಮ್ಯಾನೇಜರ್‌ನ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಕೌಂಟರ್ ತೆರೆದಿರಲಿದ್ದು, ಸೊತ್ತು ಕಳೆದುಕೊಂಡವರು ಈ ಅವಧಿಯಲ್ಲಿ ಬಂದು ಪಡೆದುಕೊಳ್ಳಬಹುದು.

Click to comment

Leave a Reply

Your email address will not be published. Required fields are marked *

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್‌ಗೆ ಗಡಿಪಾರು..!

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending