Connect with us

    LATEST NEWS

    ಡಬಲ್‌ ಡೆಕ್ಕರ್ ಬಸ್‌ ಹಾಗೂ ಕಾರು ಅಪಘಾ*ತ; 7 ಮಂದಿ ಸಾ*ವು

    Published

    on

    ಉತ್ತರ ಪ್ರದೇಶ/ಮಂಗಳೂರು:  ಉತ್ತರಪ್ರದೇಶದಲ್ಲಿ ಕಾರು ಹಾಗೂ ಡಬಲ್ ಡೆಕ್ಕರ್ ಬಸ್‌ ನಡುವೆ ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಭೀಕರ ಅಪಘಾತದಿಂದ 20 ರಿಂದ 25 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆಗ್ರೋದಿಂದ ಲಕ್ನೋ ಕಡೆ ಬರುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೈಟ್ ಡಿವೈಡರ್ ಅನ್ನು ದಾಟಿ ರಾಂಗ್‌ ಸೈಡ್‌ನಲ್ಲಿ ಬಂದಿದೆ ಎಂದು ವರದಿಯಾಗಿದೆ.

    ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ, ವಿಕೃ*ತಿ ಮೆರೆದ ಪತಿ

    ಈ ವೇಳೆ ಕಾರು ಡಬ್ಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಡಿಕ್ಕಿ ಹೊಡೆದಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ಎಕ್ಸ್‌ಪ್ರೆಸ್‌ವೇಯಿಂದ ಬಸ್ಸು 20 ಅಡಿ ಕೆಳಗೆ ಬಿದ್ದಿದೆ. ಬಸ್‌ನಲ್ಲಿ ಒಟ್ಟು 60 ಜನರಿದ್ದು, ಏಳು ಮಂದಿ ಘಟನೆಯಿಂದ ಸಾವನ್ನಪ್ಪಿದ್ದಾರೆ. ಸುಮಾರು 20 ರಿಂದ 25 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಮೂವರು ಹಾಗೂ ಬಸ್ಸಿನಲ್ಲಿದ್ದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

    bangalore

    ಬಸ್ ಚಾಲನೆ ವೇಳೆಯೇ ಚಾಲಕನಿಗೆ ಹೃದಯಘಾತ,; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಜೀವ !

    Published

    on

    ಮಂಗಳೂರು/ಬೆಂಗಳೂರು: ಸರ್ಕಾರಿ ಬಸ್ ಚಾಲಕನಿಗೆ ಬಸ್ ಚಾಲನೆ ವೇಳೆಯೇ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಆ ಸಮಯದಲ್ಲಿ ಪೊಲೀಸರು ತೋರಿದ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 45 ಜನರ ಜೀವ ಉಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


    BMTC ಬಸ್ ಡ್ರೈವರ್ ವೀರೇಶ್ ಅವರಿಗೆ ಗುರುವಾರ(ಸೆ.19) ಮಧ್ಯಾಹ್ನ ಶಾಂತಿನಗರದ ಡಬಲ್ ರೋಡ್ ಬಳಿ ಬಸ್ ರನ್ನಿಂಗ್ನಲ್ಲಿದ್ದ ವೇಳೆ ಏಕಾಏಕಿ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ವೇಗವಾಗಿ ಓಡುತ್ತಿದ್ದ ಬಸ್ ನಿಧಾನವಾಗ ತೊಡಗಿದ ವೇಳೆ ಅನುಮಾನಗೊಂಡ ಹಲಸೂರು ಟ್ರಾಫಿಕ್ ಪೊಲೀಸ್ ಎಎಸ್ಐ ಆರ್ . ರಘುಕುಮಾರ್ ಬಸ್ ಬಳಿ ಓಡಿ ಬಂದು ನೋಡಿದಾಗ ಎದೆಗೆ ಕೈ ಹಿಡಿದು ಬಸ್ ಚಾಲಕ ಒಂದು ಕಡೆಗೆ ವಾಲಿದ್ದನು.
    ಹಾರ್ಟ್ ಅಟ್ಯಾಕ್ ಆಗಿರುವುದನ್ನ ಗಮನಕ್ಕೆ ಬಂದಿದ್ದು, ಟ್ರಾಫಿಕ್ ಎಎಸ್ಐ ತಕ್ಷಣ ಹ್ಯಾಂಡ್ ಬ್ರೇಕ್ ಹಾಕಿ ಚಾಲಕನನ್ನು ಕೆಳಗೆ ಇಳಿಸಿ ಆಂಬುಲೆನ್ಸ್ಗೂ ಕಾಯದೆ, ಅಶೋಕ ನಗರ ಟ್ರಾಫಿಕ್ ಸಿಬ್ಬಂದಿ ಪ್ರಸನ್ನಕುಮಾರ್ ಸಹಾಯದಿಂದ ಬಸ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರು.
    ಅದೃಷ್ಟವಶಾತ್, ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದರಿಂದ ಚಾಲಕ ವೀರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಪೊಲೀಸರ ಸಮಯಪ್ರಜ್ಞೆ 45 ಜನರ ಪ್ರಾಣವನ್ನೂ ಉಳಿಸಿದೆ.

    Continue Reading

    BELTHANGADY

    ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ

    Published

    on

    ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.


    ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
    ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

    Published

    on

    ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್‌ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.

    ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್‌.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.

     

    Continue Reading

    LATEST NEWS

    Trending